Tumakuru: ಬಂಡೆ ಬ್ಲಾಸ್ಟ್ ಮಾಡುವ ವೇಳೆ ಇಬ್ಬರು ಕಾರ್ಮಿಕರ ದುರ್ಮರಣ
Team Udayavani, Jan 23, 2024, 7:59 PM IST
ತುಮಕೂರು: ಕ್ರಷರ್ ನಲ್ಲಿ ಬಂಡೆ ಬ್ಲಾಸ್ಟ್ ಮಾಡುವ ವೇಳೆ ಅವಘಡ ಸಂಭವಿಸಿ ಇಬ್ಬರು ಕಾರ್ಮಿಕರು ಸ್ಥಳದಲ್ಲೆ ಮೃತಪಟ್ಟಿದ್ದು ಮತ್ತೊಬ್ಬರು ಗಂಭೀರ ವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ.
ಮೃತಪಟ್ಟಿರುವ ವ್ಯಕ್ತಿಗಳನ್ನು ಬಿಹಾರ ಮೂಲದ ಮೊಹಮ್ಮದ್ ಅಬೂಲ್ (29), ಹಾಗೂ ಛತ್ತೀಸ್ ಗಢ ಮೂಲದ ಮೋನು (24), ಮೃತ ದುರ್ದೈವಿಗಳಾಗಿದ್ದಾರೆ.
ತುಮಕೂರು ತಾಲೂಕಿನ ಕೌತಮಾರನಹಳ್ಳಿ ಬಳಿಯಿರುವ ಕರ್ನಾಟಕ ಸ್ಟೋನ್ ಕ್ರಷರ್ ನಲ್ಲಿ ಈ ಘಟನೆ ನಡೆದಿದೆ. ತುಮಕೂರು ಮೂಲದ ಕೆ.ಎ.ಎಂ ಹನೀಫ್ ಎಂಬುವರಿಗೆ ಸೇರಿದ ಕರ್ನಾಟಕ ಸ್ಟೋನ್ ಕ್ರಷರ್ ನಲ್ಲಿ ಮಂಗಳವಾರ ಮಧ್ಯಾಹ್ನ 1 ಗಂಟೆ ವೇಳೆ ಬಂಡೆ ಬ್ಲಾಸ್ಟ್ ಮಾಡುವಾಗ ಈ ಘಟನೆ ನಡೆದಿದೆ.
ಕ್ರಷರ್ ಮಾಲೀಕನ ಬೇಜವಾಬ್ದರಿತನದಿಂದ ಈ ಘಟನೆ ನಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಈ ಕ್ರಷರ್ ನಲ್ಲಿ ಕೆಲಸ ಮಾಡುವ
ಕಾರ್ಮಿಕರಿಗೆ ಯಾವುದೇ ಸುರಕ್ಷಿತ ಕ್ರಮಗಳನ್ನ ಕೈಗೊಳ್ಳದೇ ನಿರ್ಲಕ್ಷ್ಯ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.
ಈ ಘಟನೆಯಲ್ಲಿ ಗಾಯಗೊಂಡಿರುವ ಒಬ್ಬರನ್ನು ಬೆಂಗಳೂರಿನ ಸಂಜಯ್ ಗಾಂಧಿ ಆಸ್ಪತ್ರೆಗೆ ಹೆಚ್ವಿನ ಚಿಕಿತ್ಸೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕ್ಯಾತಸಂದ್ರ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನ ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ.
ಜಿಲ್ಲೆಯಲ್ಲಿ ಕ್ರಷರ್ ಗಳು ಹೆಚ್ಚುತ್ತಿದ್ದು ಇಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಯಾವುದೇ ಮುಂಜಾಗ್ರತೆ ವಹಿಸದಿರುವುದೇ ಕೆಲಸ ಮಾಡುವ ಕಾರ್ಮಿಕರು ಬಲಿಯಾಗುತ್ತಿದ್ದಾರೆ, ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಅಗತ್ಯ ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.