![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 12, 2021, 1:39 PM IST
ತುಮಕೂರು: ಕೋವಿಡ್ 2ನೇ ಅಲೆ ಎಲ್ಲ ಕಡೆ ಹೆಚ್ಚುತ್ತಿರುವ ಪರಿಣಾಮ ಕೋವಿಡ್ ನಿಯಂತ್ರಿಸಲು45 ವರ್ಷ ಮೇಲ್ಪಟ್ಟಿರುವ ಪ್ರತಿಯೊಬ್ಬ ನಾಗರಿಕರು ತಪ್ಪದೇ ಕೊರೊನಾ ಲಸಿಕೆ ಪಡೆಯ ಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಸೂಚಿಸಿದರು.
ನಗರದ ಜಿಲ್ಲಾಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಜಿಲ್ಲಾ ಆರೋಗ್ಯಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಕೋವಿಡ್ ಲಸಿಕಾ ಉತ್ಸವಕ್ಕೆ ಚಾಲನೆನೀಡಿ ಮಾತನಾಡಿದ ಅವರು, ಭಾನುವಾರದಿಂದಏ.14ರವರೆಗೆ ಹಮ್ಮಿಕೊಳ್ಳಲಾಗಿರುವ ಕೋವಿಡ್ ಲಸಿಕಾಉತ್ಸವಕ್ಕೆ ಚಾಲನೆ ನೀಡಲಾಗಿದೆ. ಪ್ರಧಾನಮಂತ್ರಿಗಳುದೇಶಾದ್ಯಂತ ಏ.11ರಿಂದ 14ರ ವರೆಗೆ ಲಸಿಕಾ ಉತ್ಸವನಡೆಸಲು ನಿರ್ದೇಶನ ನೀಡಿದ್ದಾರೆ. ಅದರಂತೆ ರಾಜ್ಯದಲ್ಲೂ ಲಸಿಕಾ ಉತ್ಸವವನ್ನು ಅತ್ಯಂತ ಯಶಸ್ವಿಯಾಗಿ ಆಚರಿಸಲಾಗುತ್ತಿದ್ದು, ಇದರ ಭಾಗವಾಗಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ಲಸಿಕಾ ಕೇಂದ್ರವನ್ನು ಉದ್ಘಾಟನೆಮಾಡಲಾಗಿದೆ ಎಂದರು.
ಅಡ್ಡಪರಿಣಾಮ ಇಲ್ಲ: ಲಸಿಕೆ ಪಡೆಯುವುದರಿಂದ ಯಾವುದೇ ದುಷ್ಪರಿಣಾಮ ಇಲ್ಲ. ಈಗಾಗಲೇಪ್ರಧಾನಮಂತ್ರಿ ಸೇರಿದಂತೆ ಎಲ್ಲ ಚುನಾಯಿತ ಪ್ರತಿನಿಧಿ ಗಳು, ಅಧಿಕಾರಿಗಳು ಲಸಿಕೆ ಪಡೆದುಕೊಂಡಿದ್ದಾರೆ.ಇದರಿಂದ ಯಾವುದೇ ರೀತಿಯ ಅಡ್ಡಪರಿಣಾಮ ಇಲ್ಲ.ಯಾರೂ ಭಯಪಡುವ ಅಗತ್ಯವಿಲ್ಲ. ಮೊದಲನೇ ಡೋಸ್ ಮತ್ತು 2ನೇ ಡೋಸ್ ಎರಡನ್ನುಪಡೆಯುವುದರಿಂದ ಜನರಲ್ಲಿ ಇದರ ಬಗ್ಗೆ ವಿಶ್ವಾಸಮೂಡಿ ಕೋವಿಡ್ ಮಹಾಮಾರಿಯನ್ನು ತಡೆಯುವನಿಟ್ಟಿನಲ್ಲಿ ಯಶಸ್ವಿಯಾಗಬಹುದು ಎಂದರು.
ಕೋವಿಡ್ ಲಸಿಕಾ ಉತ್ಸವಕ್ಕೆ ಚಾಲನೆ ನೀಡಿದ ಬಳಿಕಜಿಲ್ಲಾಧಿಕಾರಿಗಳು, ಲಸಿಕೆ ಪಡೆಯಲು ಬಂದಿದ್ದವರಆಧಾರ್ ಕಾರ್ಡ್ ಎಂಟ್ರಿ ಸೇರಿದಂತೆ ಎಲ್ಲ ದಾಖಲಾತಿಪರಿಶೀಲಿಸಿ, ವೈದ್ಯರಿಂದ ಮಾಹಿತಿ ಪಡೆದು ಅಗತ್ಯ ಸಲಹೆ-ಸೂಚನೆಗಳನ್ನು ನೀಡಿದರು. ಉಪವಿಭಾಗಾಧಿ ಕಾರಿ ಅಜಯ್, ತಹಶೀಲ್ದಾರ್ ಮೋಹನ್‌ಕುಮಾರ್,ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಸುರೇಶ್‌ಬಾಬು, ಆರ್‌ಎಂಒಡಾ.ಎಚ್. ವೀಣಾ, ಪಾಲಿಕೆ ಆಯುಕ್ತೆ ರೇಣುಕಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಟರಾಜು, ಡಾ. ಕೇಶವರಾಜು, ಡಾ. ಸನತ್‌ಕುಮಾರ್,ಡಾ. ಮೋಹನ್‌ದಾಸ್, ತಾಲೂಕು ಆರೋಗ್ಯಾಧಿಕಾರಿಡಾ. ಮೋಹನ್, ಡಾ. ಹಂಸ, ಆರ್.ಐ. ಶಿವಣ್ಣ ಇದ್ದರು.
ಸಾರ್ವಜನಿಕರಲ್ಲಿ ಅರಿವು ಮೂಡಿಸಿ: ಒಂದು ಗಂಟೆಗೂ ಅಧಿಕ ಕಾಲ ವೈದ್ಯರೊಂದಿಗೆ ಸಮಾಲೋಚನೆನಡೆಸಿದ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು, ಕೋವಿಡ್ ಲಸಿಕಾ ಉತ್ಸವವನ್ನು ಅತ್ಯಂತ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಎಲ್ಲರೂ ಕಾರ್ಯೋನ್ಮುಖರಾಗಬೇಕು.ಲಸಿಕೆ ಪಡೆಯುವ ಸಂಬಂಧ ಸಾರ್ವಜನಿಕರಲ್ಲಿ ಆಶಾಕಾರ್ಯಕರ್ತರು, ಆರೋಗ್ಯ ಕಾರ್ಯಕರ್ತರ ಮೂಲಕ ಅರಿವು ಮೂಡಿಸುವಂತೆ ತಿಳಿಸಿದರು
ಕೋವಿಡ್ ಎರಡನೇ ಅಲೆ ಎಲ್ಲ ಕಡೆ ತೀವ್ರವಾಗುತ್ತಿದೆ. ಪ್ರತಿಯೊಬ್ಬರುಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ತಪ್ಪದೇ ಪಾಲಿಸಬೇಕು. ಹೆಚ್ಚು ಗುಂಪು ಸೇರಬಾರದು. ಸಾಮಾಜಿಕ ಅಂತರ ಇರಬೇಕು. 45 ವರ್ಷದ ಮೇಲ್ಪಟ್ಟವರು ಲಸಿಕೆ ಪಡೆದುಕೊಳ್ಳಬೇಕು. –ವೈ.ಎಸ್.ಪಾಟೀಲ, ಜಿಲ್ಲಾಧಿಕಾರಿ
Congress: ಹೈಕಮಾಂಡ್ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್.ರಾಜಣ್ಣ
Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ
Tumkur: ಪರಂ, ರಾಜಣ್ಣ ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್
Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ
Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿಲ್ಲಿಂಗ್; ಓರ್ವ ಆರೋಪಿ ಬಂಧನ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.