“ಪರೀಕ್ಷೆ ಎದುರಿಸಲಿರುವ 14,034 ವಿದ್ಯಾರ್ಥಿಗಳು’
ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಸೆಸೆಲ್ಸಿ ಪೂರ್ವಭಾವಿ ಸಭೆ
Team Udayavani, Mar 11, 2020, 10:00 PM IST
ಉಡುಪಿ: ಜಿಲ್ಲೆಯಲ್ಲಿ ಈ ಬಾರಿ 13,028 ರೆಗ್ಯುಲರ್, 484 ರೆಗ್ಯುಲರ್ ಪುನರಾವರ್ತಿತ ವಿದ್ಯಾರ್ಥಿಗಳು, 376 ಖಾಸಗಿ ಮತ್ತು 146 ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು ಸೇರಿ ಒಟ್ಟು 14,034 ವಿದ್ಯಾರ್ಥಿಗಳು ಎಸೆಸೆಲ್ಸಿ ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಎಸೆಸೆಲ್ಸಿ ಪರೀಕ್ಷೆಯ ಸಿದ್ಧತೆಗಳ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪರೀಕ್ಷೆಗಾಗಿ ಜಿಲ್ಲೆಯಲ್ಲಿ 20 ಕ್ಲಸ್ಟರ್ ಸಹಿತ, 29 ಕ್ಲಸ್ಟರ್ ರಹಿತ ಮತ್ತು 2 ಖಾಸಗಿ ಸೇರಿ ಒಟ್ಟು 51 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಎಲ್ಲ ಕೇಂದ್ರಗಳಲ್ಲಿ ಸಿ.ಸಿ. ಟಿ.ವಿ. ಅಳವಡಿಸಲಾಗಿದ್ದು, ಜಿಲ್ಲಾ ಖಜಾನೆಯಿಂದ ಬಿಗಿ ಭದ್ರತೆಯಲ್ಲಿ ಸಕಾಲದಲ್ಲಿ ಪ್ರಶ್ನೆಪತ್ರಿಕೆ ವಿತರಿಸಲು ಮಾರ್ಗಾಧಿಕಾರಿಗಳನ್ನು ನೇಮಿಸಲಾಗಿದೆ ಎಂದರು.
ಪರೀಕ್ಷಾ ಸಿದ್ಧತೆಗಳನ್ನು ಗಂಭೀರವಾಗಿ ಸ್ವೀಕರಿಸಿ ಲೋಪಗಳಿಲ್ಲದಂತೆ ಯಶಸ್ವಿಯಾಗಿ ನಿರ್ವಹಿ ಸಬೇಕು. ಅಕ್ರಮಗಳಿಗೆ ಎಡೆನೀಡದೆ ಎಲ್ಲ ಪರೀಕ್ಷೆಗಳು ಸಾಂಗವಾಗಿ ಮತ್ತು ವ್ಯವಸ್ಥಿತವಾಗಿ ನಡೆಯುವಂತೆ ಕಟ್ಟೆಚ್ಚರ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸುಳ್ಳು ಸುದ್ದಿ ಹರಡಿದರೆ ಕ್ರಿಮಿನಲ್ ಕೇಸ್
ಪರೀಕ್ಷಾ ದಿನದಂದು ಕೇಂದ್ರಗಳ ಸುತ್ತಲೂ ಸೆಕ್ಷನ್ 144 ಜಾರಿಗೊಳಿಸಲು ಮತ್ತು ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಆದೇಶ ನೀಡಿದರು. ಕಾನೂನು ಉಲ್ಲಂ ಸಿದವರ ಮೇಲೆ ಕ್ರಮ ಜರಗಿಸಲಾಗುವುದು. ಪರೀಕ್ಷೆ ಕುರಿತು ಸುಳ್ಳು ಸುದ್ದಿ, ನಕಲಿ ಪ್ರಶ್ನೆಪತ್ರಿಕೆಗಳನ್ನು ಹರಡುವವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದರು. ಮಾಧ್ಯಮಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಂತಹ ಸುದ್ದಿಗಳನ್ನು ಪ್ರಸಾರ ಮಾಡುವ ಮುನ್ನ ಶಿಕ್ಷಣ ಇಲಾಖೆಯ ಅಧಿಕಾರಿ ಗಳೊಂದಿಗೆ ಮಾಹಿತಿಯ ನಿಖರತೆಯನ್ನು ಖಚಿತಪಡಿಸಿಕೊಳ್ಳುವಂತೆ ತಿಳಿಸಿದರು.
ಸಿಬಂದಿಗೆ ತರಬೇತಿ ನೀಡಲು ಸೂಚನೆ
ಪರೀಕ್ಷಾ ಕೇಂದ್ರದೊಳಗಡೆ ಮೊಬೈಲ್ ಬಳಕೆ ನಿಷೇಧಿಸಲಾಗಿದ್ದು, ಇದಕ್ಕಾಗಿ ಪ್ರತೀ ಕೇಂದ್ರದಲ್ಲಿ ಮೊಬೈಲ್ ಸ್ವಾಧೀನಾಧಿಕಾರಿಯನ್ನು ನೇಮಿಸಲಾಗುವುದು. ಜಾಗೃತ ದಳದ ಅಧಿಕಾರಿಗಳು ನಿಯಮಿತವಾಗಿ ಭೇಟಿ, ಪರಿಶೀಲನೆ ನಡೆಸಿ, ಅಕ್ರಮ ನಡೆಯದಂತೆ ಎಚ್ಚರಿಕೆ ವಹಿಸುವಂತೆ ಮತ್ತು ಪರೀಕ್ಷಾ ಕೊಠಡಿಯಲ್ಲಿ ಕಾರ್ಯ ನಿರ್ವಹಿಸುವ ಸಿಬಂದಿಗೆ ಅಗತ್ಯ ತರಬೇತಿ ನೀಡುವಂತೆ ಡಿಡಿಪಿಐ ಅವರಿಗೆ ಸೂಚಿಸಿದರು.
ಉತ್ತರ ಪತ್ರಿಕೆ ಇರಿಸಲು ವ್ಯವಸ್ಥೆ
ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶೇಷಶಯನ ಕಾರಿಂಜ ಮಾಹಿತಿ ನೀಡಿ, ಎಸೆಸೆಲ್ಸಿ ಉತ್ತರ ಪತ್ರಿಕೆಗಳನ್ನು ಕ್ರಿಶ್ಚಿಯನ್ ಪ್ರೌಢಶಾಲೆಯ ಭದ್ರತಾ ಕೊಠಡಿಯಲ್ಲಿ ಇರಿಸುವ ವ್ಯವಸ್ಥೆ ಮಾಡಲಾಗಿದೆ. ಪ್ರಶ್ನೆಪತ್ರಿಕೆ ಸ್ವೀಕರಿಸಲು ಪ್ರತಿ ಪರೀಕ್ಷಾ ಕೇಂದ್ರಕ್ಕೂ ಮುಖ್ಯ ಅಧೀಕ್ಷಕರನ್ನು ನೇಮಕ ಮಾಡಲಾಗಿದೆ. ಜಿಲ್ಲಾ ಜಾಗೃತ ದಳದ 2 ತಂಡಗಳನ್ನು ನಿಯೋಜಿಸಲಾಗಿದೆ. ತಹಶೀಲ್ದಾರ್, ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಒಟ್ಟು 3 ತಂಡಗಳು ಪರೀಕ್ಷಾ ಸಮಯದಲ್ಲಿ ಶಾಲೆಗಳಿಗೆ ಭೇಟಿ ನೀಡಲಿವೆ. ಪ್ರತೀ ಕೇಂದ್ರಕ್ಕೂ ವೀಕ್ಷಕರನ್ನು ಮತ್ತು ಪ್ರಶ್ನೆಪತ್ರಿಕೆಗಳನ್ನು ಸುರಕ್ಷಿತವಾಗಿ ಸಾಗಿಸಲು ಮಾರ್ಗಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಅಗತ್ಯ ಪೊಲೀಸ್ ಸಿಬಂದಿಯನ್ನು ನಿಯುಕ್ತಿಗೊಳಿಸುವಂತೆ ಜಿಲ್ಲಾಧಿಕಾ ರಿಗಳಿಗೆ ಮನವಿ ಮಾಡಿದರು. ಸಭೆಯಲ್ಲಿ ಜಿ.ಪಂ. ಉಪ ಕಾರ್ಯದರ್ಶಿ ಕಿರಣ್ ಪೆಡ್ನೆಕರ್, ಜಿಲ್ಲಾ ಖಜಾನಾಧಿಕಾರಿ ಸಾವಿತ್ರಿ ಮತ್ತು ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.