National Lok Adalat: ಒಂದೇ ದಿನ 44,093 ಪ್ರಕರಣ ಇತ್ಯರ್ಥ
Team Udayavani, Sep 15, 2024, 6:26 AM IST
ಉಡುಪಿ: ಉಡುಪಿ, ಕುಂದಾಪುರ ಹಾಗೂ ಕಾರ್ಕಳದ ವಿವಿಧ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಅನ್ನು ಶನಿವಾರ ಆಯೋಜಿಸಲಾಯಿತು.
ಒಟ್ಟು 44,093 ಪ್ರಕರಣಗಳನ್ನು (ರಾಜಿಯಾಗಬಲ್ಲ ಅಪರಾಧಿಕ ಪ್ರಕರಣ -32, ಚಿಕ್ಕು ಅಮಾನ್ಯ ಪ್ರಕರಣ-273, ಬ್ಯಾಂಕ್ / ಹಣ ವಸೂಲಾತಿ ಪ್ರಕರಣ-11, ಎಂ.ವಿ.ಸಿ. ಪ್ರಕರಣ-86, ವೈವಾಹಿಕ ಪ್ರಕರಣ-3, ಸಿವಿಲ್ ಪ್ರಕರಣ-151, ಇತರ ಕ್ರಿಮಿನಲ್ ಪ್ರಕರಣ-2,459 ಹಾಗೂ ವ್ಯಾಜ್ಯ ಪೂರ್ವ ದಾವೆ-41,078) ರಾಜಿ ಮುಖಾಂತರ ಇತ್ಯರ್ಥಪಡಿಸಿ 27,46,21,144 ರೂ. ಪರಿಹಾರದ ಮೊತ್ತವನ್ನು ಘೋಷಿಸಲಾಯಿತು.
ನ್ಯಾಯಾಂಗ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಉಡುಪಿ, ಕುಂದಾಪುರ ಹಾಗೂ ಕಾರ್ಕಳ, ಅಭಿಯೋಗ ಮತ್ತು ಸರಕಾರಿ ವ್ಯಾಜ್ಯಗಳ ಇಲಾಖೆ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ವಿಮಾ ಕಂಪೆನಿಗಳು, ಬ್ಯಾಂಕ್, ಕಕ್ಷಿಗಾರರು ಹಾಗೂ ಇತರ ಸರಕಾರಿ ಇಲಾಖೆಯ ಸಹಕಾರದೊಂದಿಗೆ ಲೋಕ್ ಅದಾಲತ್ ಅನ್ನು ಯಶಸ್ವಿಗೊಳಿಸಲಾಯಿತು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಕಿರಣ್ ಎಸ್.ಗಂಗಣ್ಣನವರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ
Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ
Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ
ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ
Udupi: ಗೀತಾರ್ಥ ಚಿಂತನೆ-84: ಮಧುವಾದದ್ದನ್ನು ನಾಶಪಡಿಸುವವ ಮಧುಸೂದನ
MUST WATCH
ಹೊಸ ಸೇರ್ಪಡೆ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.