ಪರಿಸರದ ಅಭಿವೃದ್ಧಿಗೆ ವಿನಿಯೋಗವಾಗದ 5 ಕೋ.ರೂ.
Team Udayavani, Dec 21, 2018, 1:45 AM IST
ಗಂಗೊಳ್ಳಿ: ಕೋಡಿ ಹಾಗೂ ಗಂಗೊಳ್ಳಿಯಲ್ಲಿ ಬ್ರೇಕ್ ವಾಟರ್ ಕಾಮಗಾರಿಗೆ ನೀಡಲಾದ 102 ಕೋ.ರೂ. ಅನುದಾನದಲ್ಲಿ 5 ಕೋ.ರೂ. ಅಲ್ಲಿನ ರಸ್ತೆ, ಪರಿಸರದ ಅಭಿವೃದ್ಧಿಗೆ ವಿನಿಯೋಗಿಸಬೇಕು ಎನ್ನುವ ಕರಾರು ಇದ್ದರೂ, ಬ್ರೇಕ್ ವಾಟರ್ ಕಾಮಗಾರಿ ಮಾತ್ರ ಮುಗಿಸಿ ಕೈತೊಳೆದುಕೊಂಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
ಬ್ರೇಕ್ ವಾಟರ್ ಕಾಮಗಾರಿ ಸಲುವಾಗಿ ಟೆಟ್ರಾಫೈಡ್ ಸಹಿತ ಭಾರೀ ಗಾತ್ರದ ಸರಕು ವಸ್ತುಗಳನ್ನು ಘನ ವಾಹನಗಳ ಮೂಲಕ ಸಾಗಾಟ ಮಾಡಿದ್ದರಿಂದ ಗಂಗೊಳ್ಳಿ ಪರಿಸರದ ಸುಮಾರು 5 ಕ್ಕೂ ಹೆಚ್ಚಿನ ಒಳ ರಸ್ತೆಗಳೆಲ್ಲ ಸಂಪೂರ್ಣ ಹಾಳಾಗಿ ಹೋಗಿದೆ. ಕೆಲವು ರಸ್ತೆಗಳಲ್ಲಿ ಅಂತೂ ಡಾಮರೇ ಕಿತ್ತು ಹೋಗಿದೆ. ಮತ್ತೆ ಕೆಲವು ರಸ್ತೆಗಳಲ್ಲಿ ಹೊಂಡ – ಗುಂಡಿಗಳಿಂದಾಗಿ ಸಂಚಾರ ಕಷ್ಟಕರವಾಗಿದೆ. 102 ಕೋ.ರೂ. ಬ್ರೇಕ್‌ವಾಟರ್ ಕಾಮಗಾರಿಯಲ್ಲಿ ಗುತ್ತಿಗೆದಾರರು 5 ಕೋ.ರೂ. ರಸ್ತೆ, ಪರಿಸರ ಅಭಿವೃದ್ಧಿಗೆ ಬಳಸಬೇಕು ಎನ್ನುವುದು ಕಾಮಗಾರಿ ಆರಂಭದಲ್ಲೇ ಮಾತುಕತೆಯಾಗಿತ್ತು. ಈಗ ಕಾಮಗಾರಿ ಮುಗಿದಿದೆ. ಆದರೆ ಇಲ್ಲಿನ ರಸ್ತೆ ಅಥವಾ ಪರಿಸರದ ಅಭಿವೃದ್ಧಿ ಸಂಬಂಧ ಈ 5 ಕೋ.ರೂ. ಮಾತ್ರ ಬಳಕೆಯಾದಂತೆ ಕಾಣುತ್ತಿಲ್ಲ.
ಸಚಿವರಿಗೂ ಮನವಿ
ಬ್ರೇಕ್ ವಾಟರ್ ಕಾಮಗಾರಿಯ ಅನುದಾನದಲ್ಲಿ ಅಲ್ಪ ಹಣವನ್ನು ಇಲ್ಲಿನ ಪರಿಸರದ ಅಭಿವೃದ್ಧಿಗೆ ಬಳಸದ ಹಿನ್ನೆಲೆಯಲ್ಲಿ ಕಳೆದ ಜುಲೈನಲ್ಲಿ ಗಂಗೊಳ್ಳಿ ಬಂದರಿಗೆ ಮೀನುಗಾರಿಕಾ ಸಚಿವರು ಭೇಟಿ ಕೊಟ್ಟ ವೇಳೆ ಅವರಿಗೂ ಈ ಬಗ್ಗೆ ದೂರು ನೀಡಲಾಗಿತ್ತು. ಕೂಡಲೇ ಕ್ರಮ ವಹಿಸಲಾಗುವುದು ಎಂದವರು ಆಗ ಭರವಸೆ ನೀಡಿದ್ದರು. ಅದಲ್ಲದೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮೀನುಗಾರರು, ಗುತ್ತಿಗೆದಾರರ ಜಂಟಿ ಸಭೆಯಲ್ಲಿ ಇಲ್ಲಿನ ಪರಿಸರದ ಅಭಿವೃದ್ಧಿ ಮಾಡಿಕೊಡಲಾಗುವುದು ಟೆಂಡರ್ ವಹಿಸಿಕೊಂಡವರು ತಿಳಿಸಿದ್ದರು.
ಕೂಡಲೇ ಮಾಡಲಿ
ಬ್ರೇಕ್ ವಾಟರ್ ಸಹಿತ ಇನ್ನಿತರ ಕಾಮಗಾರಿಗಾಗಿ ಸರಕು ವಸ್ತುಗಳನ್ನು ಸಾಗಿಸಲು ಇಲ್ಲಿನ ಒಳ ರಸ್ತೆಗಳನ್ನೇ ಬಳಸಿದ್ದರಿಂದ ರಸ್ತೆಗಳು ಈಗ ಸಂಪೂರ್ಣ ಅಧೋಗತಿಯಲ್ಲಿದೆ. ಇಲ್ಲಿನ ರಸ್ತೆಗಳಲ್ಲಿ ಸಂಚರಿಸುವುದೇ ಅಸಾಧ್ಯ ಎನ್ನುವ ಪರಿಸ್ಥಿತಿಯಿದೆ. ಡಿಸಿ ಜತೆಗಿನ ಸಭೆಯಲ್ಲಿಯೂ 97 ಕೋ.ರೂ. ವೆಚ್ಚದಲ್ಲಿ ಬ್ರೇಕ್ ವಾಟರ್ ಕಾಮಗಾರಿ ಬಾಕಿ ಉಳಿದ 5 ಕೋ.ರೂ. ಹಣವನ್ನು ಇಲ್ಲಿನ ಪರಿಸರ ಸಹಿತ ಇನ್ನಿತರ ಅಭಿವೃದ್ಧಿಗೆ ಬಳಸಲಾಗುವುದು ಎಂದು ತಿಳಿಸಿದ್ದರು. ಇನ್ನಾದರೂ ಅದನ್ನು ಕೂಡಲೇ ಮಾಡಿಕೊಡಲು ಮುಂದಾಗಲಿ.
– ರಮೇಶ್ ಕುಂದರ್, ಮೀನುಗಾರ ಮುಖಂಡರು
ಪರಿಶೀಲಿಸಿದ ಬಳಿಕ ನಿರ್ಧಾರ
ಅಂದಾಜು ಪಟ್ಟಿಯಲ್ಲಿ ಏನಿದೆ ಅಂತಾ ನೋಡಿಕೊಂಡು, ಆ ಬಳಿಕ ಏನು ಮಾಡಬೇಕು ಅನ್ನುವುದರ ಕುರಿತು ನಿರ್ಧಾರ ಮಾಡಲಾಗುವುದು. ನಾನು ಹೊಸದಾಗಿ ಬಂದಿರುವುದರಿಂದ ಈ ಬಗ್ಗೆ ತಿಳಿದುಕೊಂಡು ಆ ಬಳಿಕ ಮಾಹಿತಿ ನೀಡುತ್ತೇನೆ. ಸಾಮಾನ್ಯವಾಗಿ ಪರಿಸರದ ಅಭಿವೃದ್ಧಿಗೆ ಬಳಸಬೇಕು ಎನ್ನುವ ನಿಯಮವಿರುತ್ತದೆ. ಆದರೆ ಕೆಲವೊಮ್ಮೆ ಅನುದಾನ ಪೂರ್ತಿ ಬಂದಿಲ್ಲ ಅಂದರೆ ಅದು ಸಾಧ್ಯವಾಗುವುದಿಲ್ಲ.
– ಉದಯ ಕುಮಾರ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್, ಮೀನುಗಾರಿಕಾ ಮತ್ತು ಬಂದರು ಇಲಾಖೆ
— ಪ್ರಶಾಂತ್ ಪಾದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು
Manipal: ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ
ಕಲಾವಿದರ ಮಾಸಾಶನ ಹೆಚ್ಚಳಕ್ಕೆ ಸಿಗದ ಆರ್ಥಿಕ ಇಲಾಖೆ ಒಪ್ಪಿಗೆ
Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ
Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…
Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್‌ಐ ಸಸ್ಪೆಂಡ್
Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.