ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಮತದಾನ ಮುಖ್ಯ
Team Udayavani, Jan 26, 2020, 3:00 AM IST
ತುಮಕೂರು: ಮತದಾನದ ಹಕ್ಕು ನಮ್ಮೆಲ್ಲರ ಹಕ್ಕು. ಮತದಾನದ ಮೂಲಕ ಭಾರತವನ್ನು ಬಲಿಷ್ಠ ಪ್ರಜಾಪ್ರಭುತ್ವ ರಾಷ್ಟ್ರವನ್ನಾಗಿ ನಿರ್ಮಾಣ ಮಾಡಲು ಸಾಧ್ಯ ಎಂದು ಅಪರ ಜಿಲ್ಲಾಧಿಕಾರಿ ಕೆ. ಚೆನ್ನಬಸಪ್ಪ ಹೇಳಿದರು.
ನಗರದ ಬಾಲಭವನದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾಡಳಿತದಿಂದ ಶನಿವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿ, ರಾಷ್ಟ್ರಾದ್ಯಂತ ಮತದಾನದ ದಿನಾಚರಣೆ ಮಾಡುತ್ತಿದ್ದು, ದೇಶದ 18 ವರ್ಷ ಮೇಲ್ಪಟ್ಟ ಎಲ್ಲಾ ಯುವಕರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳ್ಳಬೇಕು ಎಂಬುದು ಈ ರಾಷ್ಟ್ರೀಯ ಮತದಾನ ದಿನದ ಮುಖ್ಯ ಉದ್ದೇಶ ಎಂದು ತಿಳಿಸಿದರು.
2011ರಲ್ಲಿ ಮತದಾರರ ಪಟ್ಟಿಗೆ ಸೇರ್ಪಡೆಯಾದ ಹಾಗೂ ಚುನಾವಣೆಯಲ್ಲಿ ಭಾಗವಸುವವರ ಸಂಖ್ಯೆ ಶೇ.60ರಷ್ಟು ಮಾತ್ರ ಇತ್ತು. ಪ್ರಸ್ತುತ ಶೇ.80ಕ್ಕೂ ಹೆಚ್ಚಿದೆ. ಸ್ವೀಪ್ ಕಾರ್ಯಕ್ರಮಗಳ ಮೂಲಕ ಮತದಾನದ ಸಾಕ್ಷರತೆ ನೀಡಲಾಗುತ್ತಿದೆ ಎಂದರು.
ಜಿಲ್ಲೆಯ ಬಿಎಲ್‌ಒಗಳು 18 ವರ್ಷ ಮೇಲ್ಪಟ್ಟ ಎಲ್ಲಾ ಯುವ ಜನರನ್ನು ಮತದಾರ ಪಟ್ಟಿಗೆ ಸೇರ್ಪಡೆ ಮಾಡಿದ್ದಾರೆ. ಮತದಾರರಿಗೆ ಮತದಾನ ಮಾಡಲು ಗುರುತಿಗೆ ಎಪಿಕ್ ಕಾರ್ಡ್ ನೀಡಲಾಗುತ್ತಿದೆ. ಒಳ್ಳೆಯ ನಾಯಕನನ್ನು ಆಯ್ಕೆ ಮಾಡಿಕೊಳ್ಳಬೇಕೆಂಬುದನ್ನು ಮನದಲ್ಲಿಟ್ಟುಕೊಂಡು ಆಸೆ-ಆಮಿಷಗಳಿಗೆ ಬಲಿಯಾಗದೆ ಅಮೂಲ್ಯವಾದ ಮತ ನ್ಯಾಯಸಮ್ಮತವಾಗಿ ಚಲಾಯಿಸಬೇಕು ಎಂದು ತಿಳಿಸಿದರು.
ಉತ್ತಮವಾಗಿ ಕರ್ತವ್ಯ ನಿರ್ವಸಿದ ಮತಗಟ್ಟೆ ಅಧಿಕಾರಿಗಳು ಹಾಗೂ ಪ್ರಬಂಧ ಮತ್ತು ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಶಸ್ತಿ ನೀಡಲಾಯಿತು. ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಕಾರ್ಯಕ್ರಮಕ್ಕೂ ಮುನ್ನ ನಗರದ ಟೌನ್‌ಹಾಲ್ ವೃತ್ತದಿಂದ ಬಾಲಭವನದವರೆಗೂ ಅರಿನ ಜಾಥಾ ನಡೆಯಿತು. ತುಮಕೂರು ತಾಲೂಕು ತಹಶೀಲ್ದಾರ್ ಮೋಹನ್, ಜಿಪಂ ಉಪ ಕಾರ್ಯದರ್ಶಿ ಕೃಷ್ಣಮೂರ್ತಿ, ಕಂದಾಯ ಅಧಿಕಾರಿ ತುಕರಾಮ್ ನಾಯಕ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ನಟರಾಜ್ ಮತ್ತಿತರರಿದ್ದರು.
ಸಂವಿಧಾನ ಜನಪ್ರತಿನಿಧಿಯನ್ನು ಆಯ್ಕೆ ಮಾಡುವ ಜವಾಬ್ದಾರಿ ಮತದಾರರಿಗೆ ನೀಡಿದೆ. ಯುವ ಮತದಾರರಿಗೆ ಮತದಾನದ ಅರಿವು ಮೂಡಿಸುವುದೇ ಮುಖ್ಯ ಉದ್ದೇಶವಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಹಕ್ಕು ಜಾಗರೂಕತೆಯಿಂದ ಚಲಾಯಿಸಬೇಕು.
-ರಾಘವೇಂದ್ರ ಶೆಟ್ಟಿಗಾರ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ನ್ಯಾಯಾಧೀಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kunigal: ಬೈಕ್, ಕ್ಯಾಂಟರ್ ಮುಖಾಮುಖಿ ಢಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು
Gubbi: ಮೀಟರ್ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಬೇಸತ್ತು ಪೌರ ಕಾರ್ಮಿಕ ಆತ್ಮಹತ್ಯೆ
Koratagere: ವೃದ್ದೆ ಮೇಲೆ ಕೆಎಸ್ಆರ್ಟಿಸಿ ಬಸ್ ಹರಿದು ಸಾವು
Hunasur: ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ತಿಪಟೂರಿನ ಮಹಿಳೆ!
Kunigal: ಅಪ್ರಾಪ್ತೆಯ ಅಪಹರಣ, ಲೈಂಗಿಕ ದೌರ್ಜನ್ಯ; ಗುಜರಾತ್ ನಲ್ಲಿ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.