Tumakuru: ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ 50ಎಕರೆ ಭೂಮಿ ಮಂಜೂರು: ಸಿಎಂ
ಕೆಎಸ್‌ಸಿಎ ನಿರ್ಮಾಣ ಕಾಮಗಾರಿ ತ್ವರಿತಗೊಳಿಸಲಿ, ಶಂಕುಸ್ಥಾಪನೆ ನೆರವೇರಿಸಿ ಸಿದ್ದರಾಮಯ್ಯ ಸೂಚನೆ
Team Udayavani, Dec 2, 2024, 10:03 PM IST
ತುಮಕೂರು: ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಕ್ರೀಡಾ ಪ್ರಗತಿಗೆ ಪೂರಕವಾಗಿ ಸೋರೆಕುಂಟೆಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಸೋಮವಾರ (ಡಿ.2)ದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಿದ್ದಾರೆ.
ಬಳಿಕ ಕಾರ್ಯಕ್ರಮದ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕಾಗಿ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ)ಗೆ 50 ಎಕರೆ ಭೂಮಿ ಮಂಜೂರು ಮಾಡಿದ್ದೇವೆ. ಈ ಉಪಕ್ರಮ ಈ ಪ್ರದೇಶದ ಆರ್ಥಿಕ ಬೆಳವಣಿಗೆ ಮತ್ತು ಒಟ್ಟಾರೆ ಅಭಿವೃದ್ಧಿಗೆ ಕೊಡುಗೆ ನೀಡುತ್ತದೆ ಎಂದು ಕೆಎಸ್ ಸಿಎಗೆ 50 ಎಕರೆ ಪ್ರದೇಶವನ್ನು ಸಿಎಂ ಸಿದ್ದರಾಮಯ್ಯ ಹಸ್ತಾಂತರಿಸಿದರು. ಕ್ರಿಕೆಟ್ ಆಸಕ್ತರ ನಿರೀಕ್ಷೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕೆಎಸ್‌ಸಿಎ ನಿರ್ಮಾಣವನ್ನು ತ್ವರಿತಗೊಳಿಸಬೇಕು ಎಂದು ಇದೇ ವೇಳೆ ಒತ್ತಾಯಿಸಿದ್ದಾರೆ.
ಮೈಸೂರಿನಲ್ಲೂ ಕ್ರೀಡಾಂಗಣ ನಿರ್ಮಾಣಕ್ಕೆ ಬೇಡಿಕೆ:
ಮೈಸೂರಿನಲ್ಲೂ ಕಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಕರ್ನಾಟಕ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಬೇಡಿಕೆ ಮುಂದಿಟ್ಟಿದೆ. ಮೈಸೂರಿನಲ್ಲೂ ಜಾಗ ಕೊಡಲಾಗುವುದು ಮೈಸೂರಿನಲ್ಲೂ ಇದೇ ಯೋಜನೆಗೆ ಭೂಮಿ ಮಂಜೂರು ಮಾಡುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿದರು.
ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ, ಸಹಕಾರ ಸಚಿವ ಕೆ.ಎನ್.ರಾಜಣ್ಣ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯ ಸರಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಸ್ಥಳೀಯ ಶಾಸಕರು, ಕೆಎಸ್‌ಸಿಎ ಅಧ್ಯಕ್ಷ ರಘುರಾಮ ಭಟ್ ಸೇರಿ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರತಿಭಟನೆಗೆಲ್ಲ ಹೆದರಲ್ಲ:
ತುಮಕೂರು ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಸಂದರ್ಭದಲ್ಲಿ ಪ್ರತಿಭಟನೆ ನಡೆಸಲು ಹಣದ ಆಮಿಷ ಒಡ್ಡಿರುವ ಸುದ್ದಿ ನೋಡಿದೆ. ನಾನು 41 ವರ್ಷದಿಂದ ಮಂತ್ರಿ ಆಗಿದ್ದೇನೆ. ಎರಡು ಬಾರಿ ವಿರೋಧ ಪಕ್ಷದ ನಾಯಕ, ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೀನಿ. ಇಂಥಾದ್ದಕ್ಕೆಲ್ಲಾ ಹೆದರಿದ್ದರೆ ರಾಜಕಾರಣದಲ್ಲಿ ಉಳಿಯೋಕೆ ಆಗ್ತಿರಲಿಲ್ಲ. ಯಾವ ತಪ್ಪು ಮಾಡದ ನಾನು ಯಾವುದಕ್ಕೂ ಹೆದರುವ ಪ್ರಶ್ನೆಯೇ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cyclone Fengal Effect: ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೈಸ್ಕೂಲ್ ವರೆಗೆ ರಜೆ ಘೋಷಣೆ
SSLC, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
ವಿಜಯೇಂದ್ರ ಸಣ್ಣ ಹುಡುಗ, ರಾಜ್ಯಾಧ್ಯಕ್ಷ ಸ್ಥಾನ ತ್ಯಜಿಸುವುದು ಒಳಿತು: ರಮೇಶ್ ಜಾರಕಿಹೊಳಿ
ಆಸ್ತಿ ವಿವಾದ: ಸುಪಾರಿ ಕೊಟ್ಟು ಚಿಕ್ಕಪ್ಪನ ಕೊಲೆ… ಪ್ರಕರಣ ಭೇದಿಸಿದ ಚೆನ್ನಗಿರಿ ಪೊಲೀಸರು
Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ
MUST WATCH
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.