15ನೇ ಹಣಕಾಸು ಆಯೋಗ ನಿಗದಿಯಾಗಿದ್ದ ಬಹುಪಾಲು ಅನುದಾನ ಬಿಡುಗಡೆ
Team Udayavani, Jan 3, 2023, 2:59 PM IST
ಉಡುಪಿ: ಉಭಯ ಜಿಲ್ಲೆಯ ಗ್ರಾಮ ಪಂಚಾಯತ್ ಗಳಿಗೆ 2021-22ನೇ ಸಾಲಿನಲ್ಲಿ 15ನೇ ಹಣಕಾಸು ಆಯೋಗದಿಂದ ನಿಗದಿಪಡಿಸಲಾಗಿರುವ ಬಹುಪಾಲು ಅನುದಾನ ಬಿಡುಗಡೆಯಾಗಿದ್ದು, ನಿರ್ದಿಷ್ಟ ಉದ್ದೇಶಕ್ಕೆ ಬಳಕೆಯೂ ಆಗುತ್ತಿದೆ.
2022-23ನೇ ಸಾಲಿಗೆ ಈಗಾಗಲೇ ಕ್ರಿಯಾಯೋಜನೆ ಸಿದ್ಧಪಡಿಸಿ ಕಳುಹಿಸಲಾಗಿದ್ದು, ಆಯೋಗದಿಂದ ಅನುದಾನ ಹಂಚಿಕೆಯ ಆಧಾರದಲ್ಲಿ ನೇರವಾಗಿ ಗ್ರಾ.ಪಂ. ಗಳಿಗೆ ಹಣ ಬರಲಿದೆ. ಇದರಲ್ಲಿ ಜಿ.ಪಂ. ಹಾಗೂ ತಾ.ಪಂ. ಪಾಲನ್ನು ಸರಕಾರವೇ ಪ್ರತ್ಯೇಕಿಸಲಿದೆ. ದ.ಕ.ದಲ್ಲಿ ಪೂರ್ಣ ಬಳಕೆ ದ.ಕ. ಜಿಲ್ಲೆಯ 223 ಗ್ರಾ.ಪಂ.ಗಳಿಗೆ 15ನೇ ಹಣಕಾಸು ಆಯೋಗದಿಂದ 2021-22ನೇ ಸಾಲಿಗೆ 67.65 ಕೋ.ರೂ.ಗಳ ಅನುದಾನ ನಿಗದಿಪಡಿಸಿ, ಪೂರ್ಣ ಪ್ರಮಾಣದಲ್ಲಿ ಬಿಡುಗಡೆಯನ್ನು ಮಾಡಲಾಗಿದೆ.
ಉಡುಪಿ ಜಿಲ್ಲೆಯ 155 ಗ್ರಾ.ಪಂ. ಗಳಿಗೆ ನಿಗದಿ ಪಡಿಸಿದ್ದ 50.17 ಕೋ. ರೂ.ಗಳಲ್ಲಿ 46.24 ಕೋ.ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಇದರಲ್ಲಿ ದ.ಕ. ಜಿಲ್ಲೆಯಲ್ಲಿ ಹಂಚಿಕೆಯಾಗಿರುವ ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ಕೆ ಮಾಡಿಕೊಳ್ಳಲಾಗಿದೆ. ಉಡುಪಿ ಜಿಲ್ಲೆಗೆ ಇನ್ನು ಅನುದಾನ ಬರಬೇಕಿದೆ. ಹಾಗೆಯೇ ರಾಜ್ಯ ಸರಕಾರ ಶಾಸನಬದ್ಧ ಅನುದಾನದಡಿ ಉಡುಪಿ ಜಿಲ್ಲೆಗೆ 23.45 ಕೋ.ರೂ.ಗೂ ಅಧಿಕ ಹಾಗೂ ದ. ಕ. ಜಿಲ್ಲೆಗೆ 33.77 ಕೋ.ರೂ. ಗೂ ಅಧಿಕ
ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.
ಕ್ರಿಯಾಯೋಜನೆ ಪ್ರತಿ ವರ್ಷವೂ ಗ್ರಾ. ಪಂ.ನಿಂದ ಹಣಕಾಸು ಆಯೋಗದ ಅನುದಾನಕ್ಕೆ ಕ್ರಿಯಾಯೋಜನೆ ಸಿದ್ಧಪಡಿಸಿ ಕಳುಹಿಸಬೇಕು. ಆರ್ಥಿಕ ವರ್ಷದ ಆರಂಭದಲ್ಲಿ ಕ್ರಿಯಾಯೋಜನೆಯ ಅನುಸಾರ ಆಯಾ ಗ್ರಾ.ಪಂ.ಗಳಿಗೆ ನೇರವಾಗಿ ಅನುದಾನ ಬಿಡುಗಡೆ ಮಾಡಲಾಗುತ್ತದೆ. ಸರಕಾರದಿಂದ ಗ್ರಾ.ಪಂ., ತಾ.ಪಂ. ಹಾಗೂ ಜಿ.ಪಂಗಳಿಗೆ ಪ್ರತ್ಯೇಕವಾಗಿ ಅನುದಾನವನ್ನು ಮೀಸಲಿಟ್ಟು ಬಿಡುಗಡೆ ಮಾಡಲಾಗುತ್ತದೆ. ಕ್ರಿಯಾಯೋಜನೆಯಲ್ಲಿ ಸೂಚಿಸಿರುವಂತೆ ಅನುದಾನದ ಬಳಕೆಯನ್ನು ಮಾಡಬೇಕಾಗುತ್ತದೆ.
ಬಳಕೆ ಹೇಗೆ?
ಮೀಸಲಿಟ್ಟಿರುವ ಒಟ್ಟು ಅನುದಾನದ ಶೇ.40ರಷ್ಟು ಮೂಲ ಅನುದಾನದ ರೂಪದಲ್ಲಿ ಶೇ.60ರಷ್ಟು ನಿರ್ಬಂದಿತ ಅನುದಾನವಾಗಿ ಪರಿಗಣಿಸಲಾಗುತ್ತದೆ. ಮೂಲ ಅನುದಾನವನ್ನು ಕಚೇರಿ ವೆಚ್ಚ ಅಥವಾ ಸಂಬಳ ಪಾವತಿ ಇತ್ಯಾದಿಗಳಿಗೆ ಬಳಸಲು ಅವಕಾಶ ಇರುವುದಿಲ್ಲ. ಶೇ.60ರಷ್ಟು ಅನುದಾನವನ್ನು ನೈರ್ಮಲ್ಯತೆಗೆ ಆದ್ಯತೆ ನೀಡಿ, ಬಯಲು ಬಹಿರ್ದೆಸೆ ಮುಕ್ತಗೊಳಿಸುವ ನಿಟ್ಟಿನಲ್ಲಿ ಕ್ರಮ ವಹಿಸಲು ಬಳಕೆ ಮಾಡಲಾಗುತ್ತದೆ. ಕುಡಿಯುವ ನೀರು ಸರಬರಾಜು,
ಮಳೆ ನೀರ ಕೊಯ್ಲು ಮತ್ತು ಮಳೆ ನೀರ ಮರುಬಳಕೆ ಉ ದ್ದೇಶದಿಂದ ಈ ಅನುದಾನ ಬಳಸಲಾಗುತ್ತದೆ. ಶೇ.60ರಷ್ಟು ಅನುದಾನದಲ್ಲಿ ನಿರ್ದಿಷ್ಟ ಪ್ರಮಾಣವನ್ನು ಕಡ್ಡಾಯವಾಗಿ ಕುಡಿಯುವ ನೀರು ಪೂರೈಕೆಗೆ ಮೀಸಲಿಡಲೇಬೇಕು.
ನೇರ ಗ್ರಾ.ಪಂ.ಗೆ
15ನೇ ಹಣಕಾಸು ಆಯೋಗದಿಂದ ನಿಗದಿಪಡಿಸಿರುವ ಅನುದಾನದಲ್ಲಿ ಬಹುಪಾಲು ಬಂದಿದೆ. ಈ ಅನುದಾನವು ನೇರವಾಗಿ ಆಯಾ ಗ್ರಾ.ಪಂ.ಗಳಿಗೆ ತಲುಪಲಿದೆ. ನಿರ್ದಿಷ್ಟ ಮಾರ್ಗಸೂಚಿಯಂತೆ ಆಯಾ ಉದ್ದೇಶಕ್ಕೆ ಗ್ರಾ. ಪಂ.ಗಳಲ್ಲಿ ಬಳಕೆ ಮಾಡಿಕೊಳ್ಳಲಾಗುತ್ತಿದೆ.
– ಪ್ರಸನ್ನ ಎಚ್., ಸಿಇಒ, ಜಿ.ಪಂ. ಉಡುಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
Manipal: ಮಾಹೆಯ ಪ್ರಸನ್ನ ಸ್ಕೂಲ್ ಆಪ್ ಪಬ್ಲಿಕ್ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ
Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ
PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.