![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Jul 29, 2020, 12:42 PM IST
ತುಮಕೂರು: ಜಿಲ್ಲೆಯಲ್ಲಿ ಮಂಗಳವಾರ 127 ಹೊಸ ಕೋವಿಡ್ -19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 1473ಕ್ಕೆ ಏರಿಕೆಯಾಗಿದೆ. ಒಂದೇ ದಿನ ಕೊರೊನಾಗೆ ನಾಲ್ವರು ಮೃತಪಟ್ಟಿದ್ದು ಮೃತರ ಸಂಖ್ಯೆ 47ಕ್ಕೆ ಏರಿಕೆಯಾಗಿದೆ
ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗೇಂದ್ರಪ್ಪ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಮಂಗಳವಾರ ತುಮಕೂರು ತಾಲೂಕಿನಲ್ಲಿಯೇ ಅತೀ ಹೆಚ್ಚು-60 ಪ್ರಕರಣಗಳು, ಶಿರಾ-6, ಪಾವಗಡ-10, ಮಧುಗಿರಿ ಹಾಗೂ ಗುಬ್ಬಿ ತಾಲೂಕಿನಲ್ಲಿ ತಲಾ 7, ಕುಣಿಗಲ್-13, ತಿಪಟೂರು -8, ಚಿಕ್ಕನಾಯಕನಹಳ್ಳಿ-1, ತುರುವೇಕೆರೆ-9, ಕೊರಟಗೆರೆ-6 ಸೇರಿದಂತೆ ಒಟ್ಟು 127 ಮಂದಿಯಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ ಎಂದರು.
ಮಂಗಳವಾರ ಜಿಲ್ಲಾಸ್ಪತ್ರೆಯಿಂದ 29 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 665 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 761 ಸಕ್ರಿಯ ಪ್ರಕರಣಗಳಿದ್ದು, ಮಂಗಳವಾರ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಈವರೆಗೆ 47 ಮಂದಿ ಕೋವಿಡ್ -19 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.
ಮೃತಪಟ್ಟಿರುವವರು ತುಮಕೂರು ನಗರದ ವಿವಿಧ ಬಡಾವಣೆಯ ಇಬ್ಬರು ಮಹಿಳೆಯರು ಮತ್ತು ಇಬ್ಬರು ಪುರುಷರಿದ್ದು ಎಲ್ಲರೂ 60 ವರ್ಷ ಮೇಲ್ಪಟ್ಟವರಾಗಿದ್ದಾರೆ ಎಂದು ಮಾಹಿತಿ ನೀಡಿದರು.
Congress: ಹೈಕಮಾಂಡ್ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್.ರಾಜಣ್ಣ
Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ
Tumkur: ಪರಂ, ರಾಜಣ್ಣ ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್
Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ
Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿಲ್ಲಿಂಗ್; ಓರ್ವ ಆರೋಪಿ ಬಂಧನ
You seem to have an Ad Blocker on.
To continue reading, please turn it off or whitelist Udayavani.