ಮನೆಯ ಬಾಗಿಲು ಮುರಿದು ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ
Team Udayavani, Oct 8, 2021, 7:44 PM IST
ಕುಣಿಗಲ್ : ದುಷ್ಕರ್ಮಿಗಳು ಮನೆಯ ಬಾಗಿಲು ಮುರಿದು, ಮನೆ ಒಳಗೆ ನುಗ್ಗಿ ಮಾರಕಾಸ್ತ್ರಗಳಿಂದ ವ್ಯಕ್ತಿಯೋರ್ವನ ಮೇಲೆ ಹಲ್ಲೆ ನಡೆಸಿ, ನಗದು ಸೇರಿದಂತೆ ಚಿನ್ನಾಭರಣವನ್ನು ದೋಚಿ ಪರಾರಿಯಾಗಿರುವ ಘಟನೆ ತಾಲೂಕಿನ ಕೊತ್ತಗೆರೆ ಹೋಬಳಿ ಕೊಡಹಳ್ಳಿ ಪಾಳ್ಯ ಗ್ರಾಮದಲ್ಲಿ ಗುರುವಾರ ಮಧ್ಯರಾತ್ರಿ ನಡೆದಿದ್ದು, ಸುತ್ತ ಮುತ್ತ ಗ್ರಾಮಸ್ಥರನ್ನು ಭಯ ಬೀಳಿಸುವಂತೆ ಮಾಡಿದೆ.
ಕೊಡಹಳ್ಳಿ ಪಾಳ್ಯ ಗ್ರಾಮದ ವಾಸಿ ಬೈರೇಶ್ ದುಷ್ಕರ್ಮಿಗಳ ಹಲ್ಲೆಗೆ ಒಳಗಾದ ವ್ಯಕ್ತಿ. ಗುರುವಾರ ತಡರಾತ್ರಿ ಸುಮಾರು ಒಂದು ಗಂಟೆ ಸಮಯದಲ್ಲಿ ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರಗಳೊಂದಿಗೆ ಬಂದು ಬೈರೇಶ್ ಅವರ ತಂದೆ, ತಾಯಿ ಮಲಗಿದ್ದ ಪಕ್ಕದ ಮೆನೆಗೆ ಬೀಗ ಹಾಕಿ, ಬೈರೇಶ್ ಅವರ ಮನೆಯ ಬಾಗಿಲನ್ನು ಮುರಿದು ಒಳ ನುಗ್ಗಿ ಮಲಗಿದ್ದ ಬೈರೇಶ್ ಅವರಿಗೆ ಮಾರಕಾಸ್ತ್ರಗಳಿಂದ ಥಳಿಸಿ ಬಳಿಕ ಬೀರುವಿನಲ್ಲಿ ಇದ್ದ 250 ಗ್ರಾಂ ಚಿನ್ನ, 1300 ಗ್ರಾಂ ಬೆಳ್ಳೆ ಹಾಗೂ 20 ಸಾವಿರ ನಗದನ್ನು ದೋಚಿಕೊಂಡು ಪರಾರಿಯಾಗಿದ್ದಾರೆ.
ಇದನ್ನೂ ಓದಿ:ನಾವು ತಪ್ಪು ಮಾಡಿಲ್ಲ, ಐಟಿ ದಾಳಿಯಿಂದ ನಮಗೆ ಯಾವುದೇ ತೊಂದರೆ ಇಲ್ಲ: ಬಿಎಸ್ ವೈ
ಬೈರೇಶ್ ಅವರಿಗೆ ಬಲವಾಗಿ ತಲೆ ಪೆಟ್ಟು ಬಿದ್ದಿದು, ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಈ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳ ಪತ್ತೆಗೆ ಪೊಲೀಸರು ಕ್ರಮಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kunigal: ಬೈಕ್, ಕ್ಯಾಂಟರ್ ಮುಖಾಮುಖಿ ಢಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು
Gubbi: ಮೀಟರ್ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಬೇಸತ್ತು ಪೌರ ಕಾರ್ಮಿಕ ಆತ್ಮಹತ್ಯೆ
Koratagere: ವೃದ್ದೆ ಮೇಲೆ ಕೆಎಸ್ಆರ್ಟಿಸಿ ಬಸ್ ಹರಿದು ಸಾವು
Hunasur: ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ತಿಪಟೂರಿನ ಮಹಿಳೆ!
Kunigal: ಅಪ್ರಾಪ್ತೆಯ ಅಪಹರಣ, ಲೈಂಗಿಕ ದೌರ್ಜನ್ಯ; ಗುಜರಾತ್ ನಲ್ಲಿ ಬಂಧನ
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.