ಡ್ರಾಪ್‌ ಔಟ್‌ ಸಮಸ್ಯೆ ತಡೆಯಲು ಪ್ರಯತ್ನಿಸಿ: ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್

ತುಮಕೂರು ವಿವಿ 16ನೇ ಘಟಿಕೋತ್ಸವ

Team Udayavani, Aug 7, 2023, 10:01 PM IST

ಡ್ರಾಪ್‌ ಔಟ್‌ ಸಮಸ್ಯೆ ತಡೆಯಲು ಪ್ರಯತ್ನಿಸಿ: ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್

ತುಮಕೂರು : ವಿಶ್ವವಿದ್ಯಾಲಯಗಳು ಮತ್ತು ಅದರ ಸಂಯೋಜಿತ ಕಾಲೇಜುಗಳು ಒಂದು ಕಾಲೇಜು, ಒಂದು ಗ್ರಾಮವನ್ನು ದತ್ತು ತೆಗೆದುಕೊಂಡು ಅಭಿವೃದ್ಧಿಗೆ ಮುಂದಾಗಬೇಕು. ಶಾಲಾ ಕಾಲೇಜುಗಳಲ್ಲಿ ಡ್ರಾಪ್‌ ಔಟ್‌ ಸಮಸ್ಯೆಯನ್ನು ತಡೆಯಲು ಪ್ರಯತ್ನಿಸಬೇಕು ಎಂದು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್ ತಿಳಿಸಿದರು.

ತುಮಕೂರು ವಿಶ್ವವಿದ್ಯಾಲಯದ ಡಾ.ಶ್ರೀಶಿವಕುಮಾರ ಸ್ವಾಮಿ ಸಭಾಂಗಣದಲ್ಲಿ ಸೋಮವಾರ ನಡೆದ 16ನೇ ಘಟಿಕೋತ್ಸವದಲ್ಲಿ ಮಾತನಾಡಿ, ಶೈಕ್ಷಣಿಕ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಣಬೇಕಾದರೆ, ಮೊದಲಿಗೆ ಡ್ರಾಪ್‌ ಔಟ್‌ ಸಮಸ್ಯೆ ಬಗೆಹರಿಸಬೇಕು. ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿ, ಬಗೆಹರಿಸಲು ಪ್ರಯತ್ನಿಸಬೇಕು. ಉತ್ತಮ ಶಿಕ್ಷಣ ಪಡೆಯಲು ಅವರಿಗೆ ಅನುಕೂಲ ಮಾಡಿಕೊಡಬೇಕು ಎಂದರು.

ನಮ್ಮ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಪ್ರದಾಯವು ಬಹಳ ಪುರಾತನವಾಗಿದೆ. ಅನಾದಿ ಕಾಲದಿಂದಲೂ ವಸುದೈವ ಕುಟುಂಬಕಂ ತತ್ವಶಾಸ್ತ್ರ ಮತ್ತು ಧ್ಯಾನದ ಮೇಲೆ ಕೇಂದ್ರೀಕೃತವಾಗಿದೆ. ನಾವು ಸಾರ್ವತ್ರಿಕ ಸಹೋದರತ್ವ ಮತ್ತು ವಿಶ್ವಶಾಂತಿಗಾಗಿ ಶ್ರಮಿಸುತ್ತೇವೆ. ಸಮಾನತೆ ಮತ್ತು ಸಾಮರಸ್ಯವನ್ನು ಶಿಕ್ಷಣ ನೀಡುತ್ತದೆ ಎಂದು ಹೇಳಿದರು.

ನವದೆಹಲಿಯ ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯ ಕುಲಪತಿ ಪ್ರೊ.ಸಾಂತಿಶ್ರೀ ಧೂಳಿಪುಡಿ ಪಂಡಿತ್‌ ಮಾತನಾಡಿ, ಜೆಎನ್‌ಯುನಲ್ಲಿ ಕನ್ನಡ ಪೀಠ ಸ್ಥಾಪಿಸಿದ್ದು, ಕರ್ನಾಟಕದ ಹಾಗೂ ಕನ್ನಡ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಪೀಠ ಅಭಿವೃದ್ಧಿಗೆ ಕರ್ನಾಟಕ ಸರ್ಕಾರ ಅನುದಾನ ನೀಡಬೇಕು ಎಂದು ಮನವಿ ಮಾಡಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಕುಲಾಧಿಪತಿಗಳೂ ಆದ ರಾಜ್ಯಪಾಲರು, ಕನ್ನಡದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕನ್ನಡ ಪೀಠವನ್ನು ಅಭಿವೃದ್ಧಿಗೆ ಸಹಕಾರ ನೀಡಲಾಗುವುದು. ಈ ಸಂಬಂಧ ಉನ್ನತ ಶಿಕ್ಷಣ ಸಚಿವರು, ಸರ್ಕಾರ ಕ್ರಮವಹಿಸಲಿದೆ ಎಂದರು.

ಘಟಿಕೋತ್ಸವದಲ್ಲಿ ರಾಜ್ಯಾಪಾಲರು ಸಮಾಜ ಸೇವಕ ಆರ್‌.ಎಲ್‌.ರಮೇಶ್‌ ಬಾಬು ಮತ್ತು ಚಲನಚಿತ್ರ ನಿರ್ದೇಶಕ ಟಿ.ಎಸ್‌.ನಾಗಾಭರಣ ಅವರಿಗೆ ಗೌರವ ಡಾಕ್ಟರೇಟ್‌ ನೀಡಿ ಗೌರವಿಸಿದರು. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್‌, ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು, ಕುಲಸಚಿವರಾದ ನಹೀದಾ ಜಮ್‌ ಜಮ್‌, ಪೊ›.ಕೆ.ಪ್ರಸನ್ನ ಕುಮಾರ್‌ ಉಪಸ್ಥಿತರಿದ್ದರು.

10273 ಮಂದಿಗೆ ಪದವಿ ಪ್ರಧಾನ: ಘಟಿಕೋತ್ಸವದಲ್ಲಿ ಸ್ನಾತಕ 8756 ಮತ್ತು ಸ್ನಾತಕೋತ್ತರ 1517 ವಿದ್ಯಾರ್ಥಿಗಳು ಸೇರಿ ಒಟ್ಟು 10273 ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಯಿತು. ಒಟ್ಟು 80 ವಿದ್ಯಾರ್ಥಿಗಳಿಗೆ 90 ಬಂಗಾರದ ಪದಕ ಹಾಗೂ 6 ನಗದು ಬಹುಮಾನ ಪ್ರದಾನ ಮಾಡಲಾಯಿತು. ಕಲಾನಿಕಾಯದ 44 ಮಂದಿ, ವಾಣಿಜ್ಯ ಹಾಗೂ ನಿರ್ವಹಣ ನಿಕಾಯದ 18 ಮಂದಿ ವಿಜ್ಞಾನ ತಂತ್ರಜ್ಞಾನ ನಿಕಾಯದ 16 ಮಂದಿ ಸೇರಿ ಒಟ್ಟು 78 ಮಂದಿಗೆ ಪಿಎಚ್‌ಡಿ ಪದವಿ ಪದವಿ ಪ್ರದಾನ ಮಾಡಲಾಯಿತು.

ಟಾಪ್ ನ್ಯೂಸ್

17-ckm

Kottigehara: ಆಟೋ ರಿಕ್ಷಾದಲ್ಲಿ ಗಾಂಜಾ ಪತ್ತೆ: ಇಬ್ಬರು ಆರೋಪಿಗಳ ಬಂಧನ

16-yellapura

Yellapura: ಬಸ್‌- ಬೈಕ್‌ ಡಿಕ್ಕಿ; ಟಯರ್‌ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು

ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ

Hubli; Pig farmer assault case; Four arrested including sister’s husband

Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ

Hubli; ಅಯ್ಯಪ್ಪ ಶಿಬಿರ ಅಗ್ನಿ ಆಕ್ಮಸಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ

Hubli; ಅಯ್ಯಪ್ಪ ಶಿಬಿರ ಅಗ್ನಿ ಆಕಸ್ಮಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ

14-health

ಗಂಭೀರಕಾಯಿಲೆಗಳಿಂದ ಮಕ್ಕಳಿಗೆ ರಕ್ಷಣೆ-ಬಾಲ್ಯಕಾಲದಲ್ಲಿ ಲಸಿಕೆಹಾಕಿಸಿಕೊಳ್ಳುವುದು ಯಾಕೆಮುಖ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-kunigal

Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ‌ ಸಾವು

2-kunigal

Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ

12-koratagere

Koratagere: ವಿದ್ಯೆಯ ಸಾಧನೆಗೆ ಸಾಧಿಸುವ ಗುರಿ ಒಂದೇ ಮುಖ್ಯ

11-koratagere

ಜಟ್ಟಿ ಅಗ್ರಹಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಗಂಗಾದೇವಿ ಅಧ್ಯಕ್ಷೆ

10-

Koratagere: ಮದ್ಯಪಾನದಿಂದ ಕುಟುಂಬದಲ್ಲಿ ದಿನ ಅಶಾಂತಿ ಉಂಟಾಗಿ ನೆಮ್ಮದಿ ಇಲ್ಲದಂತಾಗಿದೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Kundapura: ಜಿಲ್ಲೆಯ ರೈತರಿಗೆ ಭಾರೀ ಆಸಕ್ತಿ!

18-liver-cancer

Liver cancer: ಯಕೃತ್ತಿನ ಕ್ಯಾನ್ಸರ್‌

4

Mulki: ವಾಹನ ನಿಲುಗಡೆ ನಿಷೇದವಿದ್ದರೂ ಪಾರ್ಕಿಂಗ್‌; ಸುಗಮ ಸಂಚಾರಕ್ಕೆ ಅಡ್ಡಿ

Kudla namdu Ooru movie

Sandalwood: ಕುಡ್ಲ ನಮ್ದು ಊರು!: ಇದು ಕರಾವಳಿ ತಂಡದ ಹೊಸ ಕನಸು

3

Badagannur: ಆರೋಗ್ಯ ಕೇಂದ್ರ, ಆ್ಯಂಬುಲೆನ್ಸ್‌ಗೆ ಗ್ರಾಮಸ್ಥರ ಬೇಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.