ಜನತಾ ದರ್ಶನಕ್ಕೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸರ್ಕಾರಿ ಬಸ್ ನಲ್ಲಿ ತೆರಳಿದ ಅಧಿಕಾರಿಗಳು
Team Udayavani, Oct 31, 2023, 2:04 PM IST
ತುಮಕೂರು: ರಾಜ್ಯದೆಲ್ಲೆಡೆ ಚಾಲ್ತಿಯಾಗಿರುವ ಅಧಿಕಾರಿಗಳ ಬಸ್ ಪ್ರಯಾಣ ಕಲ್ಪತರುನಾಡು ತುಮಕೂರಿನಲ್ಲಿಯೂ ಮುಂದುವರೆದಿದ್ದು, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಮುಂದಾಳತ್ವದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಕೆ.ಎಸ್.ಆರ್.ಟಿ.ಸಿ ಬಸ್ನಲ್ಲಿ ಜನತಾದರ್ಶನ ನಡೆಯುವ ಹುಲಿಯೂರುದುರ್ಗಕ್ಕೆ ಪ್ರಯಾಣಿಸುವ ಮೂಲಕ ಗಮನ ಸೆಳೆದರು.
ಕುಣಿಗಲ್ ತಾಲೂಕು ಹುಲಿಯೂರುದುರ್ಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಆ.31ರ ಮಂಗಳವಾರ ಏರ್ಪಡಿಸಿದ್ದ ಜನತಾದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಲು ಜಿಲ್ಲೆಯ ಎಲ್ಲಾ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಹಾಗೂ ಜಿ.ಪಂ. ಸಿಇಓ ಜಿ. ಪ್ರಭು ಅವರೊಂದಿಗೆ ಕೆಎಸ್ಸಾರ್ಟಿಸಿ ಬಸ್ನಲ್ಲಿ ಪ್ರಯಾಣಿಸಿದರು.
ಕಾರುಗಳನ್ನು ತೊರೆದು ಸಾರ್ವಜನಿಕ ಸಾರಿಗೆ ಬಳಸುವ ಮೂಲಕ ಇತರೆ ಜಿಲ್ಲೆಯ ಅಧಿಕಾರಿಗಳಿಗೆ ತುಮಕೂರು ಜಿಲ್ಲೆಯ ಅಧಿಕಾರಿಗಳು ಮಾದರಿಯಾದರು.
ತಮ್ಮ ಗ್ರಾಮಕ್ಕೆ ಇಂದು ಸಾಲು ಸಾಲಾಗಿ ಸರ್ಕಾರಿ ಕಾರುಗಳಲ್ಲಿ ಅಧಿಕಾರಿಗಳು ಬರುತ್ತಾರೆ ಎಂದು ಎದುರು ನೋಡುತ್ತಿದ್ದ ಗ್ರಾಮಸ್ಥರು ಕೆಎಸ್ಸಾರ್ಟಿಸಿ ಬಸ್ನಲ್ಲಿ ಬಂದಿಳಿದ ಜಿಲ್ಲಾಧಿಕಾರಿಗಳ ಸರಳತೆಯನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kunigal: ಬೈಕ್, ಕ್ಯಾಂಟರ್ ಮುಖಾಮುಖಿ ಢಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು
Gubbi: ಮೀಟರ್ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಬೇಸತ್ತು ಪೌರ ಕಾರ್ಮಿಕ ಆತ್ಮಹತ್ಯೆ
Koratagere: ವೃದ್ದೆ ಮೇಲೆ ಕೆಎಸ್ಆರ್ಟಿಸಿ ಬಸ್ ಹರಿದು ಸಾವು
Hunasur: ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ತಿಪಟೂರಿನ ಮಹಿಳೆ!
Kunigal: ಅಪ್ರಾಪ್ತೆಯ ಅಪಹರಣ, ಲೈಂಗಿಕ ದೌರ್ಜನ್ಯ; ಗುಜರಾತ್ ನಲ್ಲಿ ಬಂಧನ
MUST WATCH
ಹೊಸ ಸೇರ್ಪಡೆ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Belagavi Session: ಬರಾಕ್ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.