ಸಿದ್ದರಾಮಯ್ಯರಿಂದ ಟಿಪ್ಪು ಜಯಂತಿ ಹೆಸರಲ್ಲಿ ಅಶಾಂತಿ
Team Udayavani, Dec 11, 2017, 6:30 AM IST
ತುಮಕೂರು: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಟಿಪ್ಪು ಜಯಂತಿ ಹೆಸರಿನಲ್ಲಿ ಅಶಾಂತಿ ಉಂಟು ಮಾಡಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ನಗರದಲ್ಲಿ ಭಾನುವಾರ ನಡೆದ ಜೆಡಿಎಸ್ ಅಲ್ಪಸಂಖ್ಯಾತರ ಸಮಾವೇಶದಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ಗೆ ಗುಜರಾತ್ನಲ್ಲಿ ಬಿಜೆಪಿಯನ್ನು ಸೋಲಿಸುವ ಶಕ್ತಿ ಇಲ್ಲದೆ ಇರುವುದು ದುರಂತ ಎಂದು ವಿಷಾದಿಸಿದರು.
“ರಾಜ್ಯದಲ್ಲಿ ಸಿದ್ದರಾಮಯ್ಯ ಅವರು ಟಿಪ್ಪುಜಯಂತಿ ಹೆಸರಿನಲ್ಲಿ ಅಶಾಂತಿ ಉಂಟು ಮಾಡಿದ್ದಾರೆ. ಆದರೆ, ಮುಸ್ಲಿಮರಿಗೆ ರಾಜ್ಯದಲ್ಲಿ ಸ್ವತಂತ್ರವಾಗಿ ಬದುಕಲು ಆತ್ಮಸ್ಥೈರ್ಯ ತುಂಬಿದ್ದು ಜೆಡಿಎಸ್. ದತ್ತ ಪೀಠ ವಿಚಾರದಲ್ಲಿ ಸರ್ಕಾರ ಬೀಳುತ್ತೆ ಎಂದು ಚಿಂತಿಸದೆ ಬಿಜೆಪಿಯವರ ಮೇಲೆ ಕ್ರಮ ಜರುಗಿಸಿದ್ದು ಜೆಡಿಎಸ್. ದೇಶದಲ್ಲಿ ಮತ್ತೂಮ್ಮೆ ಜಾತ್ಯತೀತ ಶಕ್ತಿಗಳು ಒಂದೇ ಸೂರಿನಡಿ ಒಗ್ಗೂಡುವ ನಿಟ್ಟಿನಲ್ಲಿ ಎಲ್ಲಾ ಪ್ರಯತ್ನಗಳು ನಡೆಯಬೇಕಿದೆ. ಅದರ ನೇತೃತ್ವವನ್ನು ನ್ಯಾಷನಲ್ ಕಾನ್ಫರೆನ್ಸ್ನ ಫಾರೂಕ್ ಅಬ್ದುಲ್ಲಾ ಅವರೇ ವಹಿಸಬೇಕು. 1994ರಲ್ಲಿ ಫಾರೂಕ್ ಅಬ್ದುಲ್ಲಾ ಬೆಂಗಳೂರಿಗೆ ಬಂದಿದ್ದರು. ಆಗ ದೇವೇಗೌಡರು ಮುಖ್ಯಮಂತ್ರಿಯಾಗಿದ್ದರು. ಈಗ ಮತ್ತೆ ಬಂದಿದ್ದಾರೆ. ನಾನು ಅವರಿಗೆ ಆಭಾರಿಯಾಗಿರುತ್ತೇನೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.