ಕನ್ನಡ ಭಾಷೆಯ ಅಭಿವೃದ್ಧಿಗೆ ಸಮಗ್ರ ಕನ್ನಡ ವಿಧೇಯಕ: ನಾಗಾಭರಣ
Team Udayavani, Jun 15, 2022, 1:45 AM IST
ಉಡುಪಿ: ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗೆ “ಸಮಗ್ರ ಕನ್ನಡ ವಿಧೇಯಕ’ ವನ್ನು ಸಿದ್ಧಪಡಿಸಲಾಗುತ್ತಿದೆ. ಇದರಿಂದ ಸಮಗ್ರ ಕನ್ನಡ ಭಾಷಾ ನೀತಿ, ಉದ್ಯೋಗ ಶಿಕ್ಷಣ ಭಾಷಾ ನೀತಿಯ ಅಭಿವೃದ್ಧಿ ನಿರೀಕ್ಷೆ ಹೊಂದಲಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಮಂಗಳವಾರ ಉಡುಪಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಕನ್ನಡ ಭಾಷೆ ಅನುಷ್ಠಾನ ಸಮುದಾಯದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಇಲಾಖೆಗಳಲ್ಲಿ ಸಮನ್ವಯ ಸಾಧಿಸಿದರೆ ಅಭಿವೃದ್ಧಿ ಪ್ರಾಧಿಕಾರಿಗಳು ಏಳಿಗೆಯಾಗಲು ಸಾಧ್ಯ. ಈ ನಿಟ್ಟಿನಲ್ಲಿ ಉಡುಪಿ ಜಿಲ್ಲೆ ಮಾದರಿ ಯಾಗಬೇಕು. ಸಮುದಾಯ ಹಾಗೂ ಸಾರ್ವಜನಿಕರ ಸಹಭಾಗಿತ್ವದಲ್ಲಿ ಕನ್ನಡ ಭಾಷೆ ಅನುಷ್ಠಾನವಾಗಬೇಕು. ಆದಿಉಡುಪಿಯಲ್ಲಿ ರಂಗಮಂದಿರ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿದೆ ಎಂದರು.
ಡಿಡಿಪಿಐಗಳಿಗೆ ಸೂಚನೆ
ಕನ್ನಡ ಭಾಷೆ, ಶಾಲೆಗಳ ಬಗ್ಗೆ ಉತ್ತಮ ನಿಲುವು ತೋರುವಂತೆ ಸರಕಾರಕ್ಕೆ ಹಲವು ದಿನಗಳ ಹಿಂದೆಯೇ ತಿಳಿಸಲಾಗಿದೆ. ಕನ್ನಡ ಕಲಿಕಾ ಅಧಿನಿಯಮದ ಅನುಷ್ಠಾನ ಯಾವ ಜಿಲ್ಲೆಗಳಲ್ಲಿ ಎಷ್ಟು ಆಗಿದೆ ಎಂಬ ಬಗ್ಗೆ ವರದಿ ನೀಡುವಂತೆ ಆಯಾಯ ಜಿಲ್ಲೆಗಳ ಡಿಡಿಪಿಐಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಜಿಲ್ಲಾಧಿಕಾರಿ ಕೂರ್ಮಾರಾವ್, ಜಿ.ಪಂ. ಸಿಇಒ ಪ್ರಸನ್ನ ಎಚ್., ಎಡಿಸಿ ವೀಣಾ, ಪ್ರಾಧಿಕಾರದ ಸದಸ್ಯರಾದ ಡಾ| ರಮೇಶ್, ಮಹೇಶ್ ಎನ್., ಡಾ| ಸಂತೋಷ್ ಹಾನಗಲ್ ಪತ್ರಿಕಾಗೋಷ್ಠಿಯಲ್ಲಿದ್ದರು.
ಅಧಿಕಾರಿಗಳಿಗೆ ಕನ್ನಡ ತರಬೇತಿ
ನಾಗರಿಕ ಸೇವಾ ಅಧಿಕಾರಿಗಳು ಕನ್ನಡ ಭಾಷೆಯಲ್ಲಿ ವ್ಯವಹರಿಸುವಂತಾಗಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳಿಗೆ ತರಬೇತಿ ನೀಡುವ ಚಿಂತನೆಯಿದೆ. ಈಗಾಗಲೇ ಕನ್ನಡ ಭಾಷೆ ಬಳಕೆ ಮಾಡದ 105 ಮಂದಿ ಐಎಎಸ್ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮಕ್ಕೆ ಬರೆಯಲಾಗಿದೆ ಎಂದು ನಾಗಾಭರಣ ಅವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ
Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್ ಕುಮಾರ್
Udupi: ರೈಲು ಬಡಿದು ವ್ಯಕ್ತಿ ಸಾವು
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Karkala: ಬಾವಿಗೆ ಬಿದ್ದು ವ್ಯಕ್ತಿ ಸಾವು; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ ಪಡೆ
MUST WATCH
ಹೊಸ ಸೇರ್ಪಡೆ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Re Release: ದರ್ಶನ್ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.