ಅರೆಹೊಳೆ: ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ; ಓರ್ವ ಸಾವು
Team Udayavani, Jul 5, 2019, 9:24 AM IST
![arehole](https://www.udayavani.com/wp-content/uploads/2019/07/arehole-620x364.jpg)
![arehole](https://www.udayavani.com/wp-content/uploads/2019/07/arehole-620x364.jpg)
ಬೈಂದೂರು/ಕುಂದಾಪುರ: ಜಾನುವಾರಿಗೆ ಢಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕೊಂದು ರಸ್ತೆ ಸಮೀಪದ ವಿದ್ಯುತ್ ಕಂಬಕ್ಕೆ ಗುದ್ದಿದ ಪರಿಣಾಮ ಹಿಂಬದಿ ಸವಾರ ಸಾವನ್ನಪ್ಪಿದ ಘಟನೆ ನಾವುಂದ ಗ್ರಾಮದ ಅರೆಹೊಳೆಯಲ್ಲಿ ಬುಧವಾರ ತಡರಾತ್ರಿ ಸಂಭವಿಸಿದೆ.
ಮೃತಪಟ್ಟವನನ್ನು ಮೂಲತಃ ರಾಜಸ್ಥಾನದವರಾಗಿದ್ದು, ಪ್ರಸ್ತುತ ಇಲ್ಲಿ ಕಾರ್ಮಿಕರಾಗಿದ್ದ ಗೋಪಾಲ (32) ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡಿದ್ದ ಆತನನ್ನು ಸ್ಥಳೀಯರು ತತ್‌ಕ್ಷಣ ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದರು. ಸವಾರನಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಆತ ಅಪಾಯದಿಂದ ಪಾರಾಗಿದ್ದಾನೆ. ಬೈಂದೂರು ಆರಕ್ಷಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳಕ್ಕೆ ಬೈಂದೂರು ಎಸ್‌ಐ ತಿಮ್ಮೇಶ್ ಬಿ.ಎಸ್. ಹಾಗೂ ಸಿಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.