ಹತ್ತು ದಿನದೊಳಗೆ ಜಿಲ್ಲೆಯ ಮರಳುಗಾರಿಕೆ ಪುನರಾರಂಭಕ್ಕೆ ಕ್ರಮ: ಕೋಟ
ನೂತನ ಸಚಿವರಿಗೆ ಹುಟ್ಟೂರಲ್ಲಿ ಭವ್ಯ ಸ್ವಾಗತ
Team Udayavani, Aug 22, 2019, 10:45 PM IST
ಕೋಟ: ಸರಕಾರ ಈಗಾಗಲೇ ಆಗಸ್ಟ್ 1 ರಿಂದ ಜಿಲ್ಲೆಯಲ್ಲಿ ಮರಳುಗಾರಿಕೆಗೆ ಅವಕಾಶ ನೀಡಿದೆ. ಇಂದು ಉಡುಪಿಗೆ ಆಗಮಿಸಿದ ಸಂದರ್ಭ ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟ ಮುಖ್ಯಸ್ಥರ ಜತೆ ಚರ್ಚಿಸಿ ಮರಳುಗಾರಿಕೆ ಆರಂಭಕ್ಕೆ ಕ್ರಮಕೈಗೊಳ್ಳುವಂತೆ ಸೂಚಿಸಿದ್ದೇನೆ. ಕಾನೂನಿನ ತೊಡಕುಗಳು ಬಾರದಿದ್ದಲ್ಲಿ ಹತ್ತು ದಿನದೊಳಗೆ ಮರಳುಗಾರಿಕೆ ಪುನರಾರಂಭಗೊಳ್ಳುವ ಭರವಸೆ ಇದೆ ಎಂದು ರಾಜ್ಯ ಸರಕಾರದ ಕ್ಯಾಬಿನೇಟ್ ದರ್ಜೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಅವರು ಗುರುವಾರ ಸಂಜೆ ಪ್ರಥಮ ಬಾರಿಗೆ ಹುಟ್ಟೂರಿಗೆ ಆಗಮಿಸಿದ ಪತ್ರಕರ್ತರೊಂದಿಗೆ ಮಾತುನಾಡುತ್ತ ಈ ವಿಚಾರ ತಿಳಿಸಿದರು.
ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಪುನರಾರಂಭದ ಕುರಿತು ಕೇಳಿದ ಪ್ರಶ್ನೆಗೆ, ಸಕ್ಕರೆ ಕಾರ್ಖಾನೆ ಪುನರಾರಂಭಕ್ಕೆ ಹೋರಾಟ ಮಾಡಿದರ್‍ಲಲಿ ನಾನು ಒಬ್ಬ. ಆದರೆ ಪ್ರಸ್ತುತ ಹಲವಾರು ಸಮಸ್ಯೆಗಳಿರುವುದರಿಂದ ರೈತಮುಖಂಡರು ಹಾಗೂ ಹೋರಾಟಗಾರರು, ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಪೂರಕ ಕ್ರಮಕೈಗೊಳ್ಳಲಾಗುವುದು ಎಂದರು.
ಕುಂದಾಪುರ ಮಿನಿವಿಧಾನಸೌಧ ಕಟ್ಟದದ ಕಳಫೆ ಕಾಮಗಾರಿ ಕುರಿತು ಪ್ರಶ್ನಿಸಿದಾಗ, ಈ ಕುರಿತು ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ. ಜಿಲ್ಲಾಧಿಕಾರಿಗಳ ವರದಿ ಆಧಾರದಲ್ಲಿ ಮುಂದಿನ ಕ್ರಮಕೈಗೊಳ್ಳಲಿದ್ದೇನೆ ಎಂದರು.
ಸಚಿವ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಹುಟ್ಟೂರಲ್ಲಿ ಭವ್ಯ ಸ್ವಾಗತ
ಕೋಟ: ರಾಜ್ಯದ ಕ್ಯಾಬಿನೆಟ್ ದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿ ಗುರುವಾರ ಪ್ರಥಮ ಬಾರಿಗೆ ಹುಟ್ಟೂರಿಗೆ ಆಗಮಿಸಿದ ಕೋಟ ಶ್ರೀನಿವಾಸ ಪೂಜಾರಿಯವರನ್ನುಸ್ಥಳೀಯರು ಭವ್ಯವಾಗಿ ಸ್ವಾಗತಿಸಿದರು.
ಐರೋಡಿ ಗ್ರಾ.ಪಂ. ಸದಸ್ಯರು ಹಾಗೂ ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತಿಸಿದರು. ಅನಂತರ ಸಾಸ್ತಾನದಲ್ಲೂ ಕಾರ್ಯಕರ್ತರು ಶುಭಕೋರಿದರು. ಅಲ್ಲಿಂದ ನೇರವಾಗಿ ಕುಟುಂಬ ಸಮೇತ ಸಾಲಿಗ್ರಾಮ ಗುರುನರಸಿಂಹ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭ ದೇಗುಲದ ವತಿಯಿಂದ ನೆರಪರಿಹಾರ ನಿಽಗೆ ೨ಲಕ್ಷ ರೂ ಧೇಣಿಗೆಯನ್ನು ಆಡಳಿತ ಮಂಡಳಿ ಅಧ್ಯಕ್ಷ ಆನಂತಪದ್ಮನಾಭ ಐತಾಳ ಹಸ್ತಾಂತರಿಸಿದರು.
ಕೋಟ ಅಮೃತೇಶ್ವರೀ ದೇಗುದಲ್ಲಿ ನೂರಾರು ಮಂದಿ ಗ್ರಾಮಸ್ಥರು ವಾಧ್ಯಘೋಷ, ಜೈಕಾರದೊಂದಿಗೆ ಬರಮಾಡಿಕೊಂಡರು ಮತ್ತು ದೇವಿಗೆ ಪೂಜೆ ಸಲ್ಲಿಸಿದರು. ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಆನಂದ ಸಿ.ಕುಂದರ್ ಮತ್ತು ಕಾರ್ಯನಿರ್ವಹಣಾಧಿಕಾರಿ ಸುಧಾಕರ ಗೌರವಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.