ಪಾವಗಡದಲ್ಲಿ ಜಗತ್ತಿನ 8ನೇ ಅದ್ಭುತ: ಸಿಎಂ
Team Udayavani, Mar 2, 2018, 8:15 AM IST
ತುಮಕೂರು/ಪಾವಗಡ: ಜಗತ್ತಿನಲ್ಲಿ ಎಲ್ಲಿಯೂ ಇಲ್ಲದ ಸೋಲಾರ್ ಪಾರ್ಕ್ ಇಲ್ಲಿದೆ. ಅದಕ್ಕೆ ಇಲ್ಲಿನ ಜನ ಸಂತಸಪಡಬೇಕು. 13 ಸಾವಿರ ಎಕರೆ ಪ್ರದೇಶದಲ್ಲಿ 2,000 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಆಗುತ್ತಿರುವುದು ಜಗತ್ತಿನ ಎಂಟನೇ ಅದ್ಭುತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಪಾವಗಡ ತಾಲೂಕಿನ ತಿರುಮಣಿಯಲ್ಲಿ ಗುರುವಾರ 600 ಮೆ.ವ್ಯಾ. ಸೋಲಾರ್ ವಿದ್ಯುತ್ ಪಾರ್ಕ್‌ಗೆ ಚಾಲನೆ ನೀಡಿ ಅವರು ಮಾತನಾಡಿದರು. ತಿರುಮಣಿ ಸುತ್ತಮುತ್ತ 13 ಸಾವಿರ ಎಕರೆ ಪ್ರದೇಶದಲ್ಲಿ ಸೋಲಾರ್ ವಿದ್ಯುತ್ ಘಟಕ ವ್ಯಾಪಿಸಿದೆ. ಇದು
ಜಗತ್ತಿನಲ್ಲಿಯೇ ಅತ್ಯಂತ ದೊಡ್ಡ ಸೋಲಾರ್ ಪಾರ್ಕ್ ಎಂದು ಹೇಳಿದರು.
2000 ಮೆಗಾವ್ಯಾಟ್ ಸಾಮರ್ಥ್ಯದ ಸೋಲಾರ್ ಪಾರ್ಕ್‌ನಲ್ಲಿ ಮೊದಲ ಹಂತವಾಗಿ 600 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಆಗುತ್ತಿದೆ. ಇನ್ನು ಎರಡೂ¾ರು ತಿಂಗಳಲ್ಲಿ ಉಳಿದಿರುವ 1,400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗಲಿದೆ. ಇದರಿಂದಾಗಿ ಈ
ಭಾಗದಲ್ಲಿ ಆರ್ಥಿಕ, ಸಾಮಾಜಿಕ ಬದಲಾವಣೆಗಳು ಉಂಟಾಗಿ ಜನರ ಜೀವನ ಮಟ್ಟ ಸುಧಾರಿಸಲಿದೆ ಎಂದು ಹೇಳಿದರು.
ಈ ವೇಳೆ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಮಾತನಾಡಿ, ವಿದ್ಯುತ್ ಉತ್ಪಾದನೆಯಲ್ಲಿ ರಾಜ್ಯ ದೇಶದಲ್ಲಿಯೇ 4ನೇ ಅತಿದೊಡ್ಡ ರಾಜ್ಯವಾಗಿದ್ದು, ಸೋಲಾರ್ ವಿದ್ಯುತ್ ಉತ್ಪಾದನೆಯಲ್ಲಿ ಇಡೀ ವಿಶ್ವದಲ್ಲಿಯೇ ನಂ.1 ಸ್ಥಾನದಲ್ಲಿರುವುದರಿಂದ ಇನ್ನು ಮುಂದೆ ರಾಜ್ಯದ ಜನರಿಗೆ ಯಾವುದೇ ರೀತಿಯ ಲೋಡ್‌ಶೆಡ್ಡಿಂಗ್ ಸಮಸ್ಯೆ ಇರುವುದಿಲ್ಲ ಎಂದು ತಿಳಿಸಿದರು. ಪಾವಗಡ ತಾಲೂಕಿನಲ್ಲಿ
ಉತ್ಪಾದನೆಯಾಗುವ ಸೌರ ವಿದ್ಯುತ್‌ನ್ನು ಇಲ್ಲಿಯ ರೈತರಿಗೆ ಮೊದಲ ಆದ್ಯತೆ ನೀಡಿ ಅವರ ಕೃಷಿ ಕಾರ್ಯಗಳಿಗೆ ನೀಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.