ಸೂಪರ್‌ಸೀಡ್‌ಗೆ ತಡೆಯಾಜ್ಞೆ: ಮತ್ತೆ ನನಗೆ ಅಧಿಕಾರ
ಮೊದಲಿನಂತೆಯೇ ಕಾರ್ಯನಿರ್ವಹಿಸಲಿದೆ ಡಿಸಿಸಿ ಬ್ಯಾಂಕ್ • ಮಾಜಿ ಶಾಸಕ ರಾಜಣ್ಣ ಹೇಳಿಕೆ
Team Udayavani, Jul 28, 2019, 3:22 PM IST
ಬಿಜೆಪಿ ಸರ್ಕಾರ ರಚನೆ ಹಾಗೂ ಡಿಸಿಸಿ ಬ್ಯಾಂಕ್ ಸೂಪರ್‌ಸೀಡ್‌ಗೆ ತಡೆಯಾಜ್ಞೆ ಹೊರಬಂದ ಹಿನ್ನೆಲೆಯಲ್ಲಿ ಕೆ.ಎನ್.ರಾಜಣ್ಣ ಅಭಿಮಾನಿಗಳು ತುಮಕೂರು ನಗರದ ಟೌನ್‌ಹಾಲ್ ವೃತ್ತದಲ್ಲಿ ಶನಿವಾರ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.
ತುಮಕೂರು: ತುಮಕೂರು ಡಿಸಿಸಿ ಬ್ಯಾಂಕ್ ಸೂಪರ್ ಸೀಡ್‌ಗೆ ನ್ಯಾಯಾಲಯ ತಡೆಯಾಜ್ಞೆ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮತ್ತೆ ನನಗೆ ಅಧಿಕಾರ ಹಸ್ತಾಂತರಿಸಿದ್ದಾರೆ ಎಂದು ಮಾಜಿ ಶಾಸಕ ಕೆ.ಎನ್.ರಾಜಣ್ಣ ತಿಳಿಸಿದರು.
ನಗರದಲ್ಲಿ ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಸಿಸಿ ಬ್ಯಾಂಕ್ ಸೂಪರ್ ಸೀಡ್ ಮಾಡಿರುವುದು ಇದು ಮೊದಲಲ್ಲ. ಈ ಹಿಂದೆಯೂ ಇದೇ ರೀತಿ ಮಾಡಿದ್ದರು. 2003ರಲ್ಲಿ ಡಿಸಿಸಿ ಬ್ಯಾಂಕ್ ಸೂಪರ್ ಸೀಡ್ ಆಗಿತ್ತು. ಆ ಸಂದರ್ಭದಲ್ಲೂ ನಾನೇ ಅಧ್ಯಕ್ಷನಾಗಿದ್ದೆ ಎಂದು ಹೇಳಿದರು.
ಸಣ್ಣಪುಟ್ಟ ಲೋಪ ಆಗಿರಬಹುದು: ಈಗ ದುರುದ್ದೇಶ ಪೂರಿತವಾಗಿ ಬ್ಯಾಂಕ್ ಸೂಪರ್ ಸೀಡ್ ಮಾಡಿದ್ದರು. ನ್ಯಾಯಾಲಯ ತಡೆಯಾಜ್ಞೆ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ನನಗೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಧಿಕಾರ ಮತ್ತೆ ನೀಡಿದ್ದಾರೆ. ಡಿಸಿಸಿ ಬ್ಯಾಂಕ್ ಮೊದಲು ಹೇಗೆ ಕಾರ್ಯನಿರ್ವಹಿಸುತಿತ್ತೋ ಹಾಗೆಯೇ ಮುಂದುವರೆಯುತ್ತದೆ. ಯಾವುದೇ ಬದಲಾವಣೆಯಿಲ್ಲ. ಗ್ರಾಹಕರಿಗೆ ಅನುಕೂಲ ಮಾಡುವ ಸಲುವಾಗಿ ಸಣ್ಣಪುಟ್ಟ ಲೋಪ ಆಗಿರುತ್ತದೆ ಎಂದು ಹೇಳಿದರು.
ಸರ್ಕಾರದ ಠೇವಣಿ ಇಲ್ಲ: ಲೋಪ ಇಲ್ಲದಂತೆ 21 ಜಿಲ್ಲೆಗಳಲ್ಲಿ ಬ್ಯಾಂಕ್ ನಡೆಯುತ್ತಿಲ್ಲ. ಸಣ್ಣ ಪುಟ್ಟ ಲೊಪ ನಡೆಯುತ್ತದೆ. ಆದರೆ ಹಣಕಾಸಿನ ಲೋಪ ಆಗಿದ್ದರೆ ಅದನ್ನ ಪ್ರಶ್ನೆ ಮಾಡಿದರೇ ಒಪ್ಪಿಕೊಳ್ತೇನೆ. ಆಡಳಿತದಲ್ಲಿ ಹಿಂದೆ ಮುಂದೆ ವ್ಯತ್ಯಾಸ ಆಗಿರಬಹುದು.
ಪಕ್ಷಾತೀತ ವಾಗಿ ಹಲವು ನಾಯಕರು ಬ್ಯಾಂಕ್ ಲೋನ್ ಪಡೆದು ಬಡ್ಡಿ ಕಟ್ಟಿದ್ದಾರೆ. ಮಾತನಾಡುವ ಯಾರದ್ದೂ ಇಲ್ಲಿ ಬಂಡವಾಳ ಇಲ್ಲಾ. ಬಡವರು ಹಣ ಇಟ್ಟಿದ್ದಾರೆ. ಸರ್ಕಾರದ್ದೂ ಇಲ್ಲಿ ಯಾವುದೇ ಷೇರು ಮೊತ್ತ, ಠೇವಣಿ ಇಲ್ಲ. ಜನ ನನ್ನನ್ನ ನೋಡಿ ಒಂದು ಸಾವಿರ ಕೋಟಿ ರೂ. ಠೇವಣಿ ಇಟ್ಟಿದ್ದಾರೆ ಎಂದು ಮಾಜಿ ಶಾಸಕ ಕೆ.ಎನ್.ರಾಜಣ್ಣ ಹೇಳಿದರು.
ಬಿಜೆಪಿ ಸರ್ಕಾರ ರಚನೆ ಹಾಗೂ ಡಿಸಿಸಿ ಬ್ಯಾಂಕ್ ಸೂಪರ್‌ಸೀಡ್‌ಗೆ ತಡೆಯಾಜ್ಞೆ ಹೊರಬಂದ ಹಿನ್ನೆಲೆಯಲ್ಲಿ ಕೆ.ಎನ್.ರಾಜಣ್ಣ ಅಭಿಮಾನಿಗಳು ನಗರದ ಟೌನ್‌ಹಾಲ್ನಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಶನಿವಾರ ವಿಜಯೋತ್ಸವ ಆಚರಿಸಿದರು.
ಊರುಕೆರೆ ವಿಎಸ್‌ಎಸ್‌ಎನ್ ಅಧ್ಯಕ್ಷ ಷಣ್ಮುಖ ಮಾತನಾಡಿ, ಜಿಲ್ಲೆಯ ಅಭಿವೃದ್ಧಿಗೆ ಮಾಜಿ ಶಾಸಕ ಕೆ.ಎನ್.ರಾಜಣ್ಣ ಸಾಕಷ್ಟು ಶ್ರಮಿಸಿದ್ದಾರೆ. ಬ್ಯಾಂಕ್‌ನಿಂದ ಎಲ್ಲ ವರ್ಗದ ಜನರಿಗೂ ಅನುಕೂಲ ಮಾಡಿದ್ದಾರೆ. ಅಂತಹವರಿಗೆ ಬ್ಯಾಂಕ್ ಸೂಪರ್‌ಸೀಡ್ ಮಾಡುವ ಮೂಲಕ ತೊಂದರೆ ನೀಡಿದರು. ತೊಂದರೆ ನೀಡಿದ ವರೇ ಇಂದು ಅಧಿಕಾರ ಕಳೆದುಕೊಂಡಿದ್ದಾರೆ, ರಾಜಣ್ಣ ನುಡಿದಂತೆ ವಾರದೊಳಗೆ ಡಿಸಿಸಿ ಬ್ಯಾಂಕ್ ಅಧಿಕಾರ ಮರಳಿ ಪಡೆದಿದ್ದಾರೆ ಎಂದು ಹೇಳಿದರು.
ಸುವರ್ಣ ಯುಗ ಪ್ರಾರಂಭ: ಝೀರೋ ಟ್ರಾಫಿಕ್‌ನಿಂದ ಜಿಲ್ಲೆಯ ಜನರು ಬೇಸತ್ತಿದ್ದರು. ಸರ್ಕಾರ ಬಿದ್ದು ಝೀರೋ ಟ್ರಾಫಿಕ್ ಕಳೆದುಕೊಂಡಿರುವುದರಿಂದ ಜಿಲ್ಲೆಗೆ ಒಳಿತಾಗಿದೆ ಎಂದು ಪರಮೇಶ್ವರ್ ಹೆಸರೆತ್ತದೆ ಷಣ್ಮುಖ ಟೀಕಿಸಿದರು.
ಜಿಲ್ಲೆಯ ಅಭಿವೃದ್ಧಿಗೆ ರಾಜಣ್ಣ ಅಗತ್ಯವಾಗಿದ್ದಾರೆ. ಬಿಜೆಪಿ ಸರ್ಕಾರ ರಚನೆಯಾದ ಮೇಲೆ ಜಿಲ್ಲೆಗೆ ಸುವರ್ಣ ಯುಗ ಪ್ರಾರಂಭವಾಗಿದ್ದು, ಝೀರೋ ಟ್ರಾಫಿಕ್ ಮುಕ್ತಗೊಂಡಿರುವುದು ಹೆಚ್ಚು ಸಂತಸವಾಗಿದೆ ಎಂದು ಹೇಳಿದರು.
ಕುಲಗೆಟ್ಟ ಸಮ್ಮಿಶ್ರ ಸರ್ಕಾರ ಬಿದ್ದು, ಝೀರೋ ಟ್ರಾಫಿಕ್ ಮುಕ್ತಗೊಂಡಿರುವುದು ತುಮಕೂರು ಜನರಿಗೆ ನೆಮ್ಮದಿ ಉಂಟು ಮಾಡಿದ್ದು, ಝೀರೋ ಟ್ರಾಫಿಕ್‌ನಿಂದ ತೊಂದರೆಗೆ ಒಳಗಾಗಿದ್ದ ರೋಗಿಗಳು, ಪೊಲೀಸರು, ಶಾಲಾ ಮಕ್ಕಳು ನಿಟ್ಟುಸಿರು ಬಿಟ್ಟಿದ್ದಾರೆ ಎಂದು ಬೆಳ್ಳಾವಿ ವಿಎಸ್‌ಎಸ್‌ಎನ್ ಅಧ್ಯಕ್ಷ ಉಮೇಶ್ ಅಭಿಪ್ರಾಯ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ಸಹಕಾರ ಕ್ಷೇತ್ರ ಉಳಿಯಲು ಕಾರಣವಾಗಿರುವ ಕೆ.ಎನ್.ರಾಜಣ್ಣ ಕಾರಣ. ದಕ್ಷ ಆಡಳಿತದಿಂದ ಬ್ಯಾಂಕ್ ಅಭಿವೃದ್ಧಿ ಕಂಡಿದೆ. ಡಿಸಿಸಿ ಬ್ಯಾಂಕ್ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನೂ ಬ್ಯಾಂಕಿಂಗ್ ವ್ಯವಹಾರ ಮಾಡುವಲ್ಲಿ ರಾಜಣ್ಣ ಪಾತ್ರ ದೊಡ್ಡದಿದೆ. ಅಂತಹ ಅಧ್ಯಕ್ಷರನ್ನು ಸೂಪರ್‌ಸೀಡ್ ಮಾಡುವ ಮೂಲಕ ಕೆಟ್ಟ ರಾಜಕಾರಣ ಮಾಡಿದವರ ವಿರುದ್ಧ ತಡೆಯಾಜ್ಞೆ ಸಿಕ್ಕಿದೆ ಎಂದು ಹೇಳಿದರು.
ಟಿಎಂಪಿಎಸ್ ನಿರ್ದೇಶಕ ಸುರೇಶ್, ಮುಖಂಡರಾದ ಮಹೇಶ್‌ಬಾಬು, ರಫೀವುಲ್ಲಾ, ಪಂಚಾಕ್ಷರಯ್ಯ, ಡಾ.ನಾಗಾರಾಜು, ಶಬ್ಬೀರ್ ಅಹ್ಮದ್, ಆಟೋ ರಾಜು, ಕೆಂಪಹನುಮಯ್ಯ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.