ಜಿಲ್ಲೆ ಅಭಿವೃದ್ದಿಗೆ ಸಾವಿರಾರು ಕೋಟಿ ರೂ. ಅನುದಾನ


Team Udayavani, Jul 26, 2021, 7:28 PM IST

thumakuru news

ತುಮಕೂರು: ರಾಜ್ಯದಲ್ಲಿ ಅಧಿಕಾರದಲ್ಲಿರುವ ಮುಖ್ಯಮಂತ್ರಿ ಬಿಎಸ್‌.ಯಡಿಯೂರಪ್ಪ ನೇತೃತ್ವದ ಬಿಜೆಪಿಸರ್ಕಾರ ಎರಡು ವರ್ಷ ಪೂರೈಸುತ್ತಿದೆ. ಈ ಸರ್ಕಾರದಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದು,ವಿಶೇಷವಾಗಿ ಕುಡಿಯುವ ನೀರಿಗೆ ಆದ್ಯತೆ ಜೊತೆಗೆನಗರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಿದೆ.

ಕುಡಿಯುವ ನೀರು ಒದಗಿಸುವ ಹೇಮಾವತಿನಾಲಾ ಅಭಿವೃದ್ಧಿಗೆ ಒತ್ತು ನೀಡಿರುವುದರ ಜೊತೆಗೆಎತ್ತಿನ ಹೊಳೆ ಯೋಜನೆಯ ಕಾಮಗಾರಿ ವೇಗಕ್ಕೆಹೆಚ್ಚು ಆದ್ಯತೆ ನೀಡಿದೆ. ಅಲ್ಲದೆ ಕೆರೆಗಳಿಗೆ ನೀರುಹರಿಸಲು ವಿಶೇಷ ಗಮನ ಹರಿಸುವ ಮೂಲಕನೀರಾವರಿ ಯೋಜನೆಗೆ ಒತ್ತು ನೀಡಿದೆ. ಜಿಲ್ಲೆಗೆ ಕುಡಿಯುವ ನೀರು ಒದಗಿಸುವ ಹೇಮಾವತಿ ನಾಲೆಯಲ್ಲಿನಿರೀಕ್ಷಿತ ನೀರು ಹರಿಸಲು ನಾಲೆ ಅಗಲೀಕರಣ ಆಗಬೇಕಾಗಿರುವ ಹಿನ್ನೆಲೆನಾಲೆಯನ್ನು ಅಭಿವೃದ್ಧಿಪಡಿಸಲು 550 ಕೋಟಿ ರೂ. ಮತ್ತುಕೆರೆಗಳಿಗೆ ನೀರು ಹರಿಸುವಯೋಜನೆಗೆ 250 ಕೋಟಿ ರೂ.ಗಳ ವಿವಿಧ ಕಾಮಗಾರಿಗಳುವೇಗ ಪಡೆದುಕೊಂಡಿವೆ.

ಜಿಲ್ಲೆಯ ಜನರ ನಿರೀಕ್ಷಿತ ಎತ್ತಿನಹೊಳೆ ಯೋಜನೆ ಕಾಮಗಾರಿಯ ಜೊತೆಗೆ ಜಿಲ್ಲೆಯವಿವಿಧ ಸಣ್ಣ ನೀರಾವರಿ ಕೆರೆಗಳ ಅಭಿವೃದ್ಧಿಗೆ ರಾಜ್ಯಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ. ಜಿಲ್ಲಾ ಉಸ್ತುವಾರಿಸಚಿವ ಜೆ.ಸಿ. ಮಾಧುಸ್ವಾಮಿ ಮತ್ತು ಶಾಸಕ ಜಿ.ಬಿ.ಜ್ಯೋತಿಗಣೇಶ್‌, ಬಿ.ಸಿ.ನಾಗೇಶ್‌, ಮಸಾಲೆ ಜಯರಾಮ್‌, ಡಾ. ರಾಜೇಶ್‌ಗೌಡ, ವಿಧಾನ ಪರಿಷತ್‌ಸದಸ್ಯ ಚಿದಾನಂದ ಎಂ.ಗೌಡ, ಸಂಸದ ಜಿ.ಎಸ್‌.ಬಸವರಾಜ್‌ ಇತರೆ ಶಾಸಕರು ತಮ್ಮ ಕ್ಷೇತ್ರಗಳನ್ನುಅಭಿವೃದ್ಧಿಪಡಿಸುವ ಈ ನಿಟ್ಟಿನಲ್ಲಿ ಸರ್ಕಾರದ ಮೇಲೆ‌ಒತ್ತಡ ಹೇರುತ್ತಿದ್ದಾರೆ. ವಿರೋಧ ಪಕ್ಷದಲ್ಲಿ ಇರುವಶಾಸಕರಾದ ಡಾ.ಜಿ. ಪರಮೇಶ್ವರ್‌, ಎಸ್‌.ಆರ್‌.ಶ್ರೀನಿವಾಸ್‌, ವೆಂಕಟರ ಮಣಪ್ಪ, ಡಿ.ಸಿ.ಗೌರಿಶಂಕರ್‌,ಡಾ.ರಂಗನಾಥ್‌, ವೀರಭದ್ರಯ್ಯ ಸರ್ಕಾರದ ಮೇಲೆಒತ್ತಡ ತಂದು ತಮ್ಮ ಕ್ಷೇತ್ರ ಅಭಿವೃದ್ಧಿಗೆ ಒತ್ತು ನೀಡಿದ್ದಾರೆ.

ಆರೋಗ್ಯ ಕೇಂದ್ರದ ಕಟ್ಟಡ ಉದ್ಘಾಟನೆ: ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದ ಸರ್ಕಾರ,ಮೋದಿ ಮಾರ್ಗದರ್ಶನದಲ್ಲಿ ಕಳೆದ ಎರಡುವರ್ಷಗಳಲ್ಲಿ ತುಮಕೂರಿಗೆ ಹಲವು ಮಹತ್ವದಯೋಜನೆ ನೀಡಿದೆ. ಈ ಯೋಜನೆಗಳಲ್ಲಿ ಸರ್ಕಾರಕ್ಕೆಜನರ ಆರೋಗ್ಯ ಮತ್ತು ರೈತಾಪಿ ವರ್ಗದ ಮೇಲಿರುವ ಕಾಳಜಿಗೆ ಒತ್ತು ನೀಡಿದೆ. ಜಿಲ್ಲೆಯ ಮಧುಗಿರಿತಾಲೂಕು ಮುದ್ದೇನಹಳ್ಳಿಯಲ್ಲಿ ಎರಡು ಕೋಟಿರೂಪಾಯಿ ವೆಚ್ಚದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದಕಟ್ಟಡ ಉದ್ಘಾಟನೆ ಮಾಡಲಾಗಿದ್ದು, ಶಿರಾ ತಾಲೂಕಿನಲ್ಲಿ 20 ಕೋಟಿ ವೆಚ್ಚದಲ್ಲಿ ನೂತನ ತಾಯಿ-ಮಕ್ಕಳಆಸ್ಪತ್ರೆ ಕಟ್ಟಡ ಉದ್ಘಾಟನೆ ನೆರವೇರಿಸಲಾಗಿದೆ.

ಸೂರಿಲ್ಲದವರಿಗಾಗಿ ಸ್ಮಾರ್ಟ್‌ ಸಿಟಿ ಯೋಜನೆಯಡಿನಗರದ ಕೊಳಚೆ ಪ್ರದೇಶಗಳಲ್ಲಿ ವಾಸಿಸುತ್ತಿದ್ದಮಾರಿಯಮ್ಮ ನಗರದ ನಿವಾಸಿಗಳಿಗೆ 12.33 ಕೋಟಿರೂಪಾಯಿ ವೆಚ್ಚದಲ್ಲಿ 87 ಮನೆಗಳ ನಿರ್ಮಾಣಮಾಡಲಾಗಿದೆ. ಅಲ್ಲದೆ, ಕ್ಯಾತ್ಸಂದ್ರದಿಂದ ಗುಬ್ಬಿ ಗೇಟ್‌ವರೆಗಿನ 10.55 ಕಿಲೋಮೀಟರ್‌ ಉದ್ದದ ರಸ್ತೆಯನ್ನು88.87 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದ್ದು, ಸರ್ಕಾರಿ ಎಂಪ್ರಸ್‌ ಕಾಲೇಜಿನಲ್ಲಿ 11.84ಕೋಟಿ ರೂಪಾಯಿ ವೆಚ್ಚದಲ್ಲಿ ಆಡಿಟೋರಿಯಂಹಾಗೂ ಗ್ರಂಥಾಲಯ ನಿರ್ಮಿಸಲಾಗಿದೆ.

ಭದ್ರಾ ಮೇಲ್ದಂಡೆ ಯೋಜನೆ ಅನುಮೋದನೆ:ಕೊರೊನಾ ಕಠಿಣ ಪರಿಸ್ಥಿತಿಯಲ್ಲೂ ಯಡಿಯೂರಪ್ಪನವರ ನೇತೃತ್ವದ ಸರ್ಕಾರ ಜಿಲ್ಲೆಗೆ ಹಲವು ಯೋಜನೆಘೋಷಿಸಿದೆ. ನಗರದಲ್ಲಿ ಶ್ರೀ ಶಿವಕುಮಾರ ಸ್ವಾಮೀಜಿಗೌರವಾರ್ಥ ಸ್ಮತಿವನವನ್ನು ಎರಡು ಕೋಟಿ ವೆಚ್ಚದಲ್ಲಿ ನಿರ್ಮಿಸುವುದಾಗಿ ಮುಖ್ಯ ಮಂತ್ರಿಗಳು ಘೋಷಿಸಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆಯ 21.424ಕೋಟಿ ರೂಪಾಯಿಗಳ ಪರಿಷ್ಕೃತ ಅಂದಾಜು ಮೊತ್ತಕ್ಕೆಆಡಳಿತಾತ್ಮಕ ಅನುಮೋದನೆ ನೀಡಿದ್ದಾರೆ. ಈಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದುಘೋಷಿಸುವ ಪ್ರಸ್ತಾವ ನೆಯು ಕೇಂದ್ರ ಸರ್ಕಾರದಮಟ್ಟದಲ್ಲಿದೆ. ಈ ಯೋಜನೆ ಯನ್ನು ಶೀಘ್ರವಾಗಿಪೂರ್ಣಗೊಳಿಸಲು ನಿರ್ಧರಿಸಲಾಗಿದ್ದು, ಇದರಿಂದನಗರವೂ ಸೇರಿದಂತೆ ನಾಲ್ಕು ಜಿಲ್ಲೆಗಳ ರೈತರಿಗೆ ಅನುಕೂಲವಾಗುತ್ತದೆ.

ಬೆಂಗಳೂರು ನಗರದ ವೃಷಭಾವತಿಕಣಿವೆಯಿಂದ ದ್ವಿತೀಯ ಹಂತಕ್ಕೆ ಸಂಸ್ಕರಿಸಿದ 308ಎಂಎಲ್‌ಡಿ ನೀರನ್ನು ತುಮಕೂರು ಗ್ರಾಮಾಂತರ ಸೇರಿದಂತೆ ನಾಲ್ಕು ಜಿಲ್ಲೆಗಳ 234 ಕೆರೆಗಳಿಗೆ ತುಂಬಿಸುವಯೋಜನೆಯನ್ನು 500 ಕೋಟಿ ರೂ. ಅಂದಾಜುವೆಚ್ಚದಲ್ಲಿ ಜಾರಿಗೊಳಿಸಲು ಯೋಜಿಸಲಾಗಿದೆ.

ನಗರದಲ್ಲಿ ಅಭಿವೃದ್ಧಿ ಪರ್ವ: ನಗರ ಶಾಸಕರಾಗಿಜಿ.ಬಿ.ಜ್ಯೋತಿಗಣೇಶ್‌ ಚುನಾವಣೆಯಲ್ಲಿ ಆಯ್ಕೆಯಾದ ಬಳಿಕ ನಗರದಲ್ಲಿ ಸ್ಮಾರ್ಟ್‌ಸಿಟಿ ಅನುದಾನ ಸೇರಿದಂತೆ ಮುಖ್ಯಮಂತ್ರಿ ಬಿಎಸ್‌ವೈ ಹಾಗೂ ಸಚಿವರುಗಳಪೂರಕ ಸಹಕಾರದೊಂದಿಗೆ ರಾಜ್ಯ ಸರ್ಕಾರದ ವಿವಿಧಅನುದಾನಗಳಡಿ ಹಲವು ಅಭಿವೃದ್ಧಿ ಯೋಜನೆಗಳನ್ನುಸಾಕಾರಗೊಳಿಸುತ್ತಿದ್ದು, ನಗರದಲ್ಲಿ ಮುಂದಿನಮೂರ್‍ನಾಲ್ಕು ದಶಕದ ಬೆಳವಣಿಗೆಗಳ ದೂರದೃಷ್ಟಿಯಿರಿಸಿಕೊಂಡು ಅಭಿವೃದ್ಧಿ ಯೋಜನೆಗಳು ಅನುಷ್ಠಾನಗೊಳ್ಳುತ್ತಿವೆ. ಶಾಸಕ ಜಿ.ಬಿ.ಜ್ಯೋತಿಗಣೇಶ್‌, ಜಿಲ್ಲಾಉಸ್ತುವಾರಿ ಸಚಿವರು, ಪಾಲಿಕೆ ಜನಪ್ರತಿನಿಧಿಗಳುಹೀಗೆ ಎಲ್ಲರನ್ನು ವಿಶ್ವಾಸಕ್ಕೆ ಪಡೆದು ಪûಾತೀತವಾಗಿನಗರದ ನೀರಿನ ಕೊರತೆ ನೀಗಬೇಕೆಂದು ನಗರದಕೆರೆಗಳ ಪುನರುಜ್ಜೀವನ ಗೊಳಿಸಿದ್ದಾರೆ.

ಕಾಮಗಾರಿ ಚುರುಕು: ಶೈಕ್ಷಣಿಕ ಕ್ಷೇತ್ರದಲ್ಲಿ ಬೆಳವಣಿಗೆಆಗುತ್ತಿರುವ ತುಮಕೂರು ನಗರದ ಅಭಿವೃದ್ಧಿಗೆಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದಸ್ಮಾರ್ಟ್‌ ಸಿಟಿ ಯೋಜನೆಯ ಕಾಮಗಾರಿ ಚುರುಕುಗೊಂಡಿದೆ. ಅದಕ್ಕೆ ಪೂರಕವಾಗಿ ರಾಜ್ಯ ಸರ್ಕಾರವೂಅನುದಾನ ಬಿಡುಗಡೆ ಮಾಡಿರುವ ಹಿನ್ನೆಲೆ ಸ್ಮಾರ್ಟ್‌ಸಿಟಿ ಕಾಮಗಾರಿಯಲ್ಲಿ ಇತರೆ ನಗರಗಳಿಗಿಂತತುಮಕೂರು ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದೆ.

ಚಿ.ನಿ.ಪುರುಷೋತ್ತಮ್

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ

Tumakuru-Leopard

Tumakuru: ಬಾಲ ಹಿಡಿದು ಚಿರತೆ ಸೆರೆ ಹಿಡಿದ ಯುವಕ; ಅರಣ್ಯ ಸಿಬ್ಬಂದಿ ಶಾಕ್‌!

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

1-korata

Koratagere; ಲಾರಿ- ಕಾರಿನ ನಡುವೆ ಭೀಕರ ಅಪಘಾ*ತ: ಯುವಕರಿಬ್ಬರ ಸಾ*ವು

ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾದ ಪ್ರಕರಣ: ಇಬ್ಬರು ಶಿಕ್ಷಕರು ಸಸ್ಪೆಂಡ್

ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾದ ಪ್ರಕರಣ: ಇಬ್ಬರು ಶಿಕ್ಷಕರು ಅಮಾನತು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.