ಮಧುಗಿರಿ: ಆಟೋ ತಲೆ ಮೇಲೆ ಹರಿದು ಬಾಲಕ ಸ್ಥಳದಲ್ಲೇ ಸಾವು
Team Udayavani, Sep 27, 2022, 7:01 PM IST
ಮಧುಗಿರಿ: ಶಾಲೆಯಿಂದ ಮನೆಗೆ ತೆರಳುತ್ತಿದ್ದ ಬಾಲಕನ ತಲೆ ಮೇಲೆ ಆಟೋ ಹರಿದು ಬಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಪಟ್ಟಣದ ಶಾಲರಯೊಂದರ ಕುಶಾಲ್ (9) ಮೃತಪಟ್ಟ ಬಾಲಕ.
ಘಟನೆಯ ವಿವರ:
ಬಾಲಕ ಕುಶಾಲ್ ಬೆಂಕಿಪುರದ ಅಶ್ವತ್ಥ್ ಎಂಬುವವರ ಪುತ್ರನಾಗಿದ್ದು ನಗರದ ಶಾಲೆವೊಂದರಲ್ಲಿ 3 ನೇ ತರಗತಿಯಲ್ಲಿ ಓದುತ್ತಿದ್ದ. ಸಂಜೆ ಮನೆಗೆ ಮರಳುವಾಗ ಆಟೋದಲ್ಲಿ ಬರುವಾಗ ಆಟೋ ಮುಂದೆ ಕುಳಿತಿದ್ದವನು ಆಕಸ್ಮಿಕವಾಗಿ ಕೆಳಗೆ ಬಿದ್ದಿದ್ದು ಅದೇ ಆಟೋದ ಹಿಂಬದಿಯ ಚಕ್ರ ತಲೆ ಮೇಲೆ ಹರಿದ ಪರಿಣಾಮ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಸುರಕ್ಷತೆಯಿಲ್ಲದೆ ಸಂಚಾರ :
ಪಟ್ಟಣದಲ್ಲಿ ಖಾಸಗಿ ಶಾಲೆಗಳು ತಮ್ಮ ವಾಹನಗಳಲ್ಲಿ ಮಕ್ಕಳನ್ನು ಕರೆತರಲು ಹೆಚ್ಚು ಶುಲ್ಕ ವಿಧಿಸಿದ ಕಾರಣ ಬಡ ಪೋಷಕರು ಇಂತಹ ಆಟೋವನ್ನು ಅವಲಂಬಿಸುವುದು ಸಾಮಾನ್ಯವಾಗಿದೆ. ಇದರಲ್ಲಿ ತಿಂಗಳಿಗೆ 700 ರೂ.ಗಳಿದ್ದು ಶಾಲಾ ವಾಹನದಲ್ಲಿ 6-7 ಸಾವಿರವಿದೆ. ಇದನ್ನೇ ಬಂಡವಾಳ ಮಾಡಿಕೊಂಡ ಆಟೋ ಚಾಲಕರು ಒಂದೇ ಬಾರಿ 10-15 ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಾರೆ. ಇಂತಹ ಆಟೋಗಳ ಬಗ್ಗೆ ಪೊಲೀಸರು, ಸಾರಿಗೆ ಇಲಾಖೆಯವರು ಕಂಡೂ ಕಾಣದಂತಿರುವುದು ಇಂತಹ ಅವಘಡಗಳಿಗೆ ಕಾರಣವಾಗಿದೆ ಎಂಬುದು ಜನರ ಆರೋಪ.
ಘಟನೆ ಸಂಬಂಧಿಸಿ ಆಟೋ ಚಾಲಕನನ್ನು ಬಂಧಿಸಿದ್ದು, ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ
Dinesh Gundu Rao; ಬಾಣಂತಿಯರ ಸಾ*ವು ಪ್ರಕರಣ ನ್ಯಾಯಾಂಗ ತನಿಖೆಗೆ
ರಾತ್ರಿಯಿಡೀ ಸಿ.ಟಿ. ರವಿಯನ್ನು ಸುತ್ತಾಡಿಸಿದ ಪೊಲೀಸರು: ಮಧ್ಯರಾತ್ರಿ ರಸ್ತೆಯಲ್ಲೇ ಪ್ರತಿಭಟನೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.