ಹಳೇ ಪಿಂಚಣಿ ಯೋಜನೆ ಮತ್ತೆ ಜಾರಿಗೆ ತರಲೇಬೇಕು


Team Udayavani, Oct 23, 2022, 3:48 PM IST

ಹಳೇ ಪಿಂಚಣಿ ಯೋಜನೆ ಮತ್ತೆ ಜಾರಿಗೆ ತರಲೇಬೇಕು

ಮಧುಗಿರಿ: ಸರ್ಕಾರಿ ನೌಕರರಿಗೆ ವೃದ್ಧಾಪ್ಯದಲ್ಲಿ ಆಸರೆಯಾಗಲು ಹಳೇ ಪಿಂಚಣಿ ಯೋಜನೆ ಮರು ಜಾರಿ ಆಗಲೇಬೇಕೆಂದು ನಿಶ್ಚಿತ ಪಿಂಚಣಿ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ, ಸರ್ಕಾರ ಅಧೀನ ಕಾರ್ಯದರ್ಶಿ ಶಾಂತರಾಮ್‌ ಸರ್ಕಾರವನ್ನು ಒತ್ತಾಯಿಸಿದರು.

ಪಟ್ಟಣದ ಬೆಸ್ಕಾಂ ಕಚೇರಿಯ ಮುಂಭಾಗ ಸಭೆ ಸೇರಿದ್ದ ಸರ್ಕಾರಿ ನೌಕರರನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ವಿವಿಧ ಇಲಾಖೆಗಳಲ್ಲಿ 2.80 ಲಕ್ಷ ಉದ್ಯೋಗ ಖಾಲಿ ಇದ್ದು, ಇರುವ ನೌಕರರ ಮೇಲೆ ಅತೀವ ಒತ್ತಡ ಬಿದ್ದಿದೆ ಎಂದು ಹೇಳಿದರು. ಕೇವಲ 5 ವರ್ಷ ಅಧಿಕಾರದಲ್ಲಿರುವ ಶಾಸಕರು, ಸಚಿವರಿಗೇಕೆ ಪಿಂಚಣಿ ಎಂದು ನಾವು ಕೇಳಲ್ಲ. ಒಂದೇ ಕೆಲಸ ಎಂದು ಆದೇಶ ನೀಡುವ ಸರ್ಕಾರ, ಹತ್ತಾರು ಜವಾಬ್ದಾರಿ ನೀಡುತ್ತದೆ. ಹೀಗಿದ್ದರೂ 35 ವರ್ಷ ಸರ್ಕಾರದ ಮಕ್ಕಳಂತೆ ಜನರ ಕೆಲಸ ಮಾಡುತ್ತೇವೆ. ನಮಗೆ ಮುಪ್ಪಿನ ಕಾಲದಲ್ಲಿ, ಇಂದಿನ ಬೆಲೆ ಏರಿಕೆ ಸ್ಥಿತಿಯಲ್ಲಿ ಪಿಂಚಣಿ ಇಲ್ಲವಾದ್ರೆ ಬದುಕು ಬೀದಿಗೆ ಬೀಳುತ್ತದೆ ಎಂದು ಹೇಳಿದರು.

ಹೋರಾಟದಲ್ಲಿ ಭಾಗಿಯಾಗಿ: ಹೀಗಾಗಿ 6 ವರ್ಷದಿಂದ ಹಳೆಯ ಪಿಂಚಣಿ ಯೋಜನೆ ಜಾರಿಗೆ ಹೋರಾಟ ಮಾಡುತ್ತಿದ್ದು, 17 ಜಿಲ್ಲೆಗಳನ್ನು ಸುತ್ತಿ ಪ್ರವಾಸ ಮಾಡಿ, ಜಾಗೃತಿ ಮೂಡಿಸುತ್ತಿದ್ದೇವೆ. ಇದೇ ನ.13ರಂದು ದಾವಣಗೆರೆಯಲ್ಲಿ ಸಭೆ ಸೇರಿ ಹೋರಾಟಕ್ಕೆ ಅಂತಿಮ ಸ್ಪರ್ಶ ನೀಡುತ್ತೇವೆ. ಕೊನೆ ಯದಾಗಿ ಡಿ.19 ರಂದು ಬೆಂಗಳೂರಿನ ಪ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿಯ ಹೋರಾಟ ಮಾಡಲು ನಿಶ್ಚಯಿಸಿಕೊಂಡಿದ್ದು, ಮಾಡು ಇಲ್ಲವೇ ಮಡಿ ಎಂಬ ಘೋಷ ವಾಕ್ಯದೊಂದಿಗೆ ರಾಜಸ್ಥಾನ, ಜಾರ್ಖಾಂಡ್‌ ರಾಜ್ಯದ ಮಾದರಿಯಲ್ಲಿ ಪಿಂಚಣಿ ಗಾಗಿ ಪ್ರತಿಭಟನೆ ಮಾಡುತ್ತೇವೆ. ಅಂದು ಎಲ್ಲರೂ ಹೋರಾಟ ದಲ್ಲಿ ಭಾಗಿಯಾಗಬೇಕು ಎಂದು ಮನವಿ ಮಾಡಿದರು.

ನಿಶ್ಚಿತ ಪಿಂಚಣಿ ಅನುಕೂಲ ಅಲ್ಲ: ತಾಲೂಕು ಅಧ್ಯಕ್ಷ ರಂಗ ನಾಥ್‌ ಮಾತನಾಡಿ, 2006 ರಿಂದ ಆಯ್ಕೆಯಾದ ಯಾರಿಗೂ ಹಳೆಯ ಪಿಂಚಣಿ ಯೋಜನೆಯ ಲಾಭವಿಲ್ಲ. ಇಂದು ನೌಕರರ ರಕ್ಷಣೆಗೆ ನಿಶ್ಚಿತ ಪಿಂಚಣಿ ಯೋಜನೆ ಅನುಕೂಲಕರವಲ್ಲ. ಇದಕ್ಕಾಗಿ ಹಲವು ಬಾರಿ ಹೋರಾಟ ಮಾಡಿದ್ದು ಫ‌ಲ ನೀಡಿಲ್ಲ. ಆದರೆ, ಈ ಬಾರಿಯ ಹೋರಾಟ ಅಂತಿಮ ಘಟ್ಟಕ್ಕೆ ಬರುವವರೆಗೂ ವಿಶ್ರಮಿಸಬಾರದು ಎಂದರು.

ಹೋರಾಟಕ್ಕೆ ಜಯವಾಗಲಿ: ಕವಿಪ್ರನಿನಿ ಸಂಸ್ಥೆಯ ವಿಭಾಗದ ಅಧ್ಯಕ್ಷ ಪ್ರಸನ್ನಕುಮಾರ್‌ ಮಾತನಾಡಿ, ನಿಮ್ಮ ಹೋರಾಟಕ್ಕೆ ಜಯವಾಗಲಿ. ಆದರೆ, ಯಾರೂ ಸಂಘಟನೆಯಲ್ಲಿ ಒಡಕು ಮೂಡಿಸಲು ಪ್ರಯತ್ನಿಸಬಾರದು ಎಂದರು.

ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವೆಂಕಟೇಶಯ್ಯ ಮಾತನಾಡಿದರು. ಕಾರ್ಯದರ್ಶಿ ನಟರಾಜ್‌, ಖಜಾಂಚಿ ಚಿಕ್ಕರಂಗಯ್ಯ, ಮುಖಂಡರಾದ ನಾಗೇಶಯ್ಯ, ಶಶಿಕುಮಾರ್‌, ಕೆಂಪಯ್ಯ, ಶ್ರೀಧರ್‌, ಟಿ.ಡಿ.ನರಸಿಂಹಮೂರ್ತಿ, ಶ್ರೀನಿವಾಸ್‌, ಚಂದ್ರಶೇಖರ್‌ರೆಡ್ಡಿ, ಅರುಣ್‌, ನವೀನ್‌, ಧನಂಜಯ್‌, ರಂಗಪ್ಪ, ಸಂಜಯ್‌, ನಿಶ್ಚಿತ ಪಿಂಚಣಿ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-kunigal

Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ

14-kunigal

Kunigal: ಟೈರ್ ಸ್ಪೋಟಗೊಂಡು ಕಾರು ಪಲ್ಟಿ: ಐಟಿ ಉದ್ಯೋಗಿ ದುರ್ಮರಣ

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

koratagere

Koratagere: ಗೃಹ ಸಚಿವರ ಸ್ವ ಕ್ಷೇತ್ರದಲ್ಲೇ ಮಲ ಹೊತ್ತ 10 ವರ್ಷದ ಬಾಲಕ!

Accident-logo

Kunigal: ಬೈಕ್, ಕ್ಯಾಂಟರ್ ಮುಖಾಮುಖಿ ಢಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು 

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Suside-Boy

Brahamavara: ಹಾರಾಡಿ: ಬಾವಿಗೆ ಹಾರಿ ಆತ್ಮಹ*ತ್ಯೆ

Arrest

Madikeri: ಕುಶಾಲನಗರ ಕಳವು ಪ್ರಕರಣ: ಇಬ್ಬರ ಬಂಧನ

Accident-logo

Bantwala: ಶಾಲಾ ವಾಹನ ಢಿಕ್ಕಿ; ಸ್ಕೂಟರ್‌ ಸವಾರ ಸಾವು

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.