ಮೀನಿಗೆ ಗಾಳ ಹಾಕಲು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ
Team Udayavani, Jul 31, 2023, 8:21 PM IST
ಮಲ್ಪೆ: ಗಾಳ ಹಾಕಿ ಮೀನು ಹಿಡಿಯಲು ಹೋಗಿ ನಾಪತ್ತೆಯಾಗಿದ್ದ ಕೆಮ್ಮಣ್ಣು ಪಡುತೋನ್ಸೆಯ ನಿವಾಸಿ ರಾಘವೇಂದ್ರ ಪೂಜಾರಿ (44 ವ) ಅವರು ಮಲ್ಪೆ ಪಡುಕರೆ ಸಮುದ್ರ ತೀರದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಮೇಸ್ತ್ರಿ ಕೆಲಸ ಮಾಡಿಕೊಂಡಿದ್ದ ಅವರು 4 ವರ್ಷದಿಂದ ಕೆಲಸಕ್ಕೆ ಹೋಗುತ್ತಿರಲಿಲ್ಲ. ಬಿಡುವಿನ ವೇಳೆಯಲ್ಲಿ ಗಾಳ ಹಾಕಿ ಮೀನು ಹಿಡಿಯುತ್ತಿದ್ದ ಅವರು ಜು.29ರಂದು ಮೀನಿಗೆ ಗಾಳ ಹಾಕಲು ಹೋಗಿ ನಾಪತ್ತೆಯಾಗಿದ್ದರು.
ಗುಜ್ಜರ್‌ಬೆಟ್ಟು ರಾಘವೇಂದ್ರ ಭಜನಾ ಮಂದಿರದ ಹಿಂಭಾಗ ಕಡಲಕಿನಾರೆಯಲ್ಲಿ ಅವರ ಚಪ್ಪಲಿ, ಕೊಡೆ, ಮೊಬೈಲ್ ಫೋನ್ ದೊರಕಿದ್ದು ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ನಾಪತ್ತೆ ದೂರು ದಾಖಲಾಗಿತ್ತು.
ಸೋಮವಾರ ಮಧ್ಯಾಹ್ನ 1 ಗಂಟೆಗೆ ಮಲ್ಪೆ ಪಡುಕರೆ ಭಾಗದಲ್ಲಿ ಸಮುದ್ರದಲ್ಲಿ ತೇಲುತ್ತಿರುವ ರೀತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಸಮಾಜ ಸೇವಕ ಈಶ್ವರ ಮಲ್ಪೆ ಅವರು ಸಮುದ್ರತೀರದಲ್ಲಿ ತೇಲುತ್ತಿದ್ದ ಶವವನ್ನು ದಡಕ್ಕೆ ತಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.