
ಕೊರಟಗೆರೆಯ ಮಕ್ಕಳಿಗೆ ಅನಾರೋಗ್ಯ
15 ದಿನದಿಂದ ಚಿಕ್ಕ ಮಕ್ಕಳಲ್ಲಿ ಜ್ವರ, ಕೆಮ್ಮು, ನೆಗಡಿ ಹೆಚ್ಚಳ |ಪೋಷಕರಿಗೆ ಆತಂಕ
Team Udayavani, Oct 5, 2021, 6:34 PM IST

ಕೊರಟಗೆರೆ: ಕೊರೊನಾ ಅಲೆಯ ತೀವ್ರತೆಯಿಂದ ನಲುಗಿರುವ ಜನತೆಗೆ 3ನೇ ಅಲೆ ಮಕ್ಕಳಿಗೆ ಹೆಚ್ಚು ಬಾಧಿಸಲಿದೆ ಎಂಬ ತಜ್ಞರ ಎಚ್ಚರಿಕೆ ನಡುವೆ ಕೊರಟಗೆರೆ ತಾಲೂಕಿನ ಮಕ್ಕಳಲ್ಲಿ ಜ್ವರ, ನೆಗಡಿ, ಕೆಮ್ಮು ಪ್ರಕರಣಗಳು ಹೆಚ್ಚುತ್ತಿರುವುದು ಪೋಷಕರಲ್ಲಿ ನಿದ್ದೆ ಕೆಡಿಸಿದಂತಾಗಿದೆ.
ಕೊರಟಗೆರೆ ತಾಲೂಕಿನಲ್ಲಿ ಕಳೆದ 15 ದಿನದಿಂದ ಚಿಕ್ಕ ಮಕ್ಕಳಲ್ಲಿ ಜ್ವರ, ಕೆಮ್ಮು, ನೆಗಡಿ ಹೆಚ್ಚಾಗಿದ್ದು, ಪೋಷಕರಲ್ಲಿ ಆತಂಕ ಹುಟ್ಟಿಸಿದೆ. ಕೊರೊನಾ ಮೊದಲ ಹಾಗೂ ಎರಡನೇ ಅಲೆ ಸಾರ್ವಜನಿಕರ ಬದುಕನ್ನು ಸಂಕಷ್ಟಗೊಳಿಸಿ, ದಿಕ್ಕು ಕಾಣದಂತೆ ಮಾಡಿದಂತ ಸನ್ನಿವೇಶದಲ್ಲಿ ಮೂರನೇ ಅಲೆ ಚಿಕ್ಕ ಮಕ್ಕಳ ಮೇಲೆ ಹೆಚ್ಚು ಪರಿಣಾಮಕಾರಿಯಾಗಲ್ಲಿದೆ ಎನ್ನುವ ಸಂದರ್ಭದಲ್ಲಿ ತಾಲೂಕಿನಲ್ಲಿ ಮಕ್ಕಳಿಗೆ ಜ್ವರ, ಕೆಮ್ಮು, ನೆಗಡಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ.
ಮಕ್ಕಳಲ್ಲಿ ಕೊರೊನಾ ಲಕ್ಷಣ: ಕಳೆದ 1-2 ತಿಂಗಳಿನಿಂದ ಕೊರಟಗೆರೆ ತಾಲೂಕಿನಲ್ಲಿ ಕೊರೊನಾ ಪ್ರಕರಣಗಳು ಕಡಿಮೆಯಾಗುತ್ತಿದ್ದು, ಸಾರ್ವಜನಿಕರು ನಿಟ್ಟುಸಿರು ಬಿಡುವ ಸಂದರ್ಭದಲ್ಲಿ ಮತ್ತೆ ಮಕ್ಕಳಲ್ಲಿ ಕೊರೊನಾ ಲಕ್ಷಣಗಳು ಕಂಡು ಬಂದಿರುವುದು ಪೋಷಕರಲ್ಲಿ ನೆಮ್ಮದಿ ಕೆಡಿಸಿದೆ. ಚಿಕ್ಕ ಮಕ್ಕಳು ತಮ್ಮ ಪರಿಸ್ಥಿತಿಯನ್ನು ಹೇಳಿಕೊಳ್ಳಲಾಗದೆ, ಅಳುತ್ತಿರುವ ದೃಶ್ಯ ಪಾಲಕರು ತಲೆ ಕೆಡಿಸಿಕೊಳ್ಳುವಂತಾಗಿದೆ.
ಇದನ್ನೂ ಓದಿ;- ಬನಹಟ್ಟಿ: ತಂದೆ-ತಾಯಿ ಮಾತಿಗೆ ಸಿಟ್ಟಾಗಿ ಆತ್ಮಹತ್ಯೆ ಮಾಡಿಕೊಂಡ ಮಗಳು
ಸುರಕ್ಷತೆ ಬಗ್ಗೆ ಹೆಚ್ಚು ಕಾಳಜಿ: ರಾಜ್ಯದಲ್ಲೇ ಕೊರೊನಾ ಲಕ್ಷಣಗಳು ಕಡಿಮೆಯಾಗಿ, ಸರ್ಕಾರ ಹಂತ ಹಂತವಾಗಿ ಶಾಲೆ, ಕಾಲೇಜು ಆರಂಭಿಸುವ ಆಲೋಚನೆಯಲ್ಲಿದೆ. ವಿದ್ಯಾರ್ಥಿಗಳ ಸುರಕ್ಷತೆ ಬಗ್ಗೆ ಹೆಚ್ಚು ಕಾಳಜಿವಹಿಸಿ ಅನೇಕ ಬದಲಾವಣೆ ಮಾಡುತ್ತಿರುವ ಸನ್ನಿವೇಶದಲ್ಲೇ ಚಿಕ್ಕ ಮಕ್ಕಳಲ್ಲಿ ಜ್ವರ, ಕೆಮ್ಮು, ನೆಗಡಿಯಂತಹ ರೋಗ ಲಕ್ಷಣಗಳು ಕಾಣಿಸಿಕೊಳ್ಳುತ್ತಿರುವುದು ಪೋಷಕರಿಗೆ ದಿಕ್ಕು ಕಾಣದೇ ದೇವರಿಗೆ ಮೊರೆ ಹೋಗುತ್ತಿದ್ದಾರೆ.
ರಾಜ್ಯ ಸರ್ಕಾರ ಕೊರೊನಾದ ನಿಯಮಸಡಿಲಿಸಿ, ಜನ ಜೀವನ ಯಥಾಸ್ಥಿತಿಗೆ ಮರಳಿದ್ದು, ಶಾಲಾ ಕಾಲೇಜುಗಳು ಪ್ರಾರಂಭಗೊಂಡು ವಿದ್ಯಾರ್ಥಿಗಳು ಶಾಲೆಗಳತ್ತ ಮುಖಮಾಡುವ ಸಂದರ್ಭದಲ್ಲಿ ಮಕ್ಕಳಲ್ಲಿ ರೋಗದ ಲಕ್ಷಣಗಳು ಕಾಣಿಸಿಕೊಳ್ಳುತ್ತಿರುವುದು ಆತಂಕ ಮೂಡಿಸಿದ್ದು, ಕೊರಟಗೆರೆ ತಾಲೂಕಿನಲ್ಲೇ ಸಾವಿರಾರು ಜನ ಕೊರೊನಾ ಲಕ್ಷಣಗಳಿಂದ ನಿತ್ಯ ಆಸ್ಪತ್ರೆಗೆ ಹೋಗುವಂತಾಗಿದೆ.
ಮಕ್ಕಳಿಗೆ ಕೊರೊನಾ ಲಕ್ಷಣಗಳು ಕಂಡ ಕೂಡಲೇ ಆಸ್ಪತ್ರೆಗೆ ಹೋಗುತ್ತಿದ್ದು, ಜಿಲ್ಲಾ ಹಾಗೂ ತಾಲೂಕು ಆರೋಗ್ಯ ಇಲಾಖೆ ಮಕ್ಕಳ ಆರೋಗ್ಯ ರಕ್ಷಣೆಗೆ ಹೆಚ್ಚು ಗಮನ ನೀಡಬೇಕಾಗಿದೆ. ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ. ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಬಿಕೋ ಎನ್ನುತ್ತಿದೆ ತಾಲೂಕು ಆಸ್ಪತ್ರೆ: ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಡಾ.ನಾಗಭೂಷನ್, ಡಾ.ಪ್ರಕಾಶ್, ಡಾ. ಅನಿಲ್ ಹಾಗೂ ಡಾ.ಜಯಂತ್ ಎಂಬ ವೈದ್ಯರು ಇಲ್ಲದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಆರೋಗ್ಯ ಇಲಾಖೆ ವೈದ್ಯರು ಉತ್ತಮವಾಗಿ ಸ್ಪಂದಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

Pavagada: ಟ್ರ್ಯಾಕ್ಟರ್ ಗೆ ಕ್ರೇನ್ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವು

Pavagada: ರಸ್ತೆ ಅಪಘಾತದಲ್ಲಿ ಮಂಡ್ಯ ಮೂಲದ ಬೊಲೆರೋ ಚಾಲಕ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ

Puttur: ಬಸ್ – ಬೈಕ್ ಅಪಘಾತ; ಸವಾರ ಸಾವು

Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ

BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.