ಕೋವಿಡ್ ಗೆ ಎರಡು ಬಲಿ; ಸಾವಿನ ಸಂಖ್ಯೆ 65 ಕ್ಕೆ ಏರಿಕೆ; ಸೋಂಕಿತರ ಸಂಖ್ಯೆ 2,209ಕ್ಕೆ ಏರಿಕೆ
Team Udayavani, Aug 6, 2020, 11:34 AM IST
ಸಾಂದರ್ಭಿಕ ಚಿತ್ರ
ತುಮಕೂರು: ಜಿಲ್ಲೆಯಲ್ಲಿ ಬುಧವಾರ 128 ಕೊರೊನಾ ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2209 ಕ್ಕೆ ಏರಿಕೆಯಾಗಿದ್ದು ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದು ಮೃತರ ಸಂಖ್ಯೆ 65ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗೇಂದ್ರಪ್ಪ ಹೇಳಿದರು.
ಜಿಲ್ಲೆಯಲ್ಲಿ ಬುಧವಾರ ತುಮಕೂರು -27, ಕುಣಿಗಲ್ – 28, ತಿಪಟೂರು -1, ಮಧುಗಿರಿ-9, ಪಾವಗಡ -2,ಗುಬ್ಬಿ-6, ತುರುವೇಕೆರೆ -2, ಚಿಕ್ಕನಾಯಕನಹಳ್ಳಿ-7, ಕೊರಟಗೆರೆ -25, ಶಿರಾ -21 ಒಟ್ಟು 128 ಮಂದಿಯಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ ಎಂದರು.
ಜಿಲ್ಲೆಯಲ್ಲಿ ಈವರೆಗೆ 41077 ಜನರ ಗಂಟಲು ದ್ರವ ಪರೀಕ್ಷೆ ಮಾಡಲಾಗಿದ್ದು, ಅದರಲ್ಲಿ 36557 ಜನರಿಗೆ ನೆಗೆಟಿವ್ ಎಂದು ವರದಿ ಬಂದಿದೆ. ಅದರಲ್ಲಿ ನಿಗಾವಣೆಯಲ್ಲಿ 4427 ಜನರಿದ್ದು ಪ್ರಥಮ ಸಂಪರ್ಕ 2785, ದ್ವಿತೀಯ 1642 ಜನರಿದ್ದು 2209 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅದರಲ್ಲಿ 1200 ಜನ ಗುಣಮುಖರಾಗಿದ್ದಾರೆ. ಇನ್ನೂ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 944 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.ಐಸಿಯುನಲ್ಲಿ 7 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊರೊನಾ ಸೋಂಕಿಗೆ ಜಿಲ್ಲೆಯಲ್ಲಿ ಬುಧವಾರ ಇಬ್ಬರು ಬಲಿಯಾಗಿದ್ದಾರೆ. ನಗರದ ಪಿ.ಎಚ್ ಕಾಲೋನಿಯ 65 ವರ್ಷದ ವೃದ್ಧ, ದಾನ ನಗರ ಬಡಾವಣೆಯಲ್ಲಿ 45 ವರ್ಷದ ಮಹಿಳೆ ಕೊರೊನಾಗೆ ಬಲಿಯಾಗಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koratagere: ಗೃಹ ಸಚಿವರ ಸ್ವ ಕ್ಷೇತ್ರದಲ್ಲೇ ಮಲ ಹೊತ್ತ 10 ವರ್ಷದ ಬಾಲಕ!
Kunigal: ಬೈಕ್, ಕ್ಯಾಂಟರ್ ಮುಖಾಮುಖಿ ಢಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು
Gubbi: ಮೀಟರ್ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಬೇಸತ್ತು ಪೌರ ಕಾರ್ಮಿಕ ಆತ್ಮಹತ್ಯೆ
Koratagere: ವೃದ್ದೆ ಮೇಲೆ ಕೆಎಸ್ಆರ್ಟಿಸಿ ಬಸ್ ಹರಿದು ಸಾವು
Hunasur: ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ತಿಪಟೂರಿನ ಮಹಿಳೆ!
MUST WATCH
ಹೊಸ ಸೇರ್ಪಡೆ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.