ಮಾರ್ಕೋನಹಳ್ಳಿ ಅಚ್ಚುಕಟ್ಟು ಪ್ರದೇಶಕ್ಕೆ ನೀರು

ಸಾಲು ಕೆರೆ, 15 ಸಾವಿರ ಎಕರೆ ರಾಗಿ ಬೆಳೆಗೆ ಅನುಕೂಲಕರ | ಹರಿವಿಗೆ ಚಾಲನೆ ನೀಡಿದ ಶಾಸಕ

Team Udayavani, Aug 17, 2019, 1:08 PM IST

tk-tdy-1

ಮಾರ್ಕೋನಹಳ್ಳಿ ಅಚ್ಚು ಕಟ್ಟು ಪ್ರದೇಶದ ಸಾಲು ಕೆರೆಗೆ ಗೇಟ್ವಾಲ್ ತಿರುಗಿಸುವ ಮೂಲಕ ಶಾಸಕ ಡಾ.ರಂಗನಾಥ್‌ ನೀರು ಹರಿವಿಗೆ ಚಾಲನೆ ನೀಡಿದರು.

ಕುಣಿಗಲ್: ನೀರಾವರಿ ಸಲಹಾ ಸಮಿತಿ ತೀರ್ಮಾನದಂತೆ ಶುಕ್ರವಾರ ಮಾರ್ಕೋನಹಳ್ಳಿ ಜಲಾಶಯದ ಅಚ್ಚುಕಟ್ಟು ಪ್ರದೇಶದ ಸಾಲು ಕೆರೆಗಳಿಗೆ ಮತ್ತು ರಾಗಿ ಬೆಳೆಗೆ ನೀರು ಬಿಡಲಾಯಿತು.

ನೀರು ಹರಿವಿಗೆ ಚಾಲನೆ ನೀಡಿದ ಬಳಿಕ ಮಾರ್ಕೋನಹಳ್ಳಿ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಡಾ.ರಂಗನಾಥ್‌, ಜಲಾಶಯದ ಪೂರ್ಣ ನೀರಿನ ಮಟ್ಟ 88.50 ಅಡಿ ಇದ್ದು, ಪ್ರಸ್ತುತ 82 ಅಡಿ ನೀರಿದೆ. ಮಲೆನಾಡು ಪ್ರದೇಶದಲ್ಲಿ ಉತ್ತಮ ಮಳೆಯಾಗಿ ಗೂರೂರು ಜಲಾಶಯ ಪರಿಪೂರ್ಣವಾಗಿ ತುಂಬಿದೆ. ಅಮೃತೂರು ಹೋಬಳಿ ವ್ಯಾಪ್ತಿಯಲ್ಲಿ ಕೆರೆ ಕಟ್ಟೆಗಳು ಬರಿದಾಗಿ ಅಂತರ್ಜಲ ಮಟ್ಟ ಕುಸಿದಿದ್ದು, ಕೊಳವೆ ಬಾವಿಗಳು ಬರಿದಾಗಿ ಜನ-ಜಾನುವಾರುಗಳ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಈಗ ಜಲಾಶಯದಲ್ಲಿ ಲಭ್ಯವಿರುವ ನೀರಿನ ಮಟ್ಟದ ಅನುಗುಣವಾಗಿ ಈ ವ್ಯಾಪ್ತಿಯಲ್ಲಿ ಸಾಲು ಕೆರೆ ತುಂಬಿಸಿ ಅಂರ್ತಜಲ ಮಟ್ಟ ಹೆಚ್ಚಿಸಿ ಕುಡಿಯುವ ನೀರಿಗೆ ಅನುಕೂಲ ಮಾಡಿಕೊಡುವುದರ ಜತೆಗೆ ಸುಮಾರು 15 ಸಾವಿರ ಎಕರೆ ರಾಗಿ ಬೆಳೆಗೆ ನೀರು ಕೊಡಲು ನೀರಾವರಿ ಸಲಹಾ ಸಮಿತಿ ತೀರ್ಮಾನದಂತೆ ನೀರು ಹರಿಸಲಾಗಿದೆ ಎಂದು ಹೇಳಿದರು.

ಜಿಲ್ಲೆಯ ನೀರಿನ ಪಾಲು ಕೊಡಿ: ತುಮಕೂರು ಜಿಲ್ಲೆಯ ಪಾಲಿನ 24 ಟಿ.ಎಂ.ಸಿ, ಕುಣಿಗಲ್ ಪಾಲಿನ 4 ಟಿ.ಎಂ.ಸಿ ನೀರು ನಿಗದಿತ ಅವಧಿಯೊಳಗೆ ಹರಿಸಬೇಕು. ಹೇಮಾವತಿ ನದಿ ಉಕ್ಕಿ ಹರಿಯುತ್ತಿದ್ದು, ನೀರು ಸಮುದ್ರ ಸೇರುವ ಮುನ್ನ ಜಿಲ್ಲೆಗೆ 24 ಟಿಎಂಸಿ ಹರಿಸಲು ಸರ್ಕಾರ ಹಾಗೂ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಎರಡು ದಿನದಲ್ಲಿ ಕಾಮಗಾರಿ ಪೂರ್ಣ: ಮಾಜಿ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌, ಮಾರ್ಕೋನಹಳ್ಳಿ ಎಡ ಮತ್ತು ಬಲದಂಡೆ ನಾಲಾ ಅಗಲೀಕರಣಕ್ಕೆ ಸುಮಾರು 60 ಕೋಟಿ ರೂ. ಅನುದಾನ ನೀಡಿದ್ದರು. ಅನುದಾನ ಬಳಸಿ ನಾಲೆ ಆಧುನೀಕರಣಗೊಳಿಸಲಾಗಿದೆ. ಇನ್ನು ಶೇ.2 ರಷ್ಟು ಕಾಮಗಾರಿ ಬಾಕಿ ಇದ್ದು, ಎರಡು ದಿನದಲ್ಲಿ ಪೂರ್ಣಗೊಳಿಸಿ ಜಮೀನುಗಳಿಗೆ ನೀರು ಹರಿಸಲಾಗುವುದು ಎಂದು ಭರವಸೆ ನೀಡಿದರು.

ಸಿಎಂ ವಿಶ್ವಾಸ ದ್ರೋಹ ಮಾಡಲ್ಲ: 25 ವರ್ಷದಿಂದ ಕುಣಿಗಲ್ ತಾಲೂಕಿಗೆ ಹರಿಯಬೇಕಾದ ಹೇಮೆ ನೀರು ಹರಿಯಲಿಲ್ಲ, ಇದರಿಂದ ತಾಲೂಕಿನ ನಾಗರಿಕರು ಮತ್ತು ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಇದನ್ನು ಅರಿತು ಸಂಸದ ಡಿ.ಕೆ.ಸುರೇಶ್‌ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, 614 ಕೋಟಿ ರೂ. ವೆಚ್ಚದಲ್ಲಿ ಲಿಂಕ್‌ ಕೆನಾಲ್ಗೆ ಅನುಮೋದನೆ ನೀಡಿದ್ದರಯರು. ಈ ಸಂಬಂಧ ಈಗಾಗಲೇ ಇ-ಟೆಂಡರ್‌ ಕರೆಯಲಾಗಿದೆ. ಆದರೆ ಇದನ್ನು ವಿರೋಧಿಸಿ ತುಮಕೂರು ಬಿಜೆಪಿಯ ಕೆಲ ಮುಖಂಡರು ಸಿಎಂ ಯಡಿಯೂರಪ್ಪಗೆ ದೂರು ಸಲ್ಲಿಸಿದ್ದಾರೆ. ಈ ಸಂಬಂಧ ಯಡಿಯೂರಪ್ಪ ಅವರನ್ನು ಭೇಟಿಯಾದಾಗ ‘ನೀರಿನ ವಿಚಾರದಲ್ಲಿ ರಾಜಕಾರಣ ಮಾಡುವುದಿಲ್ಲ’ ಎಂದು ಭರವಸೆ ನೀಡಿದ್ದಾರೆ. ಹಾಗಾಗಿ ಸಿಎಂ ವಿಶ್ವಾಸ ದ್ರೋಹ ಮಾಡುವುದಿಲ್ಲ ಎಂದು ನಂಬಿರುವುದಾಗಿ ಶಾಸಕರು ತಿಳಿಸಿದರು.

ತಹಶಿಲ್ದಾರ್‌ ವಿ.ಆರ್‌. ವಿಶ್ವನಾಥ್‌, ಇಇ ಮಂಜೇಶ್‌ಗೌಡ, ಎಇಇ ಗಂಗಾಧರ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

1

Pushpa 2: ಕಿಸಿಕ್‌ ಎಂದು ಕುಣಿದ ಶ್ರೀಲೀಲಾ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.