ಜಿಲ್ಲೆಯ 4 ಸರಕಾರಿ ಐಟಿಐಗಳಿಗೆ ಟಾಟಾ ಬಲ

ತಲಾ 30 ಕೋ.ರೂ. ವೆಚ್ಚದಲ್ಲಿ ಕಾರ್ಯಾಗಾರ

Team Udayavani, May 10, 2022, 10:52 AM IST

iti

ಉಡುಪಿ: ಬಡ, ಮಧ್ಯಮ ವರ್ಗದ ವಿದ್ಯಾರ್ಥಿಗಳ ಪಾಲಿಗೆ ಕೌಶಲ, ಉದ್ಯೋಗಾಧಾರಿತ ತರಬೇತಿ ನೀಡುವ ಹೆಗ್ಗಳಿಕೆಗೆ ಪಾತ್ರವಾಗಿರುವ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ (ಐಟಿಐ) ಉನ್ನತೀಕರಣಕ್ಕೆ ಟಾಟಾ ಟೆಕ್ನಾಲಜೀಸ್‌ ಮತ್ತಷ್ಟು ಬಲ ತುಂಬಲಿದೆ.

ಮೂಲಸೌಕರ್ಯ ಹಾಗೂ ಸಿಬಂದಿ ಕೊರತೆ ಸಹಿತವಾಗಿ ಹಲವು ಸಮಸ್ಯೆಗಳಿಂದ ನಲುಗಿ ಹೋಗಿದ್ದ ಐಟಿಐ ಕೇಂದ್ರಗಳಿಗೆ ನಿರ್ವಹಣೆ ಹಾಗೂ ಮುನ್ನಡೆಸಿಕೊಂಡು ಹೋಗುವ ಚಿಂತೆ ಬಹಳ ವರ್ಷಗಳಿಂದ ಕಾಡುತ್ತಿತ್ತು. ಈಗ ಟಾಟಾ ಟೆಕ್ನಾಲಜೀಸ್‌ ಸಹಭಾಗಿತ್ವದಲ್ಲಿ ಹೊಸ ಉಪಕರಣಗಳು, ಆಧುನಿಕ ತಂತ್ರಜ್ಞಾನಗಳು ಐಟಿಐಗೆ ಹೊಸ ವಿನ್ಯಾಸ ನೀಡಲಿದೆ.

ಉಡುಪಿ ಮಣಿಪಾಲ ಪ್ರಗತಿ ನಗರ, ಬೈಂದೂರು, ಪೆರ್ಡೂರು, ಕಾರ್ಕಳದಲ್ಲಿ ಸರಕಾರಿ ಐಟಿಐ ತರಬೇತಿ ಸಂಸ್ಥೆಗಳಲ್ಲಿ ಟಾಟಾ ಟೆಕ್ನಾಲಜೀಸ್‌ ತಲಾ 30 ಕೋ. ರೂ. ವಿನಿಯೋಗಿಸಿ ಅತ್ಯಾಧುನಿಕ ತಂತ್ರಜ್ಞಾನ ಗಳನ್ನೊಳಗೊಂಡ ವರ್ಕ್‌ಶಾಪ್‌ ನಿರ್ಮಿಸಲಾಗಿದೆ.

ರಾಜ್ಯದ ಕೈಗಾರಿಕಾ ತರಬೇತಿ ಸಂಸ್ಥೆಗಳ ಗುಣಮಟ್ಟ ಹೆಚ್ಚಿಸುವುದು ಮತ್ತು ಈ ಮೂಲಕ ರಾಜ್ಯದ ಯುವಕರಿಗೆ ಉದ್ಯೋಗಾವಕಾಶ ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ 2020ರ ನ. 6ರಂದು ಪುಣೆಯ ಟಾಟಾ ಟೆಕ್ನಾಲಜೀಸ್‌ ಲಿ. ಕಂಪೆನಿಯೊಂದಿಗೆ ಮಹತ್ವದ ಒಪ್ಪಂದ ಮಾಡಿಕೊಂಡಿತ್ತು. ಅದರಂತೆ ರಾಜ್ಯದ 150 ಸರಕಾರಿ ಐಟಿಐ ಕಾಲೇಜುಗಳು ಮೇಲ್ದರ್ಜೆಗೇರಿದ್ದು, ಉಡುಪಿ ಸಹಿತ ಜಿಲ್ಲೆಯ 4 ಐಟಿಐ ಕಾಲೇಜುಗಳ ವರ್ಕ್‌ಶಾಪ್‌ ಕೆಲಸಗಳು ಪೂರ್ಣಗೊಂಡು ಮೊದಲ ಬ್ಯಾಚ್‌ ಆರಂಭಿಸಿದೆ.

ಕೋರ್ಸ್‌ ವಿವರ

34 ಅಲ್ಪಾವಧಿ ಕೋರ್ಸ್‌, 6 ದೀರ್ಘಾವಧಿ ಕೋರ್ಸ್‌ಗಳನ್ನು ಇಲ್ಲಿ ಕಲಿಸಲಾಗುತ್ತದೆ. ಈಗಾಗಲೇ 18 ವಿದ್ಯಾರ್ಥಿಗಳು ಉಡುಪಿ ಅಲೆವೂರಿನ ಪ್ರಗತಿ ನಗರದಲ್ಲಿ ತಾಂತ್ರಿಕ ಶಿಕ್ಷಣ ಪಡೆಯುತ್ತಿದ್ದಾರೆ. ಟಾಟಾ ಸಂಸ್ಥೆಯಿಂದ ಒಂದು ಕಾಲೇಜಿಗೆ ಇಬ್ಬರು ನುರಿತ ಶಿಕ್ಷಕರನ್ನು ನೇಮಿಸುತ್ತಾರೆ. ಎರಡು ವರ್ಷ ಕಾಲಾವಧಿಯಲ್ಲಿ ಅವರು ಶಿಕ್ಷಕರಿಗೆ ಪಾಠ, ಐಟಿಐ ಕಾಲೇಜು ಉಪನ್ಯಾಸಕರಿಗೂ ಮಾರ್ಗದರ್ಶನ ನೀಡಿ ತರಬೇತುಗೊಳಿಸುತ್ತಾರೆ.

ಸುಸಜ್ಜಿತ ವರ್ಕ್‌ಶಾಪ್‌

ಜಿಲ್ಲೆಯಲ್ಲಿ 4 ಐಟಿಐಗಳಲ್ಲಿ ಟಾಟಾ ಸಂಸ್ಥೆ ಅತ್ಯಾಧುನಿಕ ವರ್ಕ್‌ ಶಾಪ್‌ ನಿರ್ಮಿಸಿದೆ. ಮೊದಲ ಬ್ಯಾಚ್‌ ಆರಂಭಗೊಂಡು ತರಬೇತಿ ನಡೆಯುತ್ತಿದೆ. ಎಸೆಸೆಲ್ಸಿ ಫ‌ಲಿತಾಂಶ ಬರುತ್ತಿದ್ದಂತೆ ಆಸಕ್ತ ವಿದ್ಯಾರ್ಥಿಗಳು ಆಯಾ ಐಟಿಐಗಳನ್ನು ಸಂಪರ್ಕಿಸಬಹುದು. – ಜಗದೀಶ್‌, ಸಹಾಯಕ ನಿರ್ದೇಶಕ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಉಡುಪಿ

ಅವಿನ್‌ ಶೆಟ್ಟಿ

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Udupi-judicial2

Udupi: ʼನ್ಯಾಯಾಂಗದಲ್ಲಿ ತಂತ್ರಜ್ಞಾನ ಬಳಕೆಯಿಂದ ಪಾರದರ್ಶಕತೆ, ಸಮಯ, ಹಣವೂ ಉಳಿತಾಯʼ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.