ಆಟೋಗಳ ಮೂಲಕ ತ್ಯಾಜ್ಯ ಸಂಗ್ರಹ
Team Udayavani, Mar 1, 2019, 7:12 AM IST
ಕೊರಟಗೆರೆ: ಪಟ್ಟಣದ ತ್ಯಾಜ್ಯ ವಸ್ತುಗಳನ್ನು ಮನೆಮನೆಯಿಂದ ಪ್ರತಿನಿತ್ಯ ಸಂಗ್ರಹಿಸಿ ಹೊರಹಾಕಲು ನೂತನ ಆಟೋಗಳನ್ನು ಉಪಯೋಗಿಸುತ್ತಿದ್ದು, ಸಾರ್ವಜನಿಕರು ತಮ್ಮ ಮನೆ ಕಸವನ್ನು ಆಟೋಗಳಲ್ಲಿ ಹಾಕುವಂತೆ ಪಪಂ ಮುಖ್ಯಾಧಿಕಾರಿ ಲಕ್ಷ್ಮಣ್‌ಕುಮಾರ್ ತಿಳಿಸಿದರು.
ಪಟ್ಟಣ ಪಂಚಾಯಿತಿ ಆವರಣದಲ್ಲಿ ಪಟ್ಟಣದ ತ್ಯಾಜ್ಯ ವಸ್ತುಗಳನ್ನು ಸಂಗ್ರಹಿಸಲು ನೂತನ ಎರಡು ಆಟೋಗಳಿಗೆ ಚಾಲನೆ ನೀಡಿ ಮಾತನಾಡಿ, ಪ್ರಸ್ತುತ ಪಟ್ಟಣದಲ್ಲಿನ ತ್ಯಾಜ್ಯ ಸಂಗ್ರಹಿಸಲು ಒಂದು ಟ್ರ್ಯಾಕ್ಟರ್ ಇದ್ದು, ಅದರ ಕಾರ್ಯ ಒತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ತ್ಯಾಜ್ಯ ಸಂಗ್ರಹ ಕಾರ್ಯಕ್ಕೆ ತೊಡಕು ಉಂಟಾಗುತ್ತಿದೆ.
ಟ್ರ್ಯಾಕ್ಟರ್‌ನೊಂದಿಗೆ ಎರಡು ಆಟೋಗಳನ್ನು ತ್ಯಾಜ್ಯ ಸಂಗ್ರಹಕ್ಕೆ ಉಪಯೋಗಿಸುತ್ತಿದ್ದು, ಪತ್ರಿನಿತ್ಯ ಪ್ರತಿ ಬೀದಿಗಳಿಗೂ ಆಟೋ ತೆರಳಲಿದೆ. ಮಹಿಳೆಯರು ಹಸಿ ಕಸ ಮತ್ತು ಒಣ ಕಸಗಳನ್ನು ಪ್ರತ್ಯೇಕವಾಗಿ ಸ್ವಚ್ಛಕಾರ್ಯಕ್ಕೆ ನೇಮಕವಾಗಿರುವ ಪೌರಕಾರ್ಮಿಕರಿಗೆ ನೀಡುವ ಮೂಲಕ ಪಟ್ಟಣದ ಸ್ವಚ್ಛತೆಗೆ ಸಹಕರಿಸುವಂತೆ ಮನವಿ ಮಾಡಿದರು.
ಈ ವೇಳೆ ಪಪಂ ಆರೋಗ್ಯಾಧಿಕಾರಿ ರೈಸ್ ಅಹಮದ್, ಸದಸ್ಯರಾದ ಪುಟ್ಟ ನರಸಪ್ಪ, ಲಕ್ಷ್ಮೀನಾರಾಯಣ್, ನಟರಾಜು, ಎನ್.ಕೆ.ನರಸಿಂಹಪ್ಪ, ನಾಗರಾಜು, ಮುಖಂಡರಾದ ಗಣೇಶ್, ರಮೇಶ್, ಸತ್ಯನಾರಾಯಣ್, ಮಂಜುನಾಥ್, ಖಲೀಂಉಲ್ಲಾ, ರಘು ಸೇರಿದಂತೆ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Koratagere; ಲಾರಿ- ಕಾರಿನ ನಡುವೆ ಭೀಕರ ಅಪಘಾ*ತ: ಯುವಕರಿಬ್ಬರ ಸಾ*ವು
ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾದ ಪ್ರಕರಣ: ಇಬ್ಬರು ಶಿಕ್ಷಕರು ಅಮಾನತು
Tumkur: ಮಧುಗಿರಿ ಡಿವೈಎಸ್ಪಿ ವಿರುದ್ಧ ಮತ್ತೊಬ್ಬ ಸಂತ್ರಸ್ತೆಯಿಂದ ವಿಡಿಯೋ ಆರೋಪ
Kunigal:ಮನೆಗೆ ನುಗ್ಗಿದ ದುಷ್ಕರ್ಮಿಗಳು; ರಾಡ್ ನಿಂದ ತಲೆಗೆ ಹೊಡೆದು ಮಾಂಗಲ್ಯಸರ ದೋಚಿ ಪರಾರಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.