“ಶೇ.80 ಮಂದಿಗೆ ಉಚಿತ ಕಾನೂನು ನೆರವು ಅವಕಾಶ’
Team Udayavani, Mar 1, 2019, 1:00 AM IST
ಉಡುಪಿ: ದೇಶದ ಶೇ.80ರಷ್ಟು ಮಂದಿ ಕಾನೂನು ಸೇವೆಗಳ ಪ್ರಾಧಿಕಾರದ ಮೂಲಕ ಉಚಿತ ಕಾನೂನು ನೆರವು ಪಡೆಯುವ ಅವಕಾಶ ಹೊಂದಿದ್ದಾರೆ ಎಂದು ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸಿ.ಎಂ.ಜೋಷಿ ಹೇಳಿದ್ದಾರೆ.
ಗುರುವಾರ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಅಭಿಯೋಗ ಇಲಾಖೆ, ಪೊಲೀಸ್ ಇಲಾಖೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಉಡುಪಿ ಕ್ರಿಶ್ಚಿಯನ್ ಪ್ರೌಢಶಾಲೆ ಆವರಣದಲ್ಲಿ ಕಾನೂನು ಸಾಕ್ಷರತಾ ರಥಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಜ್ಞಾನ, ನೆರವು ಉದ್ದೇಶ
ಕಾನೂನು ಜ್ಞಾನ ಪ್ರಸಾರ ಮಾಡುವುದು, ಕಾನೂನು ಸಹಾಯ ನೀಡುವುದು, ಕಾನೂನು ಸಾಕ್ಷರತಾ ರಥದ (ಸಂಚಾರಿ ಜನತಾ ನ್ಯಾಯಾಲಯ ಮತ್ತು ಕಾನೂನು ಸಾಕ್ಷರತಾ ರಥ) ಮುಖ್ಯ ಉದ್ದೇಶಗಳು. ಇದು ಉಡುಪಿ ಜಿಲ್ಲೆಯಲ್ಲಿ ಮಾ. 1 ಮತ್ತು 2ರಂದು ಉಡುಪಿ ಜಿಲ್ಲೆಯಲ್ಲಿ ಸಂಚರಿಸಲಿದೆ. ಕಾನೂನು ತಿಳಿವಳಿಕೆ ಇದ್ದಾಗ,
ಕಾನೂನಿನ ಚೌಕಟ್ಟಿನಲ್ಲಿಯೇ ಬದುಕಿದಾಗ ಮಾತ್ರ ಪ್ರಜ್ಞಾವಂತ ಸಮಾಜ ನಿರ್ಮಾಣ ವಾಗುತ್ತದೆ. ವಿದ್ಯಾರ್ಥಿಗಳು ಕೂಡ ಪ್ರಜೆ ಗಳೇ. ಅವರಿಗೆ ಕೆಲವು ಹಕ್ಕುಗಳಿರುತ್ತವೆ. ಕಾನೂನಿನ ತಿಳಿವಳಿಕೆ ಇರಬೇಕು. ಮಕ್ಕಳ ಮೇಲಿನ ದೌರ್ಜನ್ಯ, ಮಾದಕ ವ್ಯಸನದ ಪಿಡುಗು, ಸೈಬರ್ ಕ್ರೈಂ ಮೊದಲಾದವುಗಳ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಬೇಕು ಎಂದು ನ್ಯಾಯಾಧೀಶರು ಹೇಳಿದರು.
ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಮುಖ್ಯ ನ್ಯಾಯಿಕ ದಂಡಾಧಿಕಾರಿ ವಿವೇಕಾನಂದ ಎಸ್.ಪಂಡಿತ್, ಎಎಸ್‌ಪಿ ಕುಮಾರಚಂದ್ರ, ಉಡುಪಿ ವಕೀಲರ ಸಂಘದ ಅಧ್ಯಕ್ಷ ಎಚ್.ರತ್ನಾಕರ ಶೆಟ್ಟಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಕ್ರಿಶ್ಚಿಯನ್ ಹೈಸ್ಕೂಲ್‌ನ ಮುಖ್ಯ ಶಿಕ್ಷಕಿ ಹೆಲೆನ್ ವಿ.ಸಾಲಿನ್ಸ್ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಸಹಾಯಕ ಸರಕಾರಿ ಅಭಿಯೋಜಿಕ ಜ್ಯೋತಿ ಪಿ.ನಾಯಕ್ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಪೋಕೊÕà ಕಾಯಿದೆ ಕುರಿತು ಮಾಹಿತಿ ನೀಡಿದರು. ಶಿಕ್ಷಣ ಸಂಯೋಜಕ ಚಂದ್ರನಾಯ್ಕ ಕಾರ್ಯಕ್ರಮ ನಿರ್ವಹಿಸಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.