ಜಿಲ್ಲೆಯಲ್ಲಿ 6 ತಿಂಗಳಲ್ಲಿ 3,474 ಅನರ್ಹ ಪಡಿತರ ಕಾರ್ಡ್ ಪತ್ತೆ !
Team Udayavani, Aug 18, 2021, 3:40 AM IST
ಉಡುಪಿ: ಜಿಲ್ಲೆಯಲ್ಲಿ ಆರ್ಥಿಕವಾಗಿ ಸದೃಢರಾಗಿದ್ದು, ಅಂತ್ಯೋದಯ ಮತ್ತು ಬಿಪಿಎಲ್ ಪಡಿತರ ಚೀಟಿಗಳನ್ನು ಹೊಂದಿರುವ 3,474 ಕುಟುಂಬಗಳನ್ನು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಪತ್ತೆ ಹಚ್ಚಿದೆ. ಅದರಲ್ಲಿ 44 ಸರಕಾರಿ ನೌಕರರು ಬಿಪಿಎಲ್ ಕಾರ್ಡ್ ಹೊಂದಿದ್ದಾರೆ. ಅವರಲ್ಲಿ ಈಗಾಗಲೇ 33 ಕುಟುಂಬದ ಕಾರ್ಡ್‌ಗಳನ್ನು ರದ್ದುಗೊಳಿಸಲಾಗಿದೆ.
ನಿಯಮ ಉಲ್ಲಂಘಿಸಿ ಸರಕಾರದ ಸಬ್ಸಿಡಿ :
ಜಿಲ್ಲೆಯಲ್ಲಿ ಆದಾಯ ತೆರಿಗೆ ಪಾವತಿ ಸುತ್ತಿರುವವರು, ಸರಕಾರಿ ನೌಕರಿ ಮಾಡುತ್ತಿರುವ ಕೆಲವರು ತಮ್ಮ ಹೆಸರನ್ನು ಬಿಟ್ಟು ತಮ್ಮ ಕುಟುಂಬದ ಇತರರ ಹೆಸರಿನಲ್ಲಿ ಸಬ್ಸಿಡಿ ಕಾರ್ಡ್ ಪಡೆದಿದ್ದಾರೆ. ಆದಾಯ ತೆರಿಗೆ ಪಾವತಿಸುವ ಸಹಕಾರ ಸಂಘಗಳ ಖಾಯಂ ಹಾಗೂ ಸ್ವಾಯತ್ತ ಸಂಸ್ಥೆ, ಮಂಡಳಿ, ಆಸ್ಪತ್ರೆಯ ನೌಕರರು, ನ್ಯಾಯವಾದಿಗಳು, ಆಡಿಟರ್‌ಗಳು, ದೊಡ್ಡ ಅಂಗಡಿ, ಹೊಟೇಲ್ ವರ್ತಕರು, ಗುತ್ತಿಗೆದಾರರು, ಕಮಿಷನ್ ಏಜೆಂಟರು, ಮನೆ, ಮಳಿಗೆ, ಕಟ್ಟಡಗಳನ್ನು ಬಾಡಿ ನೀಡಿದವರೂ ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಪಡೆದುಕೊಂಡಿದ್ದಾರೆ ಎನ್ನುವುದನ್ನು ಅಂಕಿ ಅಂಶಗಳು ಪತ್ತೆ ಹಚ್ಚಿವೆ. ಜಿಲ್ಲೆಯಲ್ಲಿ 2021ರ ಫೆಬ್ರವರಿಯಿಂದ ಇಲ್ಲಿಯವರೆಗೆ 3,474 ಕುಟುಂಬಗಳು ಸರಕಾರದ ನಿಯಮ ಉಲ್ಲಂ ಸಿ ಸರಕಾರದ ಸಬ್ಸಿಡಿ ಬಳಸುತ್ತಿರುವುದು ಕಂಡುಬಂದಿದೆ.
ಸ್ವಯಂ ಪ್ರೇರಿತ 75 ಕಾರ್ಡ್ ಹಿಂದಕ್ಕೆ ! :
ಜಿಲ್ಲೆಯಲ್ಲಿನ ಸರಕಾರಿ, ಖಾಸಗಿ ನೌಕರರು, ಆದಾಯ ತೆರಿಗೆ ಪಾವತಿಸುವವರು ಹಾಗೂ ನಿಗದಿ ಪಡಿಸಿದ ಆದಾಯಕ್ಕಿಂತ ಅಧಿಕ ಆದಾಯವಿರುವ 75 ಕುಟುಂಬಗಳು ಸ್ವಯಂ ಪ್ರೇರಿತರಾಗಿ ತಮ್ಮ ಕಾರ್ಡ್‌ಗಳನ್ನು ಇಲಾಖೆಗೆ ಹಿಂದಿರುಗಿಸಿದ್ದಾರೆ. ಉಡುಪಿ ತಾಲೂಕಿನಲ್ಲಿ 26, ಕುಂದಾಪುರ 13, ಬೈಂದೂರು 31, ಕಾರ್ಕಳ 4, ಹೆಬ್ರಿ 1 ಸೇರಿದಂತೆ ಒಟ್ಟು 75 ಕುಟುಂಬಗಳು ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಹೊಂದಿದ್ದರು.
ಐಟಿ ಮತ್ತು ಕಂದಾಯ ಇಲಾಖೆ ನೆರವು :
ಅಂತ್ಯೋದಯ ಮತ್ತು ಬಿಪಿಎಲ್ ಕಾರ್ಡ್ ದಾರರ ಆದಾಯದ ಬಗ್ಗೆ ಮಾಹಿತಿ ಪಡೆಯಲು ಆಹಾರ ಇಲಾಖೆ ಐಟಿ ಮತ್ತು ಕಂದಾಯ ಇಲಾಖೆಯ ನೆರವು ಪಡೆಯುತ್ತಿದೆ. ಆದಾಯ ತೆರಿಗೆ ಇಲಾಖೆ ನೀಡಿದ ಮಾಹಿತಿ ಆಧಾರದಲ್ಲಿ 2,671 ಪಡಿತರ ಚೀಟಿ, 1.20 ಲಕ್ಷ ರೂ.ಗಿಂತ ಹೆಚ್ಚಿನ ಕೌಟುಂಬಿಕ ಆದಾಯ ಹೊಂದಿದ 58 ಕಾರ್ಡ್, ಎಚ್‌ಆರ್‌ಎಂಎಸ್ ಮಾಹಿತಿಯಂತೆ 36 ಕಾರ್ಡ್, ನಾಲ್ಕು ಚಕ್ರದ ಸ್ವಂತ ವಾಹನ ಹೊಂದಿರುವ 610 ಕುಟುಂಬಗಳು ಅಂತ್ಯೋದಯ ಹಾಗೂ ಬಿಪಿಎಲ್ ಪಡಿತರ ಚೀಟಿ ಹೊಂದಿರುವುದು ಪತ್ತೆಯಾಗಿದೆ. ಅವುಗಳನ್ನು ಅನರ್ಹಗೊಳಿಸಲಾಗಿದೆ. ಸಾವಿನ ಮಾಹಿತಿ ನೋಂದಣಿಯ ಆಧಾರದ ಮೇಲೆ ಒಟ್ಟು 13,889 ಮೃತರ ಹೆಸರಿದ್ದ ಪಡಿತರ ಚೀಟಿ ರದ್ದುಪಡಿಸಲಾಗಿದೆ. ಆದಾಯ ತೆರಿಗೆ ಪಾವತಿದಾರ ಕುಟುಂಬದ 2,671 ಬಿಪಿಎಲ್ ಕಾರ್ಡ್‌ಗಳನ್ನು ಎಪಿಎಲ್ ಕಾರ್ಡ್‌ಗಳಾಗಿ ಪರಿವರ್ತಿಸಲಾಗಿದೆ.
ಯಾರೆಲ್ಲ ಅನರ್ಹರು? :
ಕುಟುಂಬದಲ್ಲಿ ಸರಕಾರಿ ಅಥವಾ ಅರೆ ಸರಕಾರಿ ಉದ್ಯೋಗ ಹೊಂದಿರುವರು, ಆದಾಯ ತೆರಿಗೆ ಪಾವತಿಸುವವರು, ಪಡಿತರ ಚೀಟಿ ವಿಳಾಸದಲ್ಲಿ ವಾಸ್ತವ್ಯ ಇಲ್ಲದೆ ಇರುವವರು, ಒಂದು ಮನೆಯಲ್ಲಿ ಒಂದಕ್ಕಿಂತ ಹೆಚ್ಚು ಪಡಿತರ ಚೀಟಿ ಹೊಂದಿರುವವರು, ಮರಣ ಹೊಂದಿದವರ ಮತ್ತು ಕುಟುಂಬದಲ್ಲಿ ವಾಸ್ತವ್ಯವಿಲ್ಲದೆ ಇರುವವರ ಹೆಸರನ್ನು ಪಡಿತರ ಚೀಟಿಯಿಂದ ತೆಗೆಯದೆ ಉಳಿಸಿಕೊಂಡವರು, ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಭೂಮಿ ಹಾಗೂ ನಗರ ಪ್ರದೇಶದ 1,000 ಚದರ ಅಡಿಗಿಂತ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆ ಸ್ವಂತವಾಗಿ ಹೊಂದಿರುವವರು, ಸ್ವಂತ ಉಪಯೋಗಕ್ಕಾಗಿ ಕಾರು, ಲಾರಿ, ಜೆಸಿಬಿ ಇತ್ಯಾದಿ ವಾಹನ ಹೊಂದಿರುವವರು.
ಜಿಲ್ಲೆಯಲ್ಲಿ ರದ್ದುಗೊಂಡ ಬಿಪಿಎಲ್, ಅಂತ್ಯೋದಯ ಕಾರ್ಡ್ ವಿವರ :
ತಾಲೂಕು 4 ಚಕ್ರ ವಾಹನ ಆದಾಯ ತೆರಿಗೆ1.20 ಲ.ರೂ. ವಾ. ಆದಾಯ
ಉಡುಪಿ 78 381 18
ಬ್ರಹ್ಮಾವರ 25 539 0
ಕುಂದಾಪುರ 240 765 0
ಬೈಂದೂರು 88 404 0
ಕಾರ್ಕಳ 126 258 38
ಕಾಪು 45 233 0
ಹೆಬ್ರಿ 1 91 2
ಒಟ್ಟು 610 2,671 58
ಮಕ್ಕಳ ಆದಾಯ ಕುತ್ತು :
ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದಲ್ಲಿ ಮಕ್ಕಳು ಉನ್ನತ ಶಿಕ್ಷಣ ಪಡೆದು ಉದ್ಯೋಗಸ್ಥರಾದ ಬಳಿಕ ಐಟಿ ರಿಟರ್ನ್ಸ್ ಸಲ್ಲಿಸುತ್ತಾರೆ. ಈ ಸಂದರ್ಭದಲ್ಲಿ ಪಡಿತರ ಚೀಟಿಯನ್ನು ಬದಲಾಯಿಸಬೇಕು. ಹೆಚ್ಚಿನವರಿಗೆ ಈ ಬಗ್ಗೆ ಮಾಹಿತಿ ಇಲ್ಲದ ಕಾರಣ ಆದಾಯ ತೆರಿಗೆ ಇಲಾಖೆ ಮಾಹಿತಿ ಪ್ರಕಾರ ಬಿಪಿಎಲ್ ಕಾರ್ಡ್‌ಗಳನ್ನು ಆಹಾರ ಇಲಾಖೆ ಸ್ವಯಂಪ್ರೇರಿತವಾಗಿ ಎಪಿಎಲ್‌ಗೆ ಬದಲಾಯಿಸುತ್ತದೆ. ಅನೇಕ ಜಿಲ್ಲೆಗಳಲ್ಲಿ ಮಗಳನ್ನು ಮದುವೆ ಮಾಡಿಕೊಟ್ಟ ಬಳಿಕವೂ ತವರು ಮನೆಯ ಪಡಿತರ ಚೀಟಿಯಲ್ಲಿ ಹೆಸರು ಉಳಿಸಿಕೊಳ್ಳಲಾಗಿದೆ. ಮಗಳು ಅಳಿಯ ಜಂಟಿಯಾಗಿ ಯಾವುದೇ ಆಸ್ತಿ ಖರೀದಿಸಿದರೂ ಆಧಾರ್ ಕಾರ್ಡ್ ಆಧಾರದಲ್ಲಿ ತವರು ಮನೆಯ ಬಿಪಿಎಲ್ ಕಾರ್ಡ್ ರದ್ದಾಗುತ್ತಿದೆ.
ವಾರ್ಷಿಕ ಆದಾಯ 1.20 ಲ.ರೂ. ಹೆಚ್ಚಿದ್ದರೆ ಅಂಥವರು ಬಿಪಿಎಲ್ ಕಾರ್ಡ್ ಸರೆಂಡರ್ ಮಾಡಬೇಕು. ನಿಗದಿತ ಸಂಬಳ ಪಡೆಯುವ ಖಾಸಗಿ ನೌಕರರಿಗೂ ಅನ್ವಯವಾಗುತ್ತದೆ. ಜಿಲ್ಲೆಯಲ್ಲಿ ಕಳೆದ ಆರು ತಿಂಗಳಿನಲ್ಲಿ 3,474 ಅನರ್ಹ ಪಡಿತರ ಚೀಟಿಯನ್ನು ರದ್ದು ಪಡಿಸಲಾಗಿದೆ. 13,889 ಮಂದಿ ಮೃತ ಸದಸ್ಯರ ಹೆಸರು ಕಾರ್ಡ್‌ನಿಂದ ತೆಗೆಯಲಾಗಿದೆ. –ಮಹಮ್ಮದ್ ಇಸಾಕ್‌ಉಪನಿರ್ದೇಶಕ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಉಡುಪಿ
-ತೃಪ್ತಿ ಕುಮ್ರಗೋಡು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.