ಗಂಗೊಳ್ಳಿ- ಕೋಡಿ ಅಳಿವೆ ಪ್ರದೇಶದಲ್ಲಿ ತಡೆಯಾದ ಮರಳು ದಿಬ್ಬ

ಮೀನುಗಾರಿಕಾ ದೋಣಿ, ಬೋಟುಗಳ ಸಂಚಾರಕ್ಕೆ ಅಡಚಣೆ ; ಮುಂಗಾರಿಗೂ ಮುನ್ನ ಹೂಳೆತ್ತಲು ಆಗ್ರಹ

Team Udayavani, May 3, 2019, 6:00 AM IST

3004KDPP1

ಪಂಚಗಂಗಾವಳಿ ಹೊಳೆಯಲ್ಲಿ ಸಂಗ್ರಹವಾಗಿರುವ ಮರಳು ದಿಬ್ಬ.

ಗಂಗೊಳ್ಳಿ: ಗಂಗೊಳ್ಳಿ – ಕೋಡಿ ಅಳಿವೆ ಪ್ರದೇಶದಲ್ಲಿ ನಡೆದ ಬ್ರೇಕ್‌ ವಾಟರ್‌ ಕಾಮಗಾರಿ ವೇಳೆ ರಾಶಿ ಹಾಕಲಾದ ಮರಳನ್ನು ಅಲ್ಲಿಂದ ತೆಗೆಯದೇ ಹಾಗೇ ಬಿಟ್ಟಿದ್ದರಿಂದ ಈಗ ಪಂಚಗಂಗಾವಳಿ ಹೊಳೆಯಲ್ಲಿ ಮರಳು ದಿಬ್ಬ ಸಂಗ್ರಹವಾಗಿದೆ. ಇದರಿಂದ ಗಂಗೊಳ್ಳಿ ಬಂದರು ಹಾಗೂ ಕೋಡಿಯಿಂದ ಮೀನುಗಾರಿಕೆಗೆ ತೆರಳುವ ದೋಣಿ ಹಾಗೂ ಬೋಟುಗಳ ಸಂಚಾರಕ್ಕೆ ಅಡಚಣೆ ಉಂಟಾಗಿದೆ.

ಕೋಡಿ – ಗಂಗೊಳ್ಳಿ ನಡುವಿನ ಪಂಚಗಂಗಾವಳಿ ಹೊಳೆಯಲ್ಲಿರುವ ಮರಳು ನೇರವಾಗಿ ಗಂಗೊಳ್ಳಿ ಅಳಿವೆ ಬಾಗಿಲನ್ನು ಸೇರಿಕೊಳ್ಳುವುದರ ಜತೆಗೆ ನದಿಯಲ್ಲಿ ಅಲ್ಲಲ್ಲಿ ಶೇಖರಣೆಯಾಗುತ್ತಾ ದಿಬ್ಬಗಳಾಗಿವೆ. ಇದು ನದಿ ಪಾತ್ರವನ್ನೇ ಬದಲಿಸಿ ಬಿಡುವ ಆತಂಕ ಕೂಡ ಎದುರಾಗಿದೆ.

ಏನು ಸಮಸ್ಯೆ?
ಸಮುದ್ರದ ಅಲೆಗಳ ಇಳಿತದ ಸಮಯದಲ್ಲಿ ಬೋಟುಗಳು ಸಂಚರಿಸುವುದು ಕಷ್ಟವಾಗುತ್ತಿದೆ. ಭರತದ ಸಮಯ ನೋಡಿ ಬೋಟುಗಳು ಬಂದರು ಒಳಗೆ ಬರುವುದು ಮತ್ತು ಹೊರಗೆ ಹೋಗಬೇಕಾಗಿದೆ. ಇದರಿಂದ ಮೀನುಗಾರರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಅದಲ್ಲದೆ ಮುಂದಿನ ಮುಂಗಾರಿನ ಬಳಿಕ ಆರಂಭವಾಗುವ ಮೀನುಗಾರಿಕಾ ಋತುವಿನಲ್ಲಿ ಬೋಟುಗಳು ಹಾಗೂ ದೋಣಿಗಳ ಸಂಚಾರಕ್ಕೆ ಅಡ್ಡಿಯಾಗುವ ಸಾಧ್ಯತೆಗಳೂ ಇವೆ.

ಶೀಘ್ರ ಹೂಳೆತ್ತಬೇಕಾಗಿದೆ
ಗಂಗೊಳ್ಳಿ ಹಾಗೂ ಕೋಡಿ ಅಳಿವೆ ಪ್ರದೇಶದಲ್ಲಿ ಅನುಷ್ಠಾನಗೊಂಡ ಬ್ರೇಕ್‌ ವಾಟರ್‌ ಕಾಮಗಾರಿಯಲ್ಲಿ ಅಳಿವೆ ಹಾಗೂ ಜೆಟ್ಟಿ ಪ್ರದೇಶದಲ್ಲಿ ಹೂಳೆತ್ತುವ ಬಗ್ಗೆ ಅನುದಾನ ಮೀಸಲಿರಿಸಲಾಗಿದೆ. ಆದರೆ ಈವರೆಗೆ ಹೂಳೆತ್ತುವ ಕಾಮಗಾರಿ ಕೈಗೆತ್ತಿಕೊಂಡಿಲ್ಲ. ಇನ್ನೇನು 1 ತಿಂಗಳಿನಲ್ಲಿ ಮಳೆಗಾಲ ಆರಂಭವಾಗಲಿದ್ದು, ಹೂಳೆತ್ತುವ ಕಾಮಗಾರಿಯನ್ನು ಅದಕ್ಕೂ ಮೊದಲು ಅಂದರೆ ಶೀಘ್ರ ಕೈಗೆತ್ತಿಕೊಳ್ಳಬೇಕಾದ ಅವಶ್ಯಕತೆ ಇದೆ. ಮಳೆಗಾಲ ಆರಂಭವಾಗುವುದರ ಮೊದಲು ಹೂಳೆತ್ತಲು ಸಂಬಂಧಪಟ್ಟವರು ಮುಂದಾಗಬೇಕು ಎಂದು ಕೋಡಿ ಹಾಗೂ ಗಂಗೊಳ್ಳಿ ಭಾಗದ ಮೀನುಗಾರರು ಒತ್ತಾಯಿಸಿದ್ದಾರೆ.

ಪರಿಶೀಲನೆ ನಡೆಸಲಾಗುವುದು
ಈಗಾಗಲೇ ಯೋಜನೆ ಪ್ರಕಾರ ಏನಿದೆಯೋ ಆ ರೀತಿಯಲ್ಲಿ ಹೂಳೆತ್ತಲಾಗಿದೆ. ಬೋಟು ಹಾಗೂ ದೋಣಿಗಳ ಸಂಚಾರಕ್ಕೆ ಅನುವು ಮಾಡಿಕೊಡುವಷ್ಟು ದಾರಿ ಮಾಡಿಕೊಡಲಾಗಿದೆ. ಈ ಬಾರಿ ಹೂಳೆತ್ತುವ ಸಂಬಂಧ ಪರಿಶೀಲನೆ ನಡೆಸಿದ ಬಳಿಕ ಹೊಸದಾಗಿ ಯೋಜನೆ ಸಿದ್ಧಪಡಿಸಲಾಗುವುದು.
-ಉದಯ ಕುಮಾರ್‌, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌,
ಬಂದರು ಮತ್ತು ಮೀನುಗಾರಿಕಾ ಇಲಾಖೆ ಉಡುಪಿ

ಕೂಡಲೇ ಗಮನಹರಿಸಲಿ
ಪಂಚಗಂಗಾವಳಿ ಹೊಳೆಯಲ್ಲಿ ಸಂಗ್ರಹವಾಗಿರುವ ಹೂಳನ್ನು ತೆಗೆಯಬೇಕು ಎಂದು ನಾವು ಈ ವರ್ಷ ಎರಡೆರಡು ಬಾರಿ ಸಂಬಂಧಪಟ್ಟ ಸಂಸದರು, ಶಾಸಕರು, ಅಧಿಕಾರಿಗಳಿಗೆ ಮನವಿ ಮಾಡಿದ್ದೇವು. ಆದರೆ ಯಾವುದೇ ಪ್ರಯೋಜನ ಆಗಿಲ್ಲ. ಶಾಸಕರು ಕೂಡ ಹೂಳೆತ್ತಲು ಅಧಿಕಾರಿಗಳಿಗೆ ಸೂಚನೆ ನೀಡಿದರೂ, ಅವರು ಮೀನಾಮೇಷ ಎಣಿಸುತ್ತಿದ್ದಾರೆ. ಕೂಡಲೇ ಈ ಬಗ್ಗೆ ಜನಪ್ರತಿನಿಧಿಗಳು, ಅಧಿಕಾರಿಗಳು ಗಮನಹರಿಸಲಿ.
-ಭಾಸ್ಕರ ಪುತ್ರನ್‌ ಕೋಡಿ, ಮೀನುಗಾರರು

-ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ

KMC

Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ 

ಉಡುಪಿ: ಶಿಕ್ಷಣ ಇಲಾಖೆಯಲ್ಲಿ ಪ್ರತ್ಯೇಕ ಪರಿಹಾರ ನಿಧಿಯೇ ಇಲ್ಲ !

ಉಡುಪಿ: ಶಿಕ್ಷಣ ಇಲಾಖೆಯಲ್ಲಿ ಪ್ರತ್ಯೇಕ ಪರಿಹಾರ ನಿಧಿಯೇ ಇಲ್ಲ !

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

kambala2

Kambala Time Table: ಡಿ.13ರ ವರೆಗೆ ಸಾಂಪ್ರದಾಯಿಕ ಕಂಬಳ ಹಬ್ಬ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

Untitled-1

Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

3

Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.