ಉಡುಪಿ: 81 ಡೆಂಗ್ಯೂ ಪ್ರಕರಣ ಪತ್ತೆ; ಮುನ್ನೆಚ್ಚರಿಕೆ
Team Udayavani, Jul 23, 2019, 5:35 AM IST
ಉಡುಪಿ: ಡೆಂಗ್ಯೂ ಜ್ವರಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ಸೂಕ್ತ ಕೈಗೊಂಡಿದ್ದು, ಜುಲೈವರೆಗೆ ಒಟ್ಟು 81 ಡೆಂಗ್ಯೂ ಪ್ರಕರಣಗಳು ದಾಖಲಾಗಿದೆ. ಕಳೆದ ವರ್ಷ ಇದೇ ಸಂದರ್ಭ 124 ಪ್ರಕರಣ ವರದಿಯಾಗಿದ್ದವು.
ಆರೋಗ್ಯ ಇಲಾಖೆ ಮತ್ತು ಸ್ಥಳೀಯ ಸಂಸ್ಥೆಗಳ ಸಹಾಯದಿಂದ ಡೆಂಗ್ಯೂ ಪ್ರಕರಣ ಹೆಚ್ಚಾಗಿ ಕಂಡುಬಂದ ಪ್ರದೇಶದಲ್ಲಿ ಫಾಗಿಂಗ್ ಮಾಡಲಾಗಿದೆ. ಡೆಂಗ್ಯೂ ಉಂಟು ಮಾಡಬಲ್ಲ ಸೊಳ್ಳೆಗಳ ಉತ್ಪತ್ತಿ ಪ್ರದೇಶ ಪತ್ತೆ ಮಾಡಿ ನಾಶ ಮಾಡಲಾಗುತ್ತಿದೆ.
ಸ್ವತ್ಛತಾ ಕಾರ್ಯ ಪ್ರಗತಿ
ಉಡುಪಿ ನಗರ ಸಭೆ ವ್ಯಾಪ್ತಿಯ 35 ವಾರ್ಡ್ ಗಳಲ್ಲಿ ಚರಂಡಿ ಮತ್ತು ಕೆಸರು ನೀರು ನಿಲ್ಲುವ ಪ್ರದೇಶಗಳನ್ನು ಸ್ವತ್ಛಗೊಳಿಸಲಾಗುತ್ತಿದೆ. ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿ ಕಂಡು ಬರುವ ಗ್ರಾಮೀಣ ಮತ್ತು ಕೊಳೆಗೇರಿ ಪ್ರದೇಶಗಳನ್ನು ಪತ್ತೆ ಮಾಡಿ ಗಮನ ಹರಿಸಲಾಗುತ್ತಿದೆ.
ಜನಜಾಗೃತಿ
ನಗರ ವ್ಯಾಪ್ತಿಯಲ್ಲಿ ಆರೋಗ್ಯ ಕಾರ್ಯಕರ್ತರು ಭೇಟಿ ನೀಡಿ ಡೆಂಗ್ಯೂ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದು ನಗರಸಭೆ ಪೌರಾಯುಕ್ತ ಆನಂದ ಕಲ್ಲೋಳಿಕರ್ ತಿಳಿಸಿದ್ದಾರೆ.
ಸಾಮಾನ್ಯ ಜ್ವರಕ್ಕೂ ರಕ್ತ ಪರೀಕ್ಷೆ ಸರಕಾರಿ ಆರೋಗ್ಯ ಕೇಂದ್ರದಲ್ಲಿ ಜ್ವರವೆಂದು ದಾಖಲಾಗುವವರಿಗೆ ಮಲೇರಿಯಾ ಮತ್ತು ಡೆಂಗ್ಯೂ ರಕ್ತ ಪರೀಕ್ಷೆ ನಡೆಸಲಾಗುತ್ತಿದೆ. ಆರೋಗ್ಯ ಸಿಬಂದಿ ಮನೆ ಮನೆ ತೆರಳಿ ಜ್ವರದಿಂದ ಬಳಲುತ್ತಿರುವವರ ರಕ್ತವನ್ನು ತಪಾಸಣೆಗೆ ಒಳಪಡಿಸುತ್ತಿದ್ದಾರೆ. ಆಶಾ ಕಾರ್ಯಕರ್ತರು ಜನರಿಗೆ ಡೆಂಗ್ಯೂ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ಎಂ.ಜಿ. ರಾಮ ತಿಳಿಸಿದ್ದಾರೆ.
ಕ್ಷಿಪ್ರ ಕಾರ್ಯಪಡೆ ರಚನೆ
ಜಿಲ್ಲಾ ಆರೋಗ್ಯಾಧಿಕಾರಿ ಮತ್ತು ಜಿಲ್ಲಾ ರೋಗಗಳ ಕಣ್ಗಾವಲು ಅಧಿಕಾರಿಗಳ ನೇತೃತ್ವದಲ್ಲಿ ಕ್ಷಿಪ್ರ ಕಾರ್ಯಪಡೆ ರಚಿಸಲಾಗಿದೆ. ಆ ಮೂಲಕ ಡೆಂಗ್ಯೂ ಪ್ರಕರಣಗಳು ಹೆಚ್ಚಾಗದಂತೆ ನಿಗವಹಿಸಲಾಗುತ್ತಿದೆ. ನಿತ್ಯ ಡೆಂಗ್ಯೂ ಪ್ರಕರಣಗಳ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದೇನೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
TV Actor; 35 ನೇ ವಯಸ್ಸಿನಲ್ಲೆ ಜನಪ್ರಿಯ ಕಿರುತೆರೆ ನಟ ನಿತಿನ್ ಚೌಹಾಣ್ ನಿಧ*ನ
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್‌ಬುಕ್ ಬಳಸುವಂತಿಲ್ಲ!
Deve Gowda; ನನಗೀಗ ವಯಸ್ಸು 92.. ಮೊಮ್ಮಗ ಗೆದ್ದ ನಂತರ ಮನೆಯಲ್ಲಿ ಮಲಗುವುದಿಲ್ಲ..
Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್ – ಅಥಿಯಾ ಶೆಟ್ಟಿ
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.