ತುಮಕೂರಿನಲ್ಲಿ 2 ಲಕ್ಷ ಗಿಡ ನೆಡುವ ಗುರಿ


Team Udayavani, Jun 10, 2019, 12:47 PM IST

tk-tdy-3…

ತುಮಕೂರು ನಗರದ 15ನೇ ವಾರ್ಡ್‌ನ ಸಿಎಸ್‌ಐ ಬಡಾವಣೆಯಲ್ಲಿ ಗಿಡ ನೆಡುವ ಕಾರ್ಯಕ್ರಮಕ್ಕೆ ಸಂಸದ ಜಿ.ಎಸ್‌.ಬಸವರಾಜ್‌ ಚಾಲನೆ ನೀಡಿದರು.

ತುಮಕೂರು: ಪರಿಸರ ದಿನಾಚರಣೆ ಎಂಬುದು ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು. ನಮ್ಮ ಉಸಿರಾಟಕ್ಕೆ ಅನುಕೂಲವಾಗಲು ಹೆಚ್ಚೆಚ್ಚು ಗಿಡ ಮರ ಬೆಳೆಸಬೇಕು ಎಂದು ಸಂಸದ ಜಿ.ಎಸ್‌.ಬಸವರಾಜು ತಿಳಿಸಿದರು.

ನಗರದ 15ನೇ ವಾರ್ಡ್‌ನ ಸಿಎಸ್‌ಐ ಬಡಾವಣೆಯಲ್ಲಿ ಗಿಡನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ರಾಷ್ಟ್ರದಾದ್ಯಂತ ಗಿಡಗಳನ್ನು ನೆಡುವ ಕಾರ್ಯ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ತುಮಕೂರಿನಲ್ಲಿ ಸುಮಾರು 2 ಲಕ್ಷ ಗಿಡ ನೆಡುವ ಗುರಿ ಹೊಂದಿದ್ದೇವೆ. ಇದೀಗ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದ್ದು, ನಗರದಲ್ಲಿ ಸುಮಾರು 30 ಸಾವಿರಕ್ಕೂ ಹೆಚ್ಚು ಗಿಡ ನೆಡಲಾಗಿದೆ ಎಂದರು.

ಹಣ್ಣಿ ಗಿಡ ಬೆಳೆಸಿ: ನಗರದಲ್ಲಿ ವಿವಿಧ ರೀತಿಯ ಹಣ್ಣಿ ಗಿಡಗಳನ್ನು ಬೆಳೆಸಬೇಕು. ಅರಣ್ಯ ಇಲಾಖೆಯವರು ಗಮನಹರಿಸಿ ಸಾರ್ವಜನಿಕರಿಗೆ ಸಹಕರಿಸಬೇಕು. ಹತ್ತಿಗಿಡ, ನೇರಳೆಗಿಡ, ಅರಳೇಮರ, ಹೊಂಗೆಮರದ ಗಿಡಗಳನ್ನು ನೆಟ್ಟರೆ ಅವು ಹೆಮ್ಮರವಾಗಿ ಬೆಳೆದಾಗ ಪರಿಸರ ಸಮತೋಲನ ಉತ್ತಮವಾಗುತ್ತದೆ. ಇವುಗಳಿಂದ ಉತ್ತಮ ಗಾಳಿ, ಉತ್ತಮ ಮಳೆ ಬರುವುದಕ್ಕೆ ಅನುಕೂಲವಾಗುತ್ತದೆ ಎಂದು ತಿಳಿಸಿದರು.

ವೃಕ್ಷಮಿತ್ರ ಸಿದ್ದಪ್ಪನವರು ತಮ್ಮ ಖರ್ಚಿನಲ್ಲಿ ಬೇವಿನ ಮರದ ಗಿಡಗಳನ್ನು ನೆಟ್ಟು ದಿನಂಪ್ರತಿ ಅವರೇ ನೀರು ಹಾಕುವ ಮೂಲಕ ಪರಿಸರ ಉಳಿಸುವ ಕಾರ್ಯ ಮಾಡುತ್ತಿದ್ದಾರೆ. ಗಿಡಮರಗಳನ್ನು ಬೆಳೆಸುವ ಪ್ರವೃತ್ತಿ ಬೆಳೆಸಿಕೊಳ್ಳಿ ಎಂದು ಮನವಿ ಮಾಡಿದರು.

ಗಿಡ ನಟ್ಟರೆ ಸಾಲದು: 15ನೇ ವಾರ್ಡ್‌ ಪಾಲಿಕೆ ಸದಸ್ಯೆ ಗಿರಿಜಾ ಧನಿಯಾ ಕುಮಾರ್‌ ಮಾತನಾಡಿ, 15ನೇ ವಾರ್ಡ್‌ನಲ್ಲಿ 2000ಗಿಡಗಳನ್ನು ನೆಡುವ ಕೆಲಸಕ್ಕೆ ಚಾಲನೆ ನೀಡಲಾಗಿದ್ದು, ಗಿಡಗಳನ್ನು ನೆಟ್ಟು ಬಿಟ್ಟರೆ ಸಾಲದು ಅದನ್ನು ಪೋಷಣೆ ಮಾಡಬೇಕು. ಆ ಜವಾಬ್ದಾರಿಯನ್ನು ಸ್ಥಳೀಯ ನಾಗರಿಕರೆ ವಹಿಸಿಕೊಳ್ಳಬೇಕು. ಆಗ ಮಾತ್ರ ಪರಿಸರ ರಕ್ಷಣೆ ಮಾಡಿದಂತಾಗುತ್ತದೆ ಎಂದು ತಿಳಿಸಿದರು.

ಸಂಸದರನ್ನು ಸ್ಥಳೀಯ ನಾಗರಿಕರು ಸನ್ಮಾನ ಮಾಡಿ ಗೌರವಿಸಿದರು. ವಾರ್ಡ್‌ನ ಮುಖಂಡರಾದ ಧನಿಯಾ ಕುಮಾರ್‌, ಭರತೇಶ್‌ ಜೈನ್‌, ಕಿರಣ್‌, ಹೊನ್ನುಡಿಕೆ ಲೋಕೇಶ್‌, ಅರಳೂರು ಕುಮಾರ್‌, ಜಗನ್‌ಜ್ಯೋತಿ ಸಿದ್ದರಾಮಣ್ಣ ಮತ್ತಿತರರು ಇದ್ದರು.

ಟಾಪ್ ನ್ಯೂಸ್

BJP FLAG

Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ

CM-Office

By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ

1-ree

Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್

mamata

West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

BJP FLAG

Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ

7

Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.