ಕಡಲ್ಕೊರೆತ ತಡೆಗೆ 3 ಕರಾವಳಿ ಜಿಲ್ಲೆಗಳಿಗೆ ತಲಾ 5 ಕೋಟಿ ರೂ. ಅನುದಾನ: ಹೆಬ್ಬಾಳ್ಕರ್
ದರ್ಶನ್ ಪ್ರಕರಣ.. ಯಾರ ಒತ್ತಡಕ್ಕೂ ಮಣಿಯುವುದಿಲ್ಲ, ಬಾಗುವುದೂ ಇಲ್ಲ..
Team Udayavani, Jun 12, 2024, 3:32 PM IST
ಉಡುಪಿ: ಕಡಲ್ಕೊರೆತ ತಡೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ತಲಾ 5 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬುಧವಾರ ತಿಳಿಸಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ‘ ಕಡಲ್ಕೊರೆತ ವಿಚಾರಕ್ಕೆ ಸಂಬಂಧಿಸಿ ಹಿಂದಿನ 10 ಕೋಟಿ ರೂ. ಬಿಲ್ ಬಾಕಿ ಇದೆ ಅದನ್ನೂ ಬಿಡುಗಡೆ ಮಾಡಲಾಗುತ್ತದೆ. ಕಡಲ್ಕೊರೆತ ಶಾಶ್ವತ ಪರಿಹಾರಕ್ಕೆ ಡಿಪಿಆರ್ ಸಿದ್ಧಪಡಿಸಲಾಗಿದ್ದು, ಇದಕ್ಕೆ ರಾಜ್ಯ ಸರಕಾರದಿಂದ ಮಾತ್ರ ಪರಿಹಾರ ನೀಡುವುದು ಸಾಧ್ಯವಿಲ್ಲ.ಕೇಂದ್ರ ಮತ್ತು ರಾಜ್ಯ ಸರಕಾರ’ ಸಮನ್ವಯತೆಯೊಂದಿಗೆ ಕೆಲಸ ಮಾಡಬೇಕಾಗಿದೆ’ ಎಂದರು.
ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಬಂಧನ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿ ‘ಕಾನೂನಿನ ಮುಂದೆ ಎಲ್ಲರೂ ಸಮಾನರು, ರಾಷ್ಟ್ರಪತಿಯಾಗಲಿ, ಸ್ಟಾರ್ ಆಗಲಿ, ಕೂಲಿ ಕಾರ್ಮಿಕನೇ ಆಗಲಿ. ಸರಕಾರ ಯಾರ ಒತ್ತಡಕ್ಕೂ ಮಣಿಯುವುದಿಲ್ಲ, ಬಾಗುವುದೂ ಇಲ್ಲ” ಎಂದರು.
‘ಉಡುಪಿ ಜಿಲ್ಲೆಯಲ್ಲಿ ಬಸ್ ಕೊರತೆ ವಿಚಾರ ಗಮನಕ್ಕೆ ಬಂದಿದ್ದು, ಕೊರತೆ ನೀಗಿಸಲು ಸಾರಿಗೆ ಸಚಿವರೊಂದಿಗೆ ಮಾತುಕತೆ ನಡೆಸಲಾಗಿದೆ. 3 ಸಾವಿರ ಸಾವಿರ ಬಸ್ ಗಳ ಖರೀದಿ ಆಗಿದ್ದು ಅವುಗಳ ಪೈಕಿ ಕೆಲವನ್ನು ಇಲ್ಲಿಗೆ ತರುವ ಪ್ರಯತ್ನ ಮಾಡುತ್ತೇವೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
R. Ashok ವಾಗ್ಧಾಳಿ; ದೋಚುವ ಸರಕಾರಕ್ಕೆ ಜನ ಕಪಾಳಮೋಕ್ಷ ಮಾಡಬೇಕು
Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್
Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ
Kiran Pahal: ವನಿತೆಯರ 400 ಮೀ.; ಕಿರಣ್ ಪಹಲ್ ಒಲಿಂಪಿಕ್ಸ್ ಗೆ ಅರ್ಹತೆ
MLA Harish Gowda: ನನಗೆ ಯಾರೂ ಹನಿಟ್ರ್ಯಾಪ್ ಮಾಡಲು ಸಾಧ್ಯವಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.