ನೀರಿನ ಮಹತ್ವ ಸಾರಲು ಜಲಶಕ್ತಿ ಅಭಿಯಾನ
ಮುಂದಿನ ಪೀಳಿಗೆಗೆ ಜೀವಜಲ ಉಳಿಸುವುದು ನಮ್ಮೆಲ್ಲರ ಕರ್ತವ್ಯ • ಶಾಲಾ ಮಕ್ಕಳಿಂದ ಜಾಗೃತಿ ಜಾಥಾ
Team Udayavani, Jul 21, 2019, 4:16 PM IST
ಹುಳಿಯಾರಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಂಜೀವಿನಿ ಯೋಜನೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನೀರಿನ ಸಂರಕ್ಷಣೆ ಕುರಿತು ಜಲಶಕ್ತಿ ಅಭಿಯಾನ ಜಾಥಾ ನಡೆಸಲಾಯಿತು.
ಹುಳಿಯಾರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಂಜೀವಿನಿ ಯೋಜನೆ ಹಾಗೂ ಸಾರ್ವ ಜನಿಕ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಶನಿವಾರ ಹುಳಿಯಾರಿನಲ್ಲಿ ನೀರಿನ ಸಂರಕ್ಷಣೆ ಕುರಿತು ಜಲಶಕ್ತಿ ಅಭಿಯಾನ ಜಾಥಾ ನಡೆಸಲಾಯಿತು.
ಹುಳಿಯಾರು ಅಂಗನವಾಡಿ ಬಿ ಕೇಂದ್ರದ ಮಕ್ಕಳು, ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯ ಮಕ್ಕಳು ಹಾಗೂ ನುರಾನಿ, ಫಾತೀಮಾ, ಬಾಲವಿಕಾಸ ಸಂಘದ ಸದಸ್ಯರು ಊರಿನ ಪ್ರಮುಖ ಬೀದಿಯಲ್ಲಿ ಜಾಥಾ ಮಾಡುವ ಮೂಲಕ ನೀರಿನ ಸಂರಕ್ಷಣೆ ಬಗ್ಗೆ ಅರಿವು ಮೂಡಿಸಿದರು.
ನೀರಿನ ಸಂರಕ್ಷಣೆ ಅಗತ್ಯ: ಹುಳಿಯಾರು ಅಂಗನವಾಡಿ ಬಿ ಕೇಂದ್ರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ನ್ಯಾಷನಲ್ ರೂರಲ್ ಲೈಲ್ಲಿ ಹುಡ್ ಮಿಷನ್‌ನ ಕಿರಣ್ ಮಾತನಾಡಿ, ಇಂದು ನೀರಿನ ಸಮಸ್ಯೆ ದೇಶದ ಅತಿದೊಡ್ಡ ಸಮಸ್ಯೆಯಾಗಿ ಬದ ಲಾಗಿದೆ. ಮುಂದಿನ ಪೀಳಿಗೆಗೆ ಜೀವಜಲ ಉಳಿಸುವುದು, ನೀರಿನ ಮಹತ್ವ ಮತ್ತು ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು ಜಲಶಕ್ತಿ ಅಭಿಯಾನ ಆಚರಿಸಲಾಗುತ್ತಿದೆ. ಕೇವಲ ಒಂದು ದಿನ ಕಾರ್ಯಕ್ರಮ ಮಾಡುವುದರಿಂದ ನೀರು ಉಳಿಸಲು ಸಾಧ್ಯವಿಲ್ಲ. ನೀರಿನ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯವಾದಾಗ ಜಲ ಸಂಪನ್ಮೂಲ ಉಳಿಯಲು ಸಾಧ್ಯ ಎಂದರು.
ಶುದ್ಧ ನೀರಿಗೂ ಕುತ್ತು: ಅಂಗನವಾಡಿ ಶಿಕ್ಷಕಿಯರ ಸಂಘದ ಅಧ್ಯಕ್ಷೆ ಪೂರ್ಣಮ್ಮ ಮಾತನಾಡಿ, ಮೊದಲು ಕೆರೆಕುಂಟೆಯಲ್ಲಿನ ನೀರು ಕುಡಿಯಲಾಗುತಿತ್ತು. ನಂತರ ಅಂತರ್ಜಲ ಪಾತಾಳ ಸೇರುತ್ತಿದ್ದಂತೆ ಬಾವಿ ಬಳಸಿದರು. ಮುಂದಿನ ದಿನಗಳಲ್ಲಿ ಬೋರ್‌ವೆಲ್ ಬಳಕೆ ಹೆಚ್ಚಾಯಿತು. ಇದೀಗ ಕೊಳವೆ ಬಾವಿ ಹಾಕಿ ನೀರು ತೆಗೆದು ಕುಡಿಯುವ ಸ್ಥಿತಿ ಎದುರಾಗಿದೆ. ಇದರಿಂದ ಫ್ಲೋರೈಡ್‌ನಂತಹ ವಿಷಕಾರಿ ವಸ್ತುಗಳು ಹೆಚ್ಚಾಗಿದ್ದು, ಶುದ್ಧ ನೀರಿಗೂ ಕುತ್ತು ಬಂದೊದಗಿದೆ. ಹೀಗೆ ಮುಂದುವರಿದರೆ ಭವಿಷ್ಯದಲ್ಲಿ ಪ್ರತಿಯೊಬ್ಬರೂ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದರು.
ಸಂಜೀವಿನಿ ಯೋಜನೆಯ ಸರಸ್ವತಿ, ಶಿಕ್ಷಕಿ ನುಸ್ರತ್, ಗ್ರಾಪಂ ಮಾಜಿ ಸದಸ್ಯೆ ಅಸೀನಾಬಾನು, ಆಶಾ ಕಾರ್ಯಕರ್ತೆಯರಾದ ಅಭಿದಾಭೀ, ಮಹಬೂಬ್ ಜಾನ್, ನುರಾನಿ, ಫಾತೀಮಾ, ಬಾಲವಿಕಾಸ ಸಂಘದ ಸದಸ್ಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kunigal:ಮನೆಗೆ ನುಗ್ಗಿದ ದುಷ್ಕರ್ಮಿಗಳು; ರಾಡ್ ನಿಂದ ತಲೆಗೆ ಹೊಡೆದು ಮಾಂಗಲ್ಯಸರ ದೋಚಿ ಪರಾರಿ
Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ
ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ
Minister ಸೋಮಣ್ಣ, ಸಿ.ಎಸ್. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್: ಬಂಧನ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.