Tumakuru; ಗೋಕಟ್ಟೆಗೆ ಬಿದ್ದ ವಿದ್ಯಾರ್ಥಿ ರಕ್ಷಿಸಲು ಹೋದ ನಾಲ್ವರು ನೀರುಪಾಲು
ಸಿದ್ದಗಂಗಾ ಮಠದ ಬಳಿ ಅವಘಡ... ಮೊದಲು ನೀರಿಗೆ ಬಿದ್ದಿದ್ದ ವಿದ್ಯಾರ್ಥಿ ಪಾರು
Team Udayavani, Aug 13, 2023, 7:41 PM IST
ತುಮಕೂರು: ಗೋಕಟ್ಟೆಯೊಂದಕ್ಕೆ ಆಕಸ್ಮಿಕವಾಗಿ ಕಾಲುಜಾರಿ ಬಿದ್ದ ವಿದ್ಯಾರ್ಥಿಯನ್ನು ರಕ್ಷಿಸಲು ಹೋದ ತಾಯಿ ಸೇರಿದಂತೆ ನಾಲ್ವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಭಾನುವಾರ ಮಧ್ಯಾಹ್ನ ನಗರದ ಸಿದ್ದಗಂಗಾ ಮಠದ ಬಳಿ ನಡೆದಿದೆ.
ಗೋಕಟ್ಟೆಗೆ ಆಯತಪ್ಪಿ ಬಿದ್ದ ಸ್ನೇಹಿತ ರಂಜಿತ್‌ನನ್ನು ರಕ್ಷಿಸಲು ಮುಂದಾದ ಶ್ರೀಮಠದ ವಿದ್ಯಾರ್ಥಿಗಳಾದ ಶಂಕರ್ (11), ಹರ್ಷಿತ್ (11) ಹಾಗೂ ಇವರನ್ನು ರಕ್ಷಣೆ ಮಾಡಲು ನೀರಿಗಿಳಿದ ರಂಜಿತ್ ತಾಯಿ ಬೆಂಗಳೂರು ಬಾಗಲಗುಂಟೆಯ ಲಕ್ಷ್ಮೀ (33) ಹಾಗೂ ಯಾದಗಿರಿ ಜಿಲ್ಲೆಯ ಅಜಲಪುರದ ಮಹದೇವಪ್ಪ (44) ಎಂಬುವರೇ ಮೃತ ದುರ್ದೈವಿಗಳು.
ಶ್ರೀಮಠದಲ್ಲಿ 6ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ಮಧ್ಯಾಹ್ನ ಊಟದ ನಂತರ ಕೈತೊಳೆಯಲು ಗೋಕಟ್ಟೆಗೆ ಇಳಿದಿದ್ದರು ಎನ್ನಲಾಗಿದ್ದು ಘಟನೆಯಲ್ಲಿ ರಂಜಿತ್ ಎಂಬ ವಿದ್ಯಾರ್ಥಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಸಿದ್ದಗಂಗಾ ಮಠದಲ್ಲಿ ವ್ಯಾಸಂಗ ಮಾಡುತ್ತಿದ್ದ ಮಗನನ್ನು ನೋಡಲು ತಾಯಿ ಬಂದಿದ್ದರು. ಈ ಸಂದರ್ಭದಲ್ಲಿ ಮಗ ರಂಜಿತ್ ಕೈಕಾಲು ತೊಳೆದುಕೊಳ್ಳಲೆಂದು ಗೋಕಟ್ಟೆಗೆ ಇಳಿದಿದ್ದಾನೆ. ಆಗ ಆಯತಪ್ಪಿ ಕಾಲು ಜಾರಿ ನೀರಿಗೆ ಬಿದ್ದಿದ್ದಾನೆ. ಇದನ್ನು ನೋಡಿದ ಈತನ ಸ್ನೇಹಿತರಾದ ಶಂಕರ್, ಹರ್ಷಿತ್ ಇವರಿಬ್ಬರು ಆತನನ್ನು ರಕ್ಷಿಸುವ ಸಲುವಾಗಿ ನೀರಿಗೆ ಧುಮುಕಿದ್ದಾರೆ. ಇದನ್ನು ನೋಡಿದ ತಾಯಿ ಲಕ್ಷ್ಮಿ ಅವರು ಸಹ ನೀರಿಗೆ ಇಳಿದಿದ್ದಾರೆ. ಇವರೆಲ್ಲರೂ ನೀರಿನಲ್ಲಿ ಮುಳುಗುತ್ತಿರುವುದನ್ನು ಕಂಡ ಯಾದಗಿರಿ ಜಿಲ್ಲೆಯ ಮಹದೇವಪ್ಪ ಅವರು ಸಹ ನೀರಿಗೆ ಧುಮುಕಿದ್ದಾರೆ. ಆದರೆ ವಿಧಿಯಾಟದಲ್ಲಿ ನಾಲ್ವರು ಮೃತಪಟ್ಟಿದ್ದು, ಮೊದಲು ನೀರಿಗೆ ಬಿದ್ದಿದ್ದ ರಂಜಿತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಘಟನೆಯ ಸುದ್ದಿ ತಿಳಿದ ಕೂಡಲೇ ಕ್ಯಾತ್ಸಂದ್ರ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿ ಶವಗಳಿಗಾಗಿ ಹುಡುಕಾಟ ನಡೆಸಿ, ಸಂಜೆ ವೇಳೆಗೆ ಶವಗಳನ್ನು ಹೊರ ತೆಗೆಯುವಲ್ಲಿ ಶ್ರಮಿಸಿದ್ದಾರೆ.
ಘಟನೆಯ ಸುದ್ದಿ ತಿಳಿದ ಕೂಡಲೇ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಹುಲ್‌ಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಕ್ಯಾತ್ಸಂದ್ರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Response to Demand: ಬಿಸಿಯೂಟ ನೌಕರರಿಗೆ ಇಡುಗಂಟು: ಸರಕಾರದ ಮಾರ್ಗ ಸೂಚಿ ಪ್ರಕಟ
Winter Session Issue: ಬಂಧನ, ಪೊಲೀಸ್ ದೌರ್ಜನ್ಯ: ಡಿಜಿಪಿಗೆ ಸಿ.ಟಿ.ರವಿ ದೂರು
Valmiki Nigama: ಜಪ್ತಿ ಮಾಡಿರುವ 6.11 ಕೋಟಿ ರೂ. ಬಿಡುಗಡೆಗೆ ಸೂಚನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.