ಕರಾವಳಿಯಲ್ಲಿ ಕಡಿಮೆಯಾಗದ ಕೋವಿಡ್: ಉಡುಪಿ ಜಿಲ್ಲೆಯಲ್ಲಿಂದು 28 ಜನರಿಗೆ ಸೋಂಕು ದೃಢ
Team Udayavani, Jul 7, 2020, 6:48 PM IST
ಉಡುಪಿ: ಜಿಲ್ಲೆಯಲ್ಲಿ ಇಂದು 28 ಹೊಸ ಕೋವಿಡ್-19 ಸೋಂಕಿತರು ಪತ್ತೆಯಾಗಿದ್ದಾರೆ. ಇದಿರಂದ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 1390ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಇದುವರೆಗೆ 19773 ಗಂಟಲು ದ್ರವ ಪರೀಕ್ಷೆ ನಡೆಸಿದ್ದು, ಅದರಲ್ಲಿ 1390 ವರದಿ ಪಾಸಿಟಿವ್ ಆಗಿದೆ. 15756 ವರದಿಗಳು ನೆಗೆಟವ್ ಬಂದಿದ್ದು, ಗಮನಾರ್ಹವಾದ ವಿಷಯವೆಂದರೆ ಇನ್ನೂ 2627 ವರದಿಗಳ ಫಲಿತಾಂಶ ಬಾಕಿಇದೆ.
ದಿನದಿಂದ ದಿನಕ್ಕೆ ಜಿಲ್ಲೆಯಲ್ಲಿ ಸೋಂಕಿನ ಪ್ರಕರಣಗಳು ಹೆಚ್ಚುತ್ತಲೇ ಇದೆ ಇದರಿಂದಾಗಿ ಜನರು ಆತಂಕಪಡುವಂತಾಗಿದೆ.
ಜಿಲ್ಲಾಧಿಕಾರಿ ಮನವಿ:
ಕೋವಿಡ್-19 ಸೋಂಕು ಇರುವ ಸಮಯದಲ್ಲಿ ಮಳೆಗಾಲ ಬಂದಿದೆ. ಯಾವುದೇ ಜ್ವರ, ಶೀತ, ಉಸಿರಾಟ ಸಮಸ್ಯೆ ಕಂಡುಬಂದಲ್ಲಿ ಮನೆಯಲ್ಲಿಯೇ ಮದ್ದು ಮಾಡುವ ಕೆಲಸ ಮಾಡಬೇಡಿ. ನಿರ್ಲಕ್ಷ್ಯ ಮಾಡದೇ ನಮ್ಮ ಫೀವರ್ ಕ್ಲಿನಿಕ್ ಗೆ ಭೇಟಿ ನೀಡಿ. ನಾವು ಚಿಕಿತ್ಸೆ ವ್ಯವಸ್ಥೆ ಮಾಡುತ್ತೇವೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಮಂಗಳವಾರ ನಾಗರಿಕರಿಗೆ ಮನವಿ ಮಾಡಿದ್ದಾರೆ.
ಜಿಲ್ಲೆಯಲ್ಲಿ ಯಾರಿಗಾದರೂ ರೋಗ ಲಕ್ಷಣಗಳಿದ್ದರೆ ನಿರ್ಲಕ್ಷ್ಯ ಮಾಡಬೇಡಿ. ಕೂಡಲೇ ಅಧಿಕಾರಿಗಳಿಗೆ ಮಾಹಿತಿ ನೀಡಿ. ಆಸ್ಪತ್ರೆಗೆ ಭೇಟಿ ನೀಡಿ ಪರೀಕ್ಷೆ ಮಾಡಿಸಿಕೊಳ್ಳಿ. ಇಲ್ಲವಾದರೆ ನಾವೇ ಭೇಟಿ ನೀಡಿ ನಿಮ್ಮ ಸ್ವಾಬ್ ಟೆಸ್ಟ್ ಮಾಡಿಸುತ್ತೇವೆ ಎಂದು ಹೇಳಿದರು.
ನಾಗರಿಕರಿಗೆ ಯಾವುದೇ ಆತಂಕ ಬೇಡ. ಗಂಟಲು ದ್ರವ ಪರೀಕ್ಷೆಯನ್ನು ಉಚಿತವಾಗಿ ಮಾಡಿಸಲಾಗುತ್ತದೆ. ಕೋವಿಡ್ ಪಾಸಿಟಿವ್ ಕಂಡುಬಂದರೆ ಅವರ ಚಿಕಿತ್ಸೆಯನ್ನೂ ಉಚಿತವಾಗಿ ಮಾಡಲಾಗುತ್ತದೆ. ರೋಗ ಲಕ್ಷಣವಿದ್ದರೆ ಯಾವುದೇ ಹಿಂಜರಿಕೆಯಿಲ್ಲದೆ ಪರೀಕ್ಷೆ ಮಾಡಿಸಿ. ಜೀವ ರಕ್ಷಣೆಯೇ ನಮ್ಮ ಆದ್ಯತೆ ಎಂದು ಜಿಲ್ಲಾಧಿಕಾರಿಗಳು ನಾಗರಿಕರಿಗೆ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Missile Strike: ಉಕ್ರೇನ್ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು
Belthangady: ಅಡಿಕೆ ವ್ಯಾಪಾರಿಯ ಬ್ಯಾಗಿನಲ್ಲಿದ್ದ 2 ಲಕ್ಷ ರೂ. ಕಳವು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
Mangaluru: ಎಂಜಿನಿಯರಿಂಗ್ ವಿದ್ಯಾರ್ಥಿನಿ ನಾಪತ್ತೆ
Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಆಮಿಷ; 21 ಲ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.