ದುರಸ್ತಿಗಾಗಿ ಕಾಯುತ್ತಿದೆ ಅಚ್ಚಡ ಶಾಲೆಯ ಮೇಲ್ಛಾವಣಿ


Team Udayavani, May 16, 2019, 6:10 AM IST

acchada

ಕಟಪಾಡಿ: ಕನ್ನಡ ಶಾಲೆಗಳು ಮುಚ್ಚುತ್ತಿರುವ ಈ ದಿನಗಳಲ್ಲಿ ಸಾಕಷ್ಟು ವಿದ್ಯಾರ್ಥಿಗಳನ್ನು ಹೊಂದಿದ್ದು, ಅತ್ಯುತ್ತಮ ಶಿಕ್ಷಣವನ್ನೂ ನೀಡುತ್ತಿರುವ ಶಾಲೆಯೊಂದು ಇದೀಗ ದುರಸ್ತಿ ಕಾಮಗಾರಿಗಾಗಿ ಕಾದು ಬಸವಳಿದಿದೆ.

ಕಟಪಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿರುವ ಮೂಡಬೆಟ್ಟು ಗ್ರಾಮದ ಏಕೈಕ ಸರಕಾರಿ ಕನ್ನಡ ಮಾಧ್ಯಮ ಶಾಲೆ (ಅಚ್ಚಡ ಶಾಲೆ)ಯಲ್ಲಿ ಮೇಲ್ಛಾವಣಿ ರಿಪೇರಿ ಶಾಲೆ ಶುರುವಾಗುವ ಮುನ್ನ ತುರ್ತಾಗಿ ಆಗಬೇಕಿದೆ.

ತುರ್ತಾಗಿ ಆಗಬೇಕು ದುರಸ್ತಿ
ಸರಕಾರಿ ಗುಡ್ಡೆ ಬಳಿಯ ಅಚ್ಚಡದಲ್ಲಿರುವ ಈ ಶಾಲೆ ಆಂಗ್ಲ ಮಾಧ್ಯಮ ಶಾಲೆಗಳ ಪೈಪೋಟಿಯ ನಡುವೆಯೂ ಸಾಕಷ್ಟು ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ಹೊಂದಿದೆ. ಶಾಲೆಯ ಮೇಲ್ಛಾವಣಿ ಮಳೆಗಾಲದಲ್ಲಿ ಬೀಳುವಂತಿದ್ದು, ಮಕ್ಕಳ ಸುರಕ್ಷತೆ ಬಗ್ಗೆ ದೊಡ್ಡ ಪ್ರಶ್ನಾರ್ಥಕ ಚಿಹ್ನೆಯಾಗಿದೆ. ಇದರೊಂದಿಗೆ ಕಿಟಕಿ ಬಾಗಿಲುಗಳು, ಕುಡಿಯುವ ನೀರಿನ ಬಾವಿಯ ದುರಸ್ತಿ ಕಾರ್ಯಗಳೂ ತುರ್ತಾಗಿ ಆಗಬೇಕಿದೆ.

ಅಪಾಯದ ಸೂಚನೆ
ಕಳೆದ 2018ರ ಸಾಲಿನ ಮಳೆಗಾಲದಲ್ಲಿ ಈ ಶಾಲೆಯ ಆವರಣಗೋಡೆಯು ನೆರೆಯ ಹಾವಳಿಯಿಂದ ಕುಸಿದು ಬಿದ್ದು ಸಾಕಷ್ಟು ಹಾನಿ ಸಂಭವಿಸಿತ್ತು. ಇದರೊಂದಿಗೆ ಶೌಚಾಲಯದ ಭಾಗ ಮತ್ತು ಬಾವಿಯ ಒಳಗೂ ಕುಸಿತ ಕಂಡು ಬಂದಿತ್ತು. ಜಿಲ್ಲಾ ಪಂಚಾಯತ್‌ ಸದಸ್ಯರ ಅನುದಾನದಿಂದ ಈ ಶಾಲೆಯ ಆವರಣ ಗೋಡೆಯು ಮತ್ತೆ ಎದ್ದು ನಿಂತಿದೆ. ಆದರೆ ಬಾವಿ ದುರಸ್ತಿ ಕಂಡಿಲ್ಲ. ಅಪಾಯದ ಸೂಚನೆಯನ್ನು ನೀಡುತ್ತಿದೆ.

ಮನವಿಗೆ ಪ್ರತಿಕ್ರಿಯೆಯಿಲ್ಲ
ಇವೆಲ್ಲದರ ಬಗ್ಗೆ ಶಾಲೆಯ ಮುಖ್ಯೋಪಾಧ್ಯಾಯಿನಿ ಶಾಲಾ ಭೌತಿಕ ಅವಶ್ಯಕತೆಗಳನ್ನು ಪೂರೈಸಬೇಕೆಂದು ಮನವಿಯನ್ನು ಗ್ರಾ.ಪಂ., ಕಾಪು ಶಾಸಕರಿಗೆ, ಶಿಕ್ಷಣಾಧಿಕಾರಿಗಳಿಗೆ ಮನವಿ ನೀಡಿದ್ದರು. ಆದರೆ ವರ್ಷ ಕಳೆದರೂ ಈ ಬಗ್ಗೆ ಯಾವುದೇ ಪ್ರಗತಿ ಕಂಡಿಲ್ಲ. ಶಾಲೆಯ ಒಳರಂಗಮಂಟಪವನ್ನು ಒಳಗೊಂಡಿರುವ ಐದು ತರಗತಿ ಕೋಣೆಗಳ ದೊಡ್ಡ ಕಟ್ಟಡದ ಶಿಥಿಲಗೊಂಡಿರುವ ಮೇಲ್ಛಾವಣಿ ನವೀಕರಣವೂ ಆಗಿಲ್ಲ. ದುರಸ್ತಿಯನ್ನೂ ಕಂಡಿಲ್ಲ. ಒಂದು ತರಗತಿ ಕೋಣೆಯ ನೆಲ ಮತ್ತು ಗೋಡೆಗೆ ಸಿಮೆಂಟ್‌ ಗಾರೆಯೂ ಕಂಡಿಲ್ಲ. ಹುಡುಗರ ಶೌಚಾಲಯ ದುರಸ್ತಿಗಾಗಿ ಕಾಯುತ್ತಿದೆ.

ಕುಡಿಯುವ ನೀರಿನ ಬಾವಿಯ ಒಳಗಡೆ ಕುಸಿದಿರುವ ಕಲ್ಲುಗಳ ಮರು ಜೋಡಣೆ ಹಾಗೂ ಹೂಳು ತೆಗೆಯಲು ಕಾಯುತ್ತಿದೆ. ಈ ಬಗ್ಗೆ ಕೂಡಲೇ ಸಂಬಂಧಪಟ್ಟವರು ಎಚ್ಚೆತ್ತುಕೊಳ್ಳಬೇಕೆನ್ನುವುದು ಗ್ರಾಮಸ್ಥರ ಒತ್ತಾಯವಾಗಿದೆ.

ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ
ಸರಕಾರದಿಂದ ಈ ಬಗ್ಗೆ ಅನುದಾನ ತಾಲೂಕು ಪಂಚಾಯತ್‌ಗೆ ಬಂದಿಲ್ಲ. ಶಾಲಾ ದುರಸ್ತಿಗೆ ಬರುವ ಅನುದಾನವನ್ನು ಪ್ರಥಮ ಪ್ರಾಶಸ್ತÂದ ಮೇರೆಗೆ ಈ ಶಾಲೆಗೆ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಇತರೇ ಬೇಡಿಕೆಗಳ ಮತ್ತು ಮುಂಜಾಗ್ರತಾ ಕ್ರಮಗಳ ಬಗ್ಗೆ ಶಾಲೆಗೆ ಭೇಟಿ ನೀಡಿ ಸೂಕ್ತ ಕ್ರಮವನ್ನು ಕೈಗೊಳ್ಳುತ್ತೇನೆ.
-ಮಂಜುಳಾ ಕೆ., ಕ್ಷೇತ್ರ ಶಿಕ್ಷಣಾಧಿಕಾರಿ, ಉಡುಪಿ

ಮನವಿ ಮಾಡಿಕೊಳ್ಳಲಾಗಿದೆ
ಶಾಲಾ ದೊಡ್ಡ ಕಟ್ಟಡದ ದುರಸ್ತಿ,ನವೀಕರಣಗೊಳಿಸುವ ಮೂಲಕ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯವನ್ನು ಕಲ್ಪಿಸುವ ಬಗ್ಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಸ್ಥಳೀಯ ಗ್ರಾಮ ಪಂಚಾಯತ್‌, ಕ್ಷೇತ್ರದ ಶಾಸಕರಲ್ಲಿ ಮನವಿಯನ್ನು ಮಾಡಿಕೊಳ್ಳಲಾಗಿದೆ. ಈ ಬಗ್ಗೆ ಸ್ಪಂದಿಸುವ ಭರವಸೆ ಇದೆ.
-ಶಕುಂತಳಾದೇವಿ, ಮುಖ್ಯೋಪಾಧ್ಯಾಯಿನಿ, ಅಚ್ಚಡ ಶಾಲೆ

  ವಿಜಯ ಆಚಾರ್ಯ, ಉಚ್ಚಿಲ

ಟಾಪ್ ನ್ಯೂಸ್

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

vidhana-Soudha

Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿUS Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

fraud-2

ಆನ್‌ಲೈನ್‌ನಲ್ಲಿ ಅಧಿಕ ಲಾಭಾಂಶದ ಆಮಿಷ: ಬ್ಯಾಂಕ್‌ ಮ್ಯಾನೇಜರ್‌ಗೆ ಲಕ್ಷಾಂತರ ರೂ. ವಂಚನೆ

Udupi: ಹೂಡೆ ಬೀಚ್‌ನಲ್ಲಿ ಪ್ರವಾಸಿಗರ ಮೇಲೆ ಸ್ಥಳೀಯರಿಂದ ಹಲ್ಲೆ

Udupi: ಹೂಡೆ ಬೀಚ್‌ನಲ್ಲಿ ಪ್ರವಾಸಿಗರ ಮೇಲೆ ಸ್ಥಳೀಯರಿಂದ ಹಲ್ಲೆ

2

Hiriydaka: ಒಟಿಪಿ ನೀಡಿ 5 ಲಕ್ಷ ರೂ. ಕಳೆದುಕೊಂಡ ಯುವತಿ

balli

Padubidri: ನೇಣು ಬಿಗಿದು ವ್ಯಕ್ತಿ ಆತ್ಮಹ*ತ್ಯೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Kanaka-Award

Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

vidhana-Soudha

Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.