ಜಮೀನು ಪಡೆದ ರೈತರಿಂದ ವಸೂಲಿ: ಆರೋಪ
Team Udayavani, May 30, 2020, 6:45 AM IST
ಕುಣಿಗಲ್: ತಾಲೂಕಿನ ಹುಲಿಯೂರುದುರ್ಗ ಹೋಬಳಿ ದೊಡ್ಡಮಾವತ್ತೂರು ಸಮೀಪ ಕೆಶಿಫ್ ರಸ್ತೆ ಟೋಲ್ ಸಂಗ್ರಹ ಮಾಡುತ್ತಿರುವುದನ್ನು ವಿರೋಧಿಸಿ ರೈತ ಸಂಘದ ಪದಾಧಿಕಾರಿಗಳು ಪ್ರತಿಭಟನೆ ನಡೆಸಲು ಮುಂದಾದಾಗ ಪೊಲೀಸರು ಮಧ್ಯ ಪ್ರವೇಶ ಮಾಡಿ ಕೊರೊನಾ ಲಾಕ್‌ಡೌನ್ ಕಾರಣ ನೀಡಿ ಪ್ರತಿಭಟನೆ ತಡೆದ ಘಟನೆ ನಡೆದಿದೆ.
ಕೊರಟಗೆರೆಯಿಂದ ಕೊಳ್ಳೇಗಾಲ ರಾಜ್ಯ ಹೆದ್ದಾರಿ 33ರ ಕುಣಿಗಲ್‌ನಿಂದ ಹುಲಿಯೂರುದುರ್ಗ ಮಾರ್ಗ ಮಧ್ಯೆ ಹಾದುಹೋಗಿದ್ದು ದೊಡ್ಡಮಾವತ್ತೂರು ಗ್ರಾಮದ ಬಳಿ ಟೋಲ್ ನಿರ್ಮಾಣ ಮಾಡಿದ್ದು ಕೆಶಿಫ್ ನಿಂದ ಟೋಲ್ ಸಂಗ್ರಹ ಆರಂಭಿಸಿದೆ. ಈ ಸಂಬಂಧ ಈ ಹಿಂದೆಯೇ ರೈತ ಸಂಘ ಟೋಲ್ ಸಂಗ್ರಹ ಮಾಡಬಾರದೆಂದು ಖಂಡಿಸಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.
ಅದರೂ ಟೋಲ್ ಸಂಗ್ರಹ ಮಾಡಲು ಕೆಶಿಫ್ ಕಂಪನಿ ಅಧಿಕಾರಿಗಳು ಮುಂದಾಗಿದ್ದಾರೆ. ವಿಚಾರ ತಿಳಿದ ಜಿಲ್ಲಾ ರೈತ ಸಂಘದ ಅಧ್ಯಕ್ಷ ಅನಂದ್ ಪಟೇಲ್ ಹಾಗೂ ತಾಲೂಕು ರೈತ ಸಂಘದ ಅಧ್ಯಕ್ಷ ಅನಿಲ್ ರೈತರೊಂದಿಗೆ ಟೋಲ್ ಬಳಿ ಜಮಾವಣೆಗೊಂಡು ಪ್ರತಿಭಟನೆಗೆ ಮುಂದಾದರು. ಸ್ಥಳದಲ್ಲಿ ಹಾಜರಿದ್ದ ಸಿಪಿಐ ನಿರಂಜನ ಕುಮಾರ್ ಹಾಗೂ ಪಿಎಸ್‌ಐ ಪುಟ್ಟೇಗೌಡ ಕೊರೊನಾ ಲಾಕ್ ಡೌನ್ ಜಾರಿಯಲ್ಲಿದೆ.
ಜೊತೆಗೆ ನಿಷೇಧಾಜ್ಞೆ ಜಾರಿ ಇರು ವುದರಿಂದ ಪ್ರತಿಭಟನೆ ನಡೆಸಲು ಅವಕಾಶ ನೀಡುವು ದಿಲ್ಲ ಹಾಗೇನಾದರೂ ಪ್ರತಿಭಟನೆ ನಡೆಸಿದರೆ ಕಾನೂನು ಕ್ರಮಕೈಗೊಳ್ಳಲಾಗುವುದೆಂದು ರೈತರ ಸಂಘದ ಪದಾಧಿಕಾರಿಗಳಗೆ ನೋಟಿಸ್ ಜಾರಿ ಮಾಡಿದರು. ಈ ವೇಳೆ ಸಾಮಾಜಿಕ ಅಂತರ ಕಾಯ್ದುಕೊಂಡು ಪ್ರತಿಭಟನೆ ನಡೆಸುವುದಾಗಿ ಪೊಲೀಸರು ಹಾಗೂ ರೈತ ಸಂಘದ ಪದಾಧಿಕಾರಿಗಳ ನಡುವೆ ಮಾತಿನಚಕಮಕಿ ನಡೆಯಿತು.
ರೈತ ಸಂಘದ ಒತ್ತಡಕ್ಕೆ ಪೊಲೀಸರು ಮಣಿಯದ ಕಾರಣ ರೈತ ಸಂಘದ ಪ್ರತಿಭಟನೆಯನ್ನು ತಾಲೂಕು ಕಚೇರಿಗೆ ಸ್ಥಳಾಂತರಿಸಿ ತಹಶೀಲ್ದಾರ್ ವಿ.ಆರ್.ವಿಶ್ವನಾಥ್‌ಗೆ ಮನವಿ ಸಲ್ಲಿಸಿದರು.ಜಿಲ್ಲಾ ರೈತ ಸಂಘದ ಆನಂದ್ ಪಟೇಲ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Koratagere: ವಿದ್ಯೆಯ ಸಾಧನೆಗೆ ಸಾಧಿಸುವ ಗುರಿ ಒಂದೇ ಮುಖ್ಯ
ಜಟ್ಟಿ ಅಗ್ರಹಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಗಂಗಾದೇವಿ ಅಧ್ಯಕ್ಷೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.