ಕರ್ತವ್ಯ ನಿರತ ಪೊಲೀಸರ ಮೇಲೆ ಲಾಠಿ ಕಸಿದು ಹಲ್ಲೆ; ಪ್ರಕರಣ ದಾಖಲು

ಗ್ರಾಮಲೆಕ್ಕಿಗ ಸೇರಿದಂತೆ ಇಬ್ಬರ ಬಂಧನ

Team Udayavani, Jan 17, 2023, 2:12 PM IST

11-kunigal

ಕುಣಿಗಲ್: ಇಬ್ಬರು ವ್ಯಕ್ತಿಗಳು ಕರ್ತವ್ಯ ನಿರತ ಇಬ್ಬರು ಪೊಲೀಸರ ಕೈಯಲ್ಲಿದ್ದ ಲಾಠಿ ಕಿತ್ತುಕೊಂಡು ಹಲ್ಲೆ ನಡೆಸಿರುವ ಘಟನೆ ಕಳೆದ ರಾತ್ರಿ ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ನಡೆದಿದ್ದು, ಘಟನೆ ಸಂಬಂಧಿಸಿದಂತೆ ಗ್ರಾಮಲೆಕ್ಕಿಗ ಸೇರಿದಂತೆ ಸೇರಿದಂತೆ ಇಬ್ಬರು ಆರೋಪಿಗಳನ್ನು ಕುಣಿಗಲ್ ಪೊಲೀಸರು ಬಂಧಿಸಿದ್ದಾರೆ.

ಕುಣಿಗಲ್ ಪೊಲೀಸ್ ಠಾಣೆಯ ಕಾನ್ಸ್ಟೇಬಲ್‌ಗಳಾದ ಮಿಥನ್, ಸುಮನ್ ಅವರ ಮೇಲೆ ಹೌಸಿಂಗ್ ಬೋರ್ಡ್ ಕಾಲೋನಿ ನಿವಾಸಿಗಳಾದ ಗ್ರಾಮಲೆಕ್ಕಿಗ ವೆಂಕಟೇಶ್ ಹಾಗೂ ರಾಮಚಂದ್ರ ಹಲ್ಲೆ ಮಾಡಿರುವ ವ್ಯಕ್ತಿಗಳು ಎಂದು ತಿಳಿದು ಬಂದಿದೆ.

ಘಟನೆ ವಿವರ: ಕಳೆದ ರಾತ್ರಿ ಸುಮಾರು 11-45ಕ್ಕೆ ಪೊಲೀಸ್ ಕಾನ್ಸ್ಟೇಬಲ್‌ಗಳಾದ ಮಿಥನ್ ಹಾಗೂ ಸುಮನ್  ಹೌಸಿಂಗ್ ಬೋರ್ಡ್ ಸ್ಟೇಲ್ಲಾ ಮೇರಿಸ್ ಸ್ಕೂಲ್ ರಸ್ತೆಯಲ್ಲಿನ ಮೋದಿ ಕೇರ್ ಅಂಗಡಿಯ ಮುಂಭಾಗದಲ್ಲಿ ಸೆಲ್ಪಿ ತೆಗೆದುಕೊಳ್ಳುತ್ತಿರುವಾಗ ಅಲ್ಲೆ ಎದುರಿನ ಮನೆ ಮೇಲೆ ಇದ್ದ ಇಬ್ಬರು ವ್ಯಕ್ತಿಗಳು ಸಮವಸ್ತ್ರದಲ್ಲಿದ್ದ ಕಾನ್ಸ್ಟೇಬಲ್‌ಗಳನ್ನು ನೋಡಿ ಯಾರೋ ನೀವು ಮೋದಿ ಕೇರ್ ಮುಂದೆ ಸೆಲ್ಪಿ ಪೋಟೊ ತೆಗೆದುಕೊಳ್ಳುತ್ತೀರ ಎಂದು ಅವಾಚ್ಯವಾದ ಶಬ್ದಗಳಿಂದ ನಿಂದಿಸಿ ಕೂಗಾಡಿದ್ದಾರೆ. ಬಳಿಕ ಕಾನ್ಸ್ಟೇಬಲ್‌ಗಳು, ನಾವು ಪೊಲೀಸರು ರಾತ್ರಿ ಗಸ್ತಿಗಾಗಿ ಬಂದಿದ್ದೇವೆ. ನಮ್ಮ ಹಾಜರಾತಿಗಾಗಿ ಸೆಲ್ಪಿ ತೆಗೆದುಕೊಳ್ಳುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಕೂಡಲೇ ಆ ಇಬ್ಬರು ವ್ಯಕ್ತಿಗಳು ಮನೆಯಿಂದ ಇಳಿದು ಬಂದು ಕುಣಿಗಲ್‌ನಲ್ಲಿ ಇರುವ ಎಲ್ಲಾ ಮೋದಿ ಕೇರ್ ಮುಂದೆಯೂ ಸೆಲ್ಪಿ ಪೋಟೋ ತೆಗೆದುಕೊಳ್ಳುತ್ತೀರ ಎಂದು ಏರುದ್ವನಿಯಲ್ಲಿ ಕೂಗಾಡಿ ಸಮವಸ್ತ್ರದಲ್ಲಿದ್ದ ಇಬ್ಬರು ಕಾನ್ಸ್ಟೇಬಲ್‌ಗಳ ಮೇಲೆ ಕೈಯಿಂದ ಹಲ್ಲೆ ನಡೆಸಿರುವುದಲ್ಲದೆ ಕಾನ್ಸ್ಟೇಬಲ್ ಕೈಯಲ್ಲಿದ್ದ ಲಾಠಿಯನ್ನು ಕಿತ್ತುಕೊಂಡು ಹಲ್ಲೆ ನಡೆಸಿದ್ದು ಮಾತ್ರವಲ್ಲದೇ ಮೊಬೈಲ್‌ ಕಿತ್ತುಕೊಂಡು ಹಾಳು ಮಾಡಿದ್ದಾರೆ.

ಈ ಸಂದರ್ಭದ ಕುರಿತು ಕಾನ್ಸ್ಟೇಬಲ್ ಮಿಥುನ್ ಘಟನೆಯಲ್ಲಿ ನನಗೆ ಗಾಯವಾಗಿದೆ ಎಂದು ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದು, ಕಾನ್ಸ್ಟೇಬಲ್ ಸುಮನ್ ತಕ್ಷಣ 112 ಕ್ಕೆ ಕರೆ ಮಾಡಿದ್ದು, 112 ಸಿಬ್ಬಂದಿ ಸ್ಥಳಕ್ಕೆ ಬಂದು ಜಗಳ ಮಾಡುತ್ತಿದ್ದವರಿಂದ ಕಾನ್ಸ್ಟೇಬಲ್‌ಗಳನ್ನು ಬಿಡಿಸಿದ್ದಾರೆ ಎಂದು ವಿವರಿಸಿದ್ದಾರೆ.  ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪಟ್ಟಣದ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

Border Gavaskar Trophy: India ready for Kangaroo Challenge; What is the team’s strength?

Border Gavaskar Trophy: ಕಾಂಗರೂ ಚಾಲೆಂಜ್‌ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

isrel netanyahu

Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

1-qeqwe

Russia ದಿಂದ ಉಕ್ರೇನ್‌ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

4-kunigal

Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ

14-kunigal

Kunigal: ಟೈರ್ ಸ್ಪೋಟಗೊಂಡು ಕಾರು ಪಲ್ಟಿ: ಐಟಿ ಉದ್ಯೋಗಿ ದುರ್ಮರಣ

MUST WATCH

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

ಹೊಸ ಸೇರ್ಪಡೆ

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Border Gavaskar Trophy: India ready for Kangaroo Challenge; What is the team’s strength?

Border Gavaskar Trophy: ಕಾಂಗರೂ ಚಾಲೆಂಜ್‌ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

isrel netanyahu

Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.