“ಅಟಲ್‌ ಟ್ರೋಫಿ’ ಪ್ರೊ ಕಬಡ್ಡಿ ಪಂದ್ಯಾಟಕ್ಕೆ ಭರದ ಸಿದ್ಧತೆ


Team Udayavani, Dec 23, 2022, 6:00 AM IST

Udayavani Kannada Newspaper

ಉಡುಪಿ : ಬಿಜೆಪಿ ಉಡುಪಿ ನಗರ ಮತ್ತು ಗ್ರಾಮಾಂತರ ವತಿಯಿಂದ ಹಮ್ಮಿಕೊಂಡ “ಅಟಲ್‌ ಉತ್ಸವ’ದ ಪ್ರಯುಕ್ತ ಎಂಜಿಎಂ ಕಾಲೇಜು ಮೈದಾನದಲ್ಲಿ ಶಾಸಕ ಕೆ. ರಘುಪತಿ ಭಟ್‌ ನೇತೃತ್ವದಲ್ಲಿ ಡಿ. 24ರಂದು ನಡೆಯಲಿರುವ ಹೊನಲು ಬೆಳಕಿನ ರಾಷ್ಟ್ರಮಟ್ಟದ ಮುಕ್ತ ಪ್ರೊ ಕಬಡ್ಡಿ ಪಂದ್ಯಾಟಕ್ಕೆ ಭರದ ಸಿದ್ಧತೆ ನಡೆಯುತ್ತಿದೆ.

ಪಂದ್ಯಾಟದಲ್ಲಿ ಸುಮಾರು 6 ಸಾವಿರ ಜನರು ಕುಳಿತುಕೊಳ್ಳಲು ಗ್ಯಾಲರಿಗಳ ವ್ಯವಸ್ಥೆ, ಸ್ಟೇಡಿಯಂನಲ್ಲಿ ಸುಮಾರು 5 ಸಾವಿರ ಜನರು ವೀಕ್ಷಿಸಲು ಆಸನಗಳ ವ್ಯವಸ್ಥೆ ಮಾಡಲಾಗಿದೆ. ಒಟ್ಟು 25 ಸಾವಿರ ಜನರು ಪಂದ್ಯಾಟವನ್ನು ವೀಕ್ಷಿಸುವ ನಿರೀಕ್ಷೆ ಮಾಡಲಾಗಿದೆ. ಅಟಲ್‌ ಉತ್ಸವದ ಮೆರುಗು ಹೆಚ್ಚಿಸಲು ಉಡುಪಿ ನಗರವನ್ನು ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿದೆ. ಕಲ್ಸಂಕದಿಂದ ಎಂಜಿಎಂ ವೆರೆಗೆ ಪ್ಷಸ ಧ್ವಜ, ಪತಾಕೆಗಳು, ಬ್ಯಾನರ್‌ಗಳನ್ನು ಅಳವಡಿಸಿ ಶೃಂಗರಿಸಲಾಗಿದೆ.

12 ತಂಡಗಳು
ಕೇಂದ್ರದ ಯುವ ವ್ಯವಹಾರ ಮತ್ತು ಕ್ರೀಡಾ, ಮಾಹಿತಿ ತಂತ್ರಜ್ಞಾನ ಹಾಗೂ ಪ್ರಸಾರ ಇಲಾಖೆ ಸಚಿವ ಅನುರಾಗ್‌ ಸಿಂಗ್‌ ಠಾಕೂರ್‌ ಅವರು ಅಟಲ್‌ ಟ್ರೋಫಿಯನ್ನು ಉದ್ಘಾಟಿಸಲಿದ್ದು, ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣಗೌಡ ಕ್ರೀಡಾಂಗಣವನ್ನು ಉದ್ಘಾಟಿಸಲಿದ್ದಾರೆ. ಕರ್ನಾಟಕ ಸೇರಿದಂತೆ ಹೊರ ರಾಜ್ಯಗಳಾದ ದೆಹಲಿ, ಹರ್ಯಾಣ, ತಮಿಳುನಾಡು, ಮಹಾರಾಷ್ಟ್ರ, ಕೇರಳ ರಾಜ್ಯಗಳ ಒಟ್ಟು 12 ತಂಡಗಳು ಭಾಗವಹಿಸಲಿವೆ. ಅನುಕ್ರಮವಾಗಿ 1 ಲ.ರೂ., 75,000 ರೂ., 50,000 ರೂ., 25,000 ರೂ. ಬಹುಮಾನಗಳನ್ನು ಪ್ರಶಸ್ತಿ ಫ‌ಲಕಗಳೊಂದಿಗೆ ಪ್ರಥಮ, ದ್ವಿತೀಯ, ತೃತೀಯ, ಚತುರ್ಥ ಸ್ಥಾನಗಳ ವಿಜೇತರಿಗೆ ನೀಡಲಾಗುವುದು.

5 ಅಡಿ ಎತ್ತರದ ಟ್ರೋಫಿ
ಜೀವನದ ಉದ್ದಕ್ಕೂ ನೆನಪಿಸುವಂತೆ ಸುಮಾರು 5 ಅಡಿ ಎತ್ತರದ ಆಕರ್ಷಕ ಟ್ರೋಫಿಗಳನ್ನು ಬಹುಮಾನವಾಗಿ ಕೊಡಲಾಗುವುದು. ಡಿ. 24ರ ಸಂಜೆ 5ಕ್ಕೆ ಮಹಿಳಾ ಕಬಡ್ಡಿ ಆರಂಭಗೊಳ್ಳಲಿದ್ದು, ಅನಂತರ ಉದ್ಘಾಟನೆ ಸಮಾರಂಭ ನೆರವೇರಲಿದೆ. ಕಾರ್ಯಕರ್ತರು ತಯಾರಿಯಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡು ಅಟಲ್‌ ಉತ್ಸವದ ಯಶಸ್ಸಿಗೆ ಶ್ರಮಿಸುತ್ತಿದ್ದಾರೆ.

25,000 ಕ್ರೀಡಾಸಕ್ತರ ನಿರೀಕ್ಷೆ
ಪ್ರಸ್ತುತ ಪ್ರೊ ಕಬಡ್ಡಿ ಜನಪ್ರಿಯತೆಯನ್ನು ಗಳಿಸುತ್ತಿರುವ ನೆಲೆಯಲ್ಲಿ ಈ ಪಂದ್ಯಾಟವನ್ನು ವಿಜೃಂಭಣೆಯಿಂದ ಆಯೋಜಿಸಲಾಗಿದೆ. ಪಂದ್ಯಾಟದಲ್ಲಿ ಸುಮಾರು 25 ಸಾವಿರಕ್ಕೂ ಮಿಕ್ಕಿ ಕ್ರೀಡಾಸಕ್ತರು ಭಾಗವಹಿಸುವ ನಿರೀಕ್ಷೆಯಿದೆ ಎಂದು ನಗರ ಬಿಜೆಪಿ ಅಧ್ಯಕ್ಷ ಮಹೇಶ್‌ ಠಾಕೂರ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

Untitled-1

Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ

KMC

Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ 

ಉಡುಪಿ: ಶಿಕ್ಷಣ ಇಲಾಖೆಯಲ್ಲಿ ಪ್ರತ್ಯೇಕ ಪರಿಹಾರ ನಿಧಿಯೇ ಇಲ್ಲ !

ಉಡುಪಿ: ಶಿಕ್ಷಣ ಇಲಾಖೆಯಲ್ಲಿ ಪ್ರತ್ಯೇಕ ಪರಿಹಾರ ನಿಧಿಯೇ ಇಲ್ಲ !

police

Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್‌ ದಾಳಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.