Tumkur : ತಾಳಿ ಕಟ್ಟುವ ವೇಳೆ ಮದುವೆ ಬೇಡವೆಂದು ಹಸೆಮಣೆಯಿಂದ ಮೇಲೆದ್ದ ವಧು
Team Udayavani, Aug 27, 2023, 2:55 PM IST
ತುಮಕೂರು: ಮದುವೆ ನಡೆಯುತ್ತಿದ್ದ ವೇಳೆ ವರ ವಧುವಿಗೆ ತಾಳಿ ಕಟ್ಟುವ ಸಂದರ್ಭದಲ್ಲಿ ವಧು ನನಗೆ ಮದುವೆ ಬೇಡ ಎಂದು ಹಸೆಮಣೆಯಿಂದ ಮೇಲೆದ್ದಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಕೋಳಾಲ ಕೋಳಾಲ ಗ್ರಾಮದಲ್ಲಿ ಆ.27ರ ಭಾನುವಾರ ನಡೆದಿದೆ.
ಸಾಲಾ ಸೋಲಾ ಮಾಡಿ ಮದುವೆಯ ಸಿದ್ಧತೆ ಮಾಡಿ ನೆಂಟರಿಷ್ಟರು, ಬಂಧು ಬಳಗ ಎಲ್ಲಾ ಸೇರಿ ಕಳೆದ ರಾತ್ರಿಯಿಂದ ಆರತಕ್ಷತೆ, ಮದುವೆಯ ವಿವಿಧ ಶಾಸ್ತ್ರಗಳು ಸರಗಾವಾಗಿ ನಡೆದಿದ್ದು ಭಾನುವಾರ ಬೆಳಗ್ಗೆ ಮದುವೆಯ ಮಂಟಪದಲ್ಲಿ ವರ ವಧುವಿಗೆ ಮಾಂಗಲ್ಯ ಧಾರಣೆ ಮಾಡುವ ವೇಳೆ ನನಗೆ ಈ ಮದುವೆಯೇ ಬೇಡ ಎಂದು ವಧು ಮದುವೆ ಮಂಟಪದಿಂದ ಹೊರ ನಡೆದಿದ್ದಾರೆ.
ತಾಳಿ ಕಟ್ಟೋ ವೇಳೆ ಹಸೆಮಣೆಯಿಂದ ವಧು ಎದ್ದು ಹೊರನಡೆದ ಹಿನ್ನೆಲೆ ಮದುವೆ ಅರ್ಧಕ್ಕೆ ಮುರಿದು ಬಿದ್ದಿದೆ ಮದುವೆ.
ಮದುವೆ ಬೇಡ ಎಂದು ಮೇಲೆದ್ದ ವಧು ದಿವ್ಯಾ:
ಬೇರೆ ಹುಡುಗನನ್ನು ಪ್ರೀತಿಸುತ್ತಿದ್ದೇನೆ. ಹೀಗಾಗಿ ಮದುವೆ ಬೇಡ ಎಂದು ವಧು ಮದುವೆ ಕ್ಯಾನ್ಸಲ್ ಮಾಡಿದ್ದಾರೆ. ಕೋಳಾಲ ಗ್ರಾಮದ ಕೆ.ಸಿ.ಎನ್. ಕನ್ವೆನ್ಷನ್ ಹಾಲ್ ನಲ್ಲಿ ನಡೆಯುತ್ತಿದ್ದ ಮದುವೆಯಲ್ಲಿ ಈ ಘಟನೆ ನಡೆದಿದೆ.
ರಾತ್ರಿ ರಿಸೆಪ್ಷನ್ ನಲ್ಲಿ ಹುಡುಗ ವೆಂಕಟೇಶ್ ನೊಂದಿಗೆ ದಿವ್ಯ ನಗುನಗುತ್ತಲೇ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಭಾನುವಾರ ವೆಂಕಟೇಶ್ ಎಂಬವರ ಜೊತೆ ದಿವ್ಯ ಮದುವೆ ನಡೆಯುತ್ತಿದ್ದು, ಬೆಳಗ್ಗೆ ಮುಹೂರ್ತಕ್ಕೆ ಬರುತ್ತಿದ್ದಂತೆ ಮದುವೆ ಬೇಡ ಎಂದ ದಿವ್ಯಾ ಹೇಳಿದ್ದಾರೆ.
ದೊಡ್ಡಬಳ್ಳಾಪುರದ ತಾಲೂಕಿನ ಮೂಡ್ಲಕಾಳೇನಹಳ್ಳಿಯ ಸಿದ್ದಮ್ಮ ಮತ್ತು ಗೋವಿಂದರಾಜು ಪುತ್ರ ವೆಂಕಟೇಶ್ ಅವರ ವಿವಾಹ ಸಮಾರಂಭವು ನೆಲಮಂಗಲ ತಾಲೂಕಿನ ದೊಡ್ಡಬೆಲೆ ಗ್ರಾಮದ ಅಂಜನಮ್ಮ ನರಸಿಂಹಮೂರ್ತಿ ಪುತ್ರಿ ದಿವ್ಯಾ ನಡುವೆ ಮದುವೆ ನಡೆಯುತ್ತಿತ್ತು.
ಹುಡುಗಿ ಉಲ್ಟಾ ಹೊಡೆಯುತ್ತಿದ್ದಂತೆ ಕಲ್ಯಾಣ ಮಂಟಪದಲ್ಲಿ ಗದ್ದಲ ಉಂಟಾಗಿದೆ. ಎರಡು ಕಡೆಯವರಿಂದ ಮಾತಿನ ಚಕಮಕಿ ನಡೆದಿದ್ದು, ಕೋಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹುಡುಗನ ಕಡೆಯವರಿಂದ ಆಕ್ರೋಶ ವ್ಯಕ್ತವಾಗಿದೆ. ಹುಡುಗಿ ಬೇರೆಯವರನ್ನು ಪ್ರೀತಿ ಮಾಡುತ್ತಿದ್ದಾಳೆ ಎಂದು ಗೊತ್ತಿದ್ದರೂ ಪೋಷಕರು ಈ ಮದುವೆ ನಿಶ್ಚಯ ಮಾಡಿರುವುದಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.