ಶ್ರೀಕೃಷ್ಣ ಮಠದ 32ನೇ ಪರ್ಯಾಯಚಕ್ರ: ಪೂರ್ವಭಾವಿ ಸಭೆ


Team Udayavani, Jul 1, 2017, 3:45 AM IST

300617uk5.jpg

ಉಡುಪಿ: ಶ್ರೀಕೃಷ್ಣ ಮಠದಲ್ಲಿ ಎರಡು ವರ್ಷಗಳಿಗೊಮ್ಮೆ ನಡೆಯುವ ಎಂಟು ಮಠಗಳ ಪರ್ಯಾಯಗಳ 31ನೇ ಚಕ್ರದ ಕೊನೆಯ ಪರ್ಯಾಯ ನಡೆಯುತ್ತಿದ್ದು ಮುಂದಿನ ಜ. 18ರಂದು 32ನೇ ಚಕ್ರ ಶ್ರೀ ಪಲಿಮಾರು ಮಠದ ಪರ್ಯಾಯದೊಂದಿಗೆ ಆರಂಭವಾಗಲಿದೆ. ಇದಕ್ಕೆ ಶುಕ್ರವಾರ ಪಲಿಮಾರು ಮಠದ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಸ್ವಾಗತ ಸಮಿತಿಯನ್ನು ಘೋಷಿಸಲಾಯಿತು. 

ಆಶೀರ್ವಚನ ನೀಡಿದ ಶ್ರೀ ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು, ಪರ್ಯಾಯೋತ್ಸವಕ್ಕೆ ಎಲ್ಲರೂ ಸಹಕಾರ ನೀಡಬೇಕೆಂದರು. 

ಸಚಿವ ಪ್ರಮೋದ್‌ ಮಧ್ವರಾಜ್‌ ಅವರು ಮಾತನಾಡಿ, ರಥಬೀದಿಯ ಸುತ್ತಮುತ್ತ ಒಳಚರಂಡಿ ವ್ಯವಸ್ಥೆಯನ್ನು ಸರಿಪಡಿಸಲಾಗಿದೆ. ಜಿಲ್ಲಾಡಳಿತ ಪೂರ್ಣ ಸಹಕಾರ ನೀಡಲಿದೆ ಎಂದರು.

ಧರ್ಮಸ್ಥಳ ಕ್ಷೇತ್ರದಿಂದ ಪೂರ್ಣ ಸಹಕಾರ ನೀಡುವುದಾಗಿ ಹಷೇìಂದ್ರ ಕುಮಾರ್‌ ಭರವಸೆ ನೀಡಿದರು. ಶಾಸಕ ವಿನಯಕುಮಾರ ಸೊರಕೆ, ಮೂಡಬಿದಿರೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ| ಮೋಹನ ಆಳ್ವ, ಕಟೀಲಿನ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ, ಮಾಜಿ ಶಾಸಕ ಕೆ. ರಘುಪತಿ ಭಟ್‌, ಮಂಗಳೂರು ಶಾರದಾ ವಿದ್ಯಾಲಯದ ಅಧ್ಯಕ್ಷ ಪ್ರೊ| ಎಂ.ಬಿ.ಪುರಾಣಿಕ್‌, ಉದ್ಯಮಿ ಗುರ್ಮೆ ಸುರೇಶ ಶೆಟ್ಟಿ, ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಪ್ರದೀಪ್‌ ಕುಮಾರ್‌ ಕಲ್ಕೂರ, ಉದ್ಯಮಿ ಚೆನ್ನೈಯ ರಾಮಪ್ರಸಾದ ಭಟ್‌, ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಬಾಲಾಜಿ ರಾಘವೇಂದ್ರ ಆಚಾರ್ಯ ಮೊದಲಾದವರು ಮಾತನಾಡಿ ಶುಭ ಕೋರಿದರು.
ಮಠದ ದಿವಾನ್‌ ವೇದವ್ಯಾಸ ತಂತ್ರಿ ಸ್ವಾಗತಿಸಿ ವ್ಯವಸ್ಥಾಪಕ ಬಲರಾಮ ಭಟ್‌ ವಂದಿಸಿದರು. ವಿ| ವಂಶಿ ಕೃಷ್ಣಾಚಾರ್ಯ ಕಾರ್ಯಕ್ರಮ ನಿರ್ವಹಿಸಿದರು.

ಸ್ವಾಗತ ಸಮಿತಿ
ಗೌರವಾಧ್ಯಕ್ಷರು: ಡಾ| ಡಿ. ವೀರೇಂದ್ರ ಹೆಗ್ಗಡೆ, ಪ್ರಧಾನ ಮಾರ್ಗದರ್ಶಕರು: ಪ್ರಮೋದ್‌ ಮಧ್ವರಾಜ್‌, ಡಾ| ಮೋಹನ ಆಳ್ವ, ಶೋಭಾ ಕರಂದ್ಲಾಜೆ, ಜಿ. ಶಂಕರ್‌, ಸಂಚಾಲಕರು: ಹರಿ ಆಸ್ರಣ್ಣ, ಹೆರಂಜೆ ಕೃಷ್ಣ ಭಟ್‌, ರತ್ನಕುಮಾರ್‌, ಭುವನೇಂದ್ರ ಕಿದಿಯೂರು, ಮನೋಹರ ಶೆಟ್ಟಿ, ಚೆನ್ನೈ ರಾಮಪ್ರಸಾದ ಭಟ್‌, ಕಾರ್ಯಾಧ್ಯಕ್ಷರು: ರಾಘವೇಂದ್ರ ಆಚಾರ್ಯ, ಮುಖ್ಯ ಕಾರ್ಯದರ್ಶಿಗಳು: ಲಕ್ಷ್ಮೀನಾರಾಯಣ ರಾವ್‌ ಮಟ್ಟು, ಕೆ.ಎಸ್‌.ಪದ್ಮನಾಭ ಭಟ್‌, ಪ್ರಹ್ಲಾದ್‌ ಪಿ.ಆರ್‌., ಖಜಾಂಚಿ: ರಮೇಶ ರಾವ್‌ ಬೀಡು. ವಿಸ್ತೃತ ಮತ್ತು ಉಪಸಮಿತಿಗಳ ಪಟ್ಟಿಯನ್ನು ಮುಂದೆ ಬಿಡುಗಡೆಗೊಳಿಸಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.
 

ಟಾಪ್ ನ್ಯೂಸ್

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

4

ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್‌

3

Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ

3-vitla

Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.