ಇಂದು ನಡೆದಾಡುವ ದೇವರ ಪುಣ್ಯಸ್ಮರಣೆ
Team Udayavani, Jan 31, 2019, 11:40 AM IST
ತುಮಕೂರು: ಭಕ್ತರ ಪಾಲಿನ ನಡೆದಾಡುವ ದೇವರು, ಜಾತ್ಯತೀತ, ಧರ್ಮಾತೀತವಾಗಿ ಅಕ್ಷರದಿಂದ ವಂಚಿತವಾಗುವ ಎಲ್ಲಾ ವರ್ಗದ ಮಕ್ಕಳಿಗೆ ಅಕ್ಷರ ಜ್ಞಾನ ನೀಡಿ, ಲಕ್ಷಾಂತರ ದೀನ ದಲಿತ ಬಡವವರಿಗೆ ಅಕ್ಷರ, ಆಶ್ರಯ, ಅನ್ನ ನೀಡಿ ಪ್ರತಿ ವರ್ಷ 10 ಸಾವಿರಕ್ಕೂ ಹೆಚ್ಚು ಮಕ್ಕಳಿಗೆ ಜ್ಞಾನದ ದೀವಿಗೆಯನ್ನು ಹಚ್ಚುತ್ತಿರುವ ಕಲ್ಪತರು ನಾಡಿನ ಶ್ರೀಕ್ಷೇತ್ರ ಸಿದ್ಧಗಂಗಾ ಮಠದ ಕರ್ನಾಟಕ ರತ್ನ ಡಾ.ಶ್ರೀ ಶಿವಕುಮಾರ ಮಹಾಸ್ವಾಮೀಜಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮ ಗುರುವಾರ ಶ್ರೀಮಠದಲ್ಲಿ ನಡೆಯುತ್ತಿದೆ.
ಈ ಕಾರ್ಯಕ್ರಮಕ್ಕೆ ನಾಡಿನ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ಶ್ರೀಮಠಕ್ಕೆ ಬರುವ ಹಿನ್ನೆಲೆಯಲ್ಲಿ ಶ್ರೀ ಸಿದ್ಧಗಂಗಾ ಮಠದಲ್ಲಿ ಸಿದ್ಧತೆಗಳು ಪೂರ್ಣಗೊಂಡಿದ್ದು, ರಾಜ್ಯದ ಭಕ್ತ ವೃಂದ ಶ್ರೀಗಳಿಗೆ ಭಕ್ತಿ ಸಮರ್ಪಣೆಗೆ ಅನು ವಾಗುವಂತೆ ಶ್ರೀಮಠ ಸಕಲ ಸಿದ್ಧತೆಗಳೊಂದಿಗೆ ಸಜ್ಜುಗೊಂಡಿದೆ.
ಶ್ರೀಗಳು ಲಿಂಗೈಕ್ಯರಾಗಿ ಹತ್ತು ದಿನಗಳು ಕಳೆದಿದೆ. ಶ್ರೀ ಮಠಕ್ಕೆ ಬರುವ ಭಕ್ತರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಭಕ್ತರು ಶ್ರೀ ಮಠಕ್ಕೆ ಬಂದು ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸುತ್ತಿದ್ದಾರೆ. ಸಿದ್ಧಗಂಗಾ ಮಠ ಒಂದು ಪವಾಡ ಕ್ಷೇತ್ರವಾಗಿ ಬದಲಾಗುತ್ತಿದೆ. ಈ ನಡುವೆ ಶ್ರೀಗಳ ಪುಣ್ಯ ರಾಧನೆಗಾಗಿ ಈಗಾಗಲೇ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಮಠದಲ್ಲಿ ಬೀಡುಬಿಟ್ಟಿದ್ದಾರೆ.
4 ದಿನಗಳಿಂದ ಅಡುಗೆ ತಯಾರಿ: ಮಠದ ನಾಲ್ಕು ಕಡೆಗಳಲ್ಲಿ ವಿವಿಧ ಖಾದ್ಯಗಳ ತಯಾರಿ ಯಲ್ಲಿ ಬಾಣಸಿಗರು ಕಳೆದ 4 ದಿನಗಳಿಂದ ನಿರತರಾಗಿದ್ದು, ಗುರುವಾರ ಬೆಳಗ್ಗೆ ವೇಳೆಗೆ ಬಹುತೇಕ ಸಿಹಿ ತಿಂಡಿಗಳ ತಯಾರಿ ಪೂರ್ಣ ಗೊಳ್ಳಲಿದೆ. ಹನ್ನೆರಡು ಕಡೆಗಳಲ್ಲಿ ಭಕ್ತರಿಗೆ ದಾಸೋಹ ನೀಡಲು ವ್ಯವಸ್ಥೆ ಮಾಡಲಾಗಿದೆ. ಅದಕ್ಕಾಗಿ ಪೆಂಡಾಲ್‌ಗಳನ್ನು ಹಾಕಲಾಗಿದ್ದು ಶ್ರೀಗಳ ಆಶಯದಂದೆ ಮಠಕ್ಕೆ ಬರುವ ಭಕ್ತರು ಕುಳಿತುಕೊಂಡು ತೃಪ್ತಿಯಿಂದ ಪ್ರಸಾದ ಸೇವಿಸ ಬೇಕು ಎನ್ನುವುದಾಗಿದ್ದು ಬರುವ ಲಕ್ಷಾಂತರ ಭಕ್ತರು ಕುಳಿತು ಊಟ ಮಾಡಲು ಟೇಬಲ್ ಕುರ್ಚಿಗಳನ್ನು ಎಲ್ಲಾ ಕಡೆಗಳಲ್ಲಿ ವ್ಯವಸ್ಥೆ ಮಾಡಲಾಗಿದೆ.
ಒಂದೊಂದು ಊಟದ ಪೆಂಡಾಲ್‌ನಲ್ಲೂ ಸ್ವಯಂ ಸೇವಕರು ಇರುವ ವ್ಯವಸ್ಥೆ ಆಗಿದೆ. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾvಲಾಗಿದೆ. ಊಟಕ್ಕೆ ಸಿಹಿ ಜೊತೆಗೆ ವಿವಿಧ ತರಕಾರಿ ಪಲ್ಯಗಳು ಹೆಸರು ಬೇಳೆ, ಉಪ್ಪಿನ ಕಾಯಿ. ಅನ್ನ, ಸಾಂಬಾರ್, ಮಜ್ಜಿಗೆ, ವ್ಯವಸ್ಥೆ ಮಾಡಲಾಗಿದೆ. ಶ್ರೀಗಳ ಪುಣ್ಯಸ್ಮರಣೆ ಹಿನ್ನೆಲೆ ಯಲ್ಲಿ ಶ್ರೀಮಠದ ಆವರಣದಲ್ಲಿ ಸ್ವಚ್ಛತಾ ಕಾರ್ಯವೂ ಸಹ ಭರದಿಂದ ಸಾಗಿದ್ದು, ಶ್ರೀಮಠದ ಆವರಣ, ಕಲ್ಯಾಣಿ, ಕೊಠಡಿಗಳನ್ನು ಶುಚಿ ಗೊಳಿಸ ಲಾಗುತ್ತಿದೆ. ಅಲ್ಲದೆ ಶ್ರೀಗಳು ಆಡಳಿತ ನಡೆ ಸುತ್ತಿದ್ದ ಕಾರ್ಯಾಲಯವನ್ನು ಸ್ವಚ್ಛ ಗೊಳಿಸಲಾಗಿದೆ.
ಮುಖ್ಯಮಂತ್ರಿಗಳಿಂದ ಕಾರ್ಯಕ್ರಮ ಉದ್ಘಾಟನೆ: ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಪುಣ್ಯ ಸ್ಮರಣೆ ಸಮಾರಂಭವನ್ನು ಮುಖ್ಯಮಂತ್ರಿ ಎಚ್. ಡಿ. ಕುಮಾರ ಸ್ವಾಮಿ ಉದ್ಘಾಟಿಸುವರು. ಈ ಕಾರ್ಯಕ್ರಮದ ದಿವ್ಯ ನೇತೃತ್ವವನ್ನು ಸಿದ್ಧಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಮಹಾಸ್ವಾಮಿ ವಹಿಸಲಿದ್ದು, ಅಧ್ಯಕ್ಷತೆ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳು ವಹಿಸುವರು. ಸಿರಿಗೆರೆ ತರಳಬಾಳು ಮಠದ ಶ್ರೀ ಶಿವಮೂರ್ತಿ ಶಿವಾ ಚಾರ್ಯ ಮಹಾ ಸ್ವಾಮಿಗಳು, ಆದಿಚುಂಚನ ಗಿರಿ ಮಠದ ಶ್ರೀ ನಿರ್ಮಲಾನಂದನಾಥ ಮಹಾ ಸ್ವಾಮಿಗಳು, ಆರ್ಟ್ ಆಫ್ ಲಿವಿಂಗ್ಸ್ ನ ಶ್ರೀ ರವಿಶಂಕರ ಗುರೂಜಿ, ದೇಗುಲ ಮಠದ ಶ್ರೀ ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳು ದಿವ್ಯ ಸಾನ್ನಿದ್ಯ ವಹಿಸುವರು.
ಕಾರ್ಯಕ್ರಮದಲ್ಲಿ ನುಡಿನ ಮನ ವನ್ನು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾ ರಾಮ್, ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್, ಮಾಜಿ ಮುಖ್ಯಮಂತ್ರಿ ಗಳಾದ ಬಿ.ಎಸ್.ಯಡಿಯೂರಪ್ಪ, ಸಿದ್ದ ರಾಮಯ್ಯ, ಎಂ. ವೀರಪ್ಪ ಮೊಯ್ಲಿ, ಗೃಹ ಸಚಿವ ಎಂ.ಬಿ. ಪಾಟೀಲ್, ನೀರಾವರಿ ಸಚಿವ ಡಿ.ಕೆ.ಶಿವಕುಮಾರ್, ಮಾಜಿ ಸಚಿವ ವಿ. ಸೋಮಣ್ಣ ಸೇರಿದಂತೆ ಸಚಿವರು, ಸಂಸದರು, ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು, ವಿವಿಧ ಮಠಗಳ ಮಠಾಧೀಶ್ವರರು ಭಾಗವಹಿಸುವರು.
ಸಿದ್ಧಗಂಗಾ ಮಠದಲ್ಲಿ ಬಿಗಿ ಭದ್ರತೆ
ಶ್ರೀಗಳ ಪುಣ್ಯಸ್ಮರಣೆ ಕಾರ್ಯಕ್ರಮಕ್ಕೆ ಲಕ್ಷಾಂತರ ಭಕ್ತರು ಭಾಗವಹಿಸುವ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಸಿದ್ಧಗಂಗಾ ಮಠದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತ ಕ್ರಮವನ್ನು ವಹಿಸಲಾಗಿದ್ದು ಅದಕ್ಕಾಗಿ ಐಜಿಪಿ ದಯಾನಂದ್ ಮಾರ್ಗದರ್ಶನದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೋನ ವಂಶಿಕೃಷ್ಣ ನೇತೃತ್ವದಲ್ಲಿ ಹೆಚ್ಚಿನ ಭದ್ರತೆ ಕಲ್ಪಿಸಲಾಗಿದೆ. ಮಠಕ್ಕೆ ಬರುವ ವಾಹನಗಳು ಯಾವ ಯಾವ ಕಡೆಯಿಂದ ಬರಬೇಕು ಎನ್ನುವ ಬಗ್ಗೆ ಮಾಹಿತಿ ಫಲಕ ಹಾಕುತ್ತಿದ್ದಾರೆ ಮತ್ತು ಬ್ಯಾರಿಕೇಟ್‌ಗಳನ್ನು ಹಾಕಲಾಗುತ್ತಿದೆ. ಎಲ್ಲ ಕಡೆಯೂ ಭದ್ರತೆ ಯನ್ನು ಹೆಚ್ಚಿಸಿದ್ದಾರೆ. ಕಾರ್ಯಕ್ರಮದಲ್ಲಿ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.