Indira Canteen: ನಗರದ ನಾಲ್ಕು ಇಂದಿರಾ ಕ್ಯಾಂಟೀನ್‌ಗೆ ಗ್ರಹಣ
Team Udayavani, Aug 23, 2023, 4:10 PM IST
ತುಮಕೂರು: ನಗರದಲ್ಲಿನ ನಾಲ್ಕು ಇಂದಿರಾ ಕ್ಯಾಂಟೀನ್‌ಗಳಿಗೆ ಗ್ರಹಣ ಹಿಡಿದಿದೆ. ಸಿಬ್ಬಂದಿಗೆ ಸಂಬಳ ನೀಡದ ಕಾರಣ ನಾಲ್ಕು ಇಂದಿರಾ ಕ್ಯಾಂಟೀನ್‌ಗಳನ್ನು ಬಂದ್ ಮಾಡಿ ಪ್ರತಿಭಟನೆ ಮಾಡಲಾಯಿತು.
ಬಡವರ ಹಾಗೂ ವಿದ್ಯಾರ್ಥಿಗಳ ಹೊಟ್ಟೆ ತುಂಬಿಸುತ್ತಿದ್ದ ತುಮಕೂರು ನಗರದಲ್ಲಿದ್ದ ನಾಲ್ಕು ಇಂದಿರಾ ಕ್ಯಾಂಟೀ ನ್‌ಗಳು ಏಕಾಏಕಿ ಬಂದ್ ಆಗಿದ್ದವು. ಹಸಿವಿನಿಂದ ಇಂದಿರಾ ಕ್ಯಾಂಟೀನ್‌ಗೆ ಬಂದ ಜನರು ಊಟ ಸಿಗದೆ ಸೆಪ್ಪೆ ಮುಖದೊಂದಿಗೆ ವಾಪಸ್ ಹೋದರು.
ಹೌದು, ತುಮಕೂರು ನಗರದ ತುಮಕೂರಿನ ಕ್ಯಾತಸಂದ್ರ, ಶಿರಾ ಗೇಟ್, ಮಂಡಿಪೇಟೆ ಹಾಗೂ ಪಾಲಿಕೆ ಆವರಣ ದಲ್ಲಿ ಸೇರಿದಂತೆ ನಗರದ ನಾಲ್ಕು ಕಡೆ ಗಳಲ್ಲಿ ಇಂದಿರಾ ಕ್ಯಾಂಟೀನ್ ಕಾರ್ಯ ನಿರ್ವಹಿಸುತ್ತಿವೆ. ಕಾಂಗ್ರೆಸ್‌ನ ಮಹತ್ವದ ಯೋಜನೆ ಇದಾಗಿದ್ದು, ಸಂಬಳವಿಲ್ಲದೆ ಸಿಬ್ಬಂದಿ ಇಂದಿರಾ ಕ್ಯಾಂಟೀನ್ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.
ತುಮಕೂರು ನಗರದ ನಾಲ್ಕು ಇಂದಿರಾ ಕ್ಯಾಂಟೀನ್‌ಗಳಲ್ಲಿ ಸುಮಾರು 25ಕ್ಕೂ ಹೆಚ್ಚು ಸಿಬ್ಬಂದಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಸಿಬ್ಬಂದಿಗೆ ಕಳೆದ 8 ತಿಂಗಳಿನಿಂದ ಸಂಬಳವನ್ನೇ ನೀಡಿಲ್ಲ. ಹೀಗಾಗಿ ಮಂಗಳವಾರ ಬೆಳಗ್ಗೆ ಸಿದ್ಧಪಡಿಸಿದ
ರೈಸ್ ಬಾತ್, ಇಡ್ಲಿ, ಚಟ್ನಿ ಎಲ್ಲಾವನ್ನು ಅಡುಗೆ ಮನೆಯಲ್ಲಿ ಉಳಿಸಿ, ಸಿಬ್ಬಂದಿ ಕೆಲಸವನ್ನು ಸ್ಥಗಿತಗೊಳಿಸಿ ಆಕ್ರೋಶ ವ್ಯಕ್ತಪಡಿಸಿದರು.
ನಗರದ ನಾಲ್ಕು ಕಡೆಗಳಲ್ಲಿ ಇಂದಿರಾ ಕ್ಯಾಂಟೀನ್ ಕಾರ್ಯನಿರ್ವಹಿಸುತ್ತಿವೆ. ಇವುಗಳ ಉಸ್ತುವಾರಿಯನ್ನು ರಿವಾರ್ಡ್ಸ್ ಎಂಬ ಕಂಪನಿಗೆ ನೀಡಲಾಗಿದೆ. ಇಂದಿರಾ ಕ್ಯಾಂ ಟೀನ್‌ನಲ್ಲಿ ಊಟ ತಯಾ ರಿಕೆಯಿಂದ ಹಿಡಿದು, ಅಲ್ಲಿನ ಸಿಬ್ಬಂದಿಗೆ ಸಂಬಳ ನೀಡುವುದು ಎಲ್ಲಾವನ್ನು ರಿವಾರ್ಡ್ಸ್ ಸಂಸ್ಥೆಗೆ ಹೊರ ಗುತ್ತಿಗೆ ನೀಡಲಾಗಿದೆ. ಆದರೆ, ಕಂಪನಿಗೂ ಸರ್ಕಾರ ಬಿಲ್ ಪಾವತಿ ಮಾಡದೆ ಬಾಕಿ ಉಳಿಸಿ ಕೊಂಡಿದೆ. ಹೀಗಾಗಿ ಕಂಪನಿ ಯವರು ಸಿಬ್ಬಂದಿಗೆ ಸಂಬಳ ನಿಲ್ಲಿಸಿದ್ದಾರೆ.-ಮಂಜುನಾಥ್, ಇಂದಿರಾ ಕ್ಯಾಂಟೀನ್ ಉಸ್ತುವಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ
ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ
Minister ಸೋಮಣ್ಣ, ಸಿ.ಎಸ್. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್: ಬಂಧನ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.