3ನೇ ಅಲೆ ತಡೆಗೆ ತುಮಕೂರು ಜಿಲ್ಲಾಡಳಿತದಿಂದ ಸಿದ್ಧ
ಜಿಲ್ಲೆಯಲ್ಲಿ ಕೈಗೊಂಡ ಕಠಿಣ ಕ್ರಮದಿಂದ ಸೋಂಕು ಇಳಿಮುಖ! ಸೋಂಕಿತರ ಚೇತರಿಕೆ ಪ್ರಮಾಣದಲ್ಲೂ ಏರಿಕೆ: ಮಾಧುಸ್ವಾಮಿ
Team Udayavani, May 14, 2021, 4:46 PM IST
ತುಮಕೂರು: ಜಿಲ್ಲೆಯಲ್ಲಿ ಕೈಗೊಂಡ ಕಟ್ಟುನಿಟ್ಟಿನ ಕ್ರಮಗಳಿಂದ ಕೋವಿಡ್ ಸೋಂಕು ನಿಯಂತ್ರಣಕ್ಕೆ ಬರುತ್ತಿದ್ದು, ಶೇಕಡಾವಾರು ಪಾಸಿಟಿವ್ ಪ್ರಕರಣಗಳ ಪ್ರಮಾಣ ಇಳಿಕೆಯಾಗುತ್ತಿದೆ. ಆರಂಭದಲ್ಲಿ ಶೇ. 45ರಷ್ಟಿದ್ದ ಪಾಸಿಟಿವ್ ಪ್ರಮಾಣ ಶೇ.40ಕ್ಕೆ ತಗ್ಗಿದೆ. ಮುಂದೆ ಬರಲಿರುವ ಮೂರನೇ ಅಲೆಯ ತಡೆಗೂ ಅಗತ್ಯ ಕ್ರಮಗಳನ್ನು ಜಿಲ್ಲಾಡಳಿತದಿಂದ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲ ಕಡೆ ವ್ಯಾಪಕವಾಗಿ ಹರಡುತ್ತಿದ್ದ ಕೋವಿಡ್ ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ದಿಂದ ಹಾಸಿಗೆ, ಆಮ್ಲಜನಕ ಹಾಗೂ ವೈದ್ಯಕೀಯ ಚಿಕಿತ್ಸೆ ಸೇರಿದಂತೆ ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ, ಎಲ್ಲ ರೀತಿಯಲ್ಲಿಯೂ ಕ್ರಮ ಕೈಗೊಂಡ ಪರಿಣಾಮ ಕೋವಿಡ್ ನಿಯಂತ್ರಣ ದಲ್ಲಿ ಸುಧಾರಣೆ ಕಂಡು ಬಂದಿದೆ. ಸೋಂಕಿತರ ಚೇತರಿಕೆ ಪ್ರಮಾಣವೂ ಏರಿಕೆಯಾಗುತ್ತಿದೆ ಎಂದರು.
ಮುಂದೆ ಕೊರೊನಾ ಮೂರನೇ ಅಲೆ ಬರುತ್ತದೆ ಎಂದು ತಜ್ಞರು ಹೇಳುತ್ತಿದ್ದಾರೆ. ಆ ಸಮಯದಲ್ಲಿ ಜನರಿಗೆ ಕೊರೊನಾದಿಂದ ತೊಂದರೆ ಆಗಬಾರದು ಎಂದು ಅಗತ್ಯ ಕ್ರಮ ಜಿಲ್ಲಾಡಳಿತದಿಂದ ಈಗಿನಿಂದಲೇ ಕೈಗೊಳ್ಳಲಾಗುತ್ತಿದೆ ಎಂದರು.
ಕಳೆದ ಏಪ್ರಿಲ್ ತಿಂಗಳಲ್ಲಿ 18,749 ಪಾಸಿಟಿವ್ ಪ್ರಕರಣ ವರದಿಯಾಗಿದ್ದು, ಇವರಲ್ಲಿ 8,812 ಸೋಂಕಿ ತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದರು. ಹಾಗೂ 69 ಸೋಂಕಿತರು ಸಾವನ್ನಪ್ಪಿ ದರು. ಅದೇ ರೀತಿ ಮೇ 1ರಿಂದ 12ರವರೆಗೆ 26,790 ಪಾಸಿಟಿವ್ ಪ್ರಕರಣ ಕಂಡು ಬಂದಿದ್ದು, 12,650 ಸೋಂಕಿತರು ಬಿಡುಗಡೆಯಾಗಿದ್ದಾರೆ. 162 ಮಂದಿ ಸಾವನ್ನಪ್ಪಿದ್ದಾರೆ ಎಂದರು.
ಅಕ್ಸಿಜನ್ ಸಮಸ್ಯೆಯಾಗದಂತೆ ಕ್ರಮ: ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಆಮ್ಲಜನಕದ ಸಮಸ್ಯೆಯಾಗ ದಂತೆ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾಸ್ಪತ್ರೆ ಸೇರಿದಂತೆ ತಾಲೂಕು ಆಸ್ಪತ್ರೆಗಳಲ್ಲಿ ಆಮ್ಲಜನಕ ಉತ್ಪಾದನಾ ಘಟಕ ಸ್ಥಾಪನೆಗೆ ಚಿಂತನೆ ನಡೆಸಲಾಗಿದೆ. ಈಗಾಗಲೇ ಜಿಲ್ಲಾಸ್ಪತ್ರೆಯಲ್ಲಿ ಘಟಕ ಸ್ಥಾಪನೆ ಅಡಿಪಾಯಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದೇನೆ. ಇದಲ್ಲದೆ 110 ಆಮ್ಲಜನಕ ಸಾಂದ್ರಕಗಳ ಮೂಲಕವೂ ಸೋಂಕಿತರಿಗೆ ಆಮ್ಲಜನಕ ನೀಡಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಕೈಗಾರಿಕೋದ್ಯಮಿಗಳಿಂದ 250 ಆಮ್ಲಜನಕ ಸಾಂದ್ರಕ ಗಳ ನೆರವು ಸಿಗಲಿದೆ. ಈ ಆಮ್ಲಜನಕ ಸಾಂದ್ರಕ ಜಿಲ್ಲಾಸ್ಪತ್ರೆ ಸೇರಿದಂತೆ ತಾಲೂಕು ಆಸ್ಪತ್ರೆಗಳಿಗೂ ನೀಡಿ ಸೋಂಕಿತರಿಗೆ ಸಮಸ್ಯೆಯಾಗದಂತೆ ಆಮ್ಲಜನಕ ಪೂರೈಕೆ ಮಾಡಲಾಗುವುದು. ಎಲ್ಲ ತಾಲೂಕು ಆಸ್ಪತ್ರೆ ಗಳಲ್ಲಿಯೂ ಉತ್ತಮ ಕಾರ್ಯ ನಡೆಯುತ್ತಿದೆ. ಇದರಿಂದ ಜಿಲ್ಲಾಸ್ಪತ್ರೆ ಮೇಲಿನ ಒತ್ತಡ ತಗ್ಗಿದೆ ಎಂದರು.
ಜಿಲ್ಲೆಗೆ 23ಕೆಎಲ್ ಆಮ್ಲಜನಕದ ಅಗತ್ಯವಿದ್ದು, ಸದ್ಯ 16ಕೆಎಲ್ ಮಾತ್ರ ಲಭ್ಯವಿದೆ. ಕೊರತೆಯಿರುವ ಆಮ್ಲಜನಕದ ಬೇಡಿಕೆ ಪೂರೈಸುವಂತೆ ಮನವಿ ಮಾಡಿದ್ದರಿಂದ 23ಕೆಎಲ್ ಆಮ್ಲಜನಕ ಹಂಚಿಕೆಯಾಗಿದ್ದು, ಅಗತ್ಯಕ್ಕನುಗುಣವಾಗಿ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ ಸೇರಿದಂತೆ ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಗೆ ಮಾಡಲಾಗುವುದು ಎಂದು ತಿಳಿಸಿದರು. ಕೋವಿಡ್ ಪರೀಕ್ಷೆ ಸುಸೂತ್ರ: ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆ ಸುಸೂತ್ರವಾಗಿ ನಡೆಯುತ್ತಿದೆ. ತುಮಕೂರು ಹಾಗೂ ತಿಪಟೂರಿನಲ್ಲಿ ಲ್ಯಾಬ್‌ಗಳಿದ್ದು, ತುಮಕೂರಿನ ಲ್ಯಾಬ್‌ನಲ್ಲಿ ಎರಡೂವರೆ ಸಾವಿರ ಮತ್ತು ತಿಪಟೂರು ಲ್ಯಾಬ್‌ನಲ್ಲಿ ಒಂದೂವರೆ ಸಾವಿರ ಪರೀಕ್ಷೆ ಮಾಡಲಾಗುತ್ತಿದೆ. ಇದಲ್ಲದೆ ಶಿರಾದಲ್ಲೂ ಲ್ಯಾಬ್ ತೆರೆಯಲು ಯೋಜನೆ ರೂಪಿಸಲಾಗಿದ್ದು, ಶೀಘ್ರ ಪ್ರಾರಂಭವಾಗಲಿದೆ. ಈ ಲ್ಯಾಬ್‌ನಲ್ಲಿಯೂ ಒಂದು ಸಾವಿರ ಕೋವಿಡ್ ಪರೀಕ್ಷೆ ಮಾಡಬಹುದು. ಇದಲ್ಲದೆ, ಲ್ಯಾಬ್ ಆನ್ ರೋಡ್ ವಾಹನದ ಮೂಲಕವೂ ಸ್ಥಳಕ್ಕೆ ಹೋಗಿ ಟೆಸ್ಟಿಂಗ್ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಅಗತ್ಯ ವಸ್ತುಗಳ ನೆರವಿಗೆ ಕ್ರಮ: ಕುಟುಂಬ ಸದಸ್ಯರೆಲ್ಲರಿಗೂ ಸೋಂಕು ತಗುಲಿದ್ದರೆ ಅವರಿಗೆ ಊಟ-ತಿಂಡಿ, ಔಷಧ ಸೇರಿದಂತೆ ಅಗತ್ಯ ವಸ್ತುಗಳ ಪೂರೈಕೆಗೂ ಜಿಲ್ಲಾಡಳಿತದಿಂದ ಕ್ರಮ ಕೈಗೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಸೇವೆಗೆ ಮುಂದಾಗಿರುವ 350 ಎನ್ ಜಿಒಗಳನ್ನು ಗುರುತಿಸಿ ಆಯ್ಕೆ ಮಾಡಲಾಗಿದೆ. ಗ್ರಾಮೀಣ ಭಾಗದಲ್ಲಿ ಆಶಾ-ಅಂಗನವಾಡಿ ಕಾರ್ಯ ಕರ್ತೆ ಯರ ಸಹಕಾರ ದೊರಕಿದೆ. ಆಮ್ಲಜನಕ, ರೆಮ್ ಡೆಸಿವಿಯರ್ ಸೇರಿದಂತೆ ಬಹುತೇಕ ಎಲ್ಲ ಸಮಸ್ಯೆಗಳು ನಿವಾರಣೆಯಾಗಿವೆ. ಸರ್ಕಾರಿ ಆಸ್ಪತ್ರೆಗಳಲ್ಲಿ ರೆಮ್ ಡೆಸಿವಿಯರ್ ಕೊರತೆಯಿಲ್ಲ. ಸರ್ಕಾರಿ ಆಸ್ಪತ್ರೆಯಿಂದ ರೆಫರ್ ಮಾಡಲಾದ ಸೋಂಕಿತರಿಗೂ ರೆಮ್ ಡೆಸಿವಿಯರ್ ಅಭಾವವಿಲ್ಲ. ಆದರೆ, ಖಾಸಗಿ ಆಸ್ಪತ್ರೆಗಳಲ್ಲಿ ಕೊಂಚ ಸಮಸ್ಯೆ ಉಂಟಾಗಿದೆ ಎಂಬ ಮಾತುಗಳು ಕೇಳಿಬಂದಿವೆ. ಅದರ ನಿವಾರಣೆಗೂ ಸಾಕಷ್ಟು ಕ್ರಮ ಕೈಗೊಳ್ಳಲಾಗಿದೆ ಎಂದರು.
ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ, ಜಿಪಂ ಸಿಇಒ. ಡಾ.ಕೆ ವಿದ್ಯಾಕುಮಾರಿ, ಎಸ್‌ಪಿ ಡಾ.ಕೆ. ವಂಶಿಕೃಷ್ಣ, ಅಪರ ಜಿಲ್ಲಾಧಿಕಾರಿ ಕೆ.ಚೆನ್ನಬಸಪ್ಪ, ಉಪ ವಿಭಾಗಾಧಿ ಕಾರಿ ಅಜಯ್, ಡಿಎಚ್‌ಒ ಡಾ. ನಾಗೇಂದ್ರಪ್ಪ ಹಾಗೂ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.