ಡಾ| ಧನಂಜಯ ಸರ್ಜಿಯವರ ಗೆಲುವು; ಕಾರ್ಯಕರ್ತರ ಪರಿಶ್ರಮಕ್ಕೆ ಸಂದ ಜಯ: ಯಶ್‌ಪಾಲ್ ಸುವರ್ಣ
Team Udayavani, Jun 7, 2024, 11:52 PM IST
ಉಡುಪಿ: ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಡಾ| ಧನಂಜಯ ಸರ್ಜಿಯವರ ಗೆಲುವು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರ ಪರಿಶ್ರಮಕ್ಕೆ ಸಂದ ಗೆಲುವಾಗಿದ್ದು, ಈ ಮೂಲಕ ಪಕ್ಷಕ್ಕೆ ನಿಷ್ಠಾವಂತ ಕಾರ್ಯಕರ್ತರೇ ದೊಡ್ಡ ಆಸ್ತಿ ಎಂಬುದು ಮತ್ತೂಮ್ಮೆ ಸಾಬೀತಾಗಿದೆ ಎಂದು ಶಾಸಕ ಯಶ್‌ಪಾಲ್ ಸುವರ್ಣ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ವ್ಯಕ್ತಿಗಿಂತ ಪಕ್ಷ ಮುಖ್ಯ, ಪಕ್ಷಕ್ಕಿಂತ ದೇಶ ಮುಖ್ಯ ಎಂಬ ಸಿದ್ಧಾಂತದೊಂದಿಗೆ ಬೆಳೆದು ಬಂದ ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಹಲವು ಗೊಂದಲಗಳ ನಡುವೆಯೂ ಧೃತಿಗೆಡದೆ ಹಗಲಿರುಳು ಶ್ರಮಿಸಿ ಡಾ| ಧನಂಜಯ ಸರ್ಜಿ ಹಾಗೂ ಮೈತ್ರಿ ಅಭ್ಯರ್ಥಿ ಭೋಜೇಗೌಡ ಅವರನ್ನು ಗೆಲ್ಲಿಸುವ ಮೂಲಕ ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ನರೇಂದ್ರ ಮೋದಿಯವರಿಗೆ ಗೆಲುವಿನ ಉಡುಗೊರೆ ನೀಡಿದ್ದಾರೆ.
ಪದವೀಧರ ಹಾಗೂ ಶಿಕ್ಷಕ ಕ್ಷೇತ್ರದ ಪ್ರಬುದ್ಧ ಮತದಾರರು ಸಜ್ಜನ ವ್ಯಕ್ತಿತ್ವದ ಡಾ| ಧನಂಜಯ ಸರ್ಜಿ ಹಾಗೂ ಕ್ರಿಯಾಶೀಲ ಅಭ್ಯರ್ಥಿ ಭೋಜೇಗೌಡರನ್ನು ತಮ್ಮ ಪ್ರತಿನಿಧಿಯಾಗಿ ಗೆಲ್ಲಿಸುವ ಮೂಲಕ ನರೇಂದ್ರ ಮೋದಿಯವರ ವಿಕಸಿತ ಭಾರತ ಸಂಕಲ್ಪಕ್ಕೆ ಮುನ್ನುಡಿ ಬರೆದಿದ್ದಾರೆ. ಪದವೀಧರ ಹಾಗೂ ಶಿಕ್ಷಕರ ಸಮಸ್ಯೆಗಳಿಗೆ ವಿಧಾನ ಪರಿಷತ್ತಿನಲ್ಲಿ ಶಾಸಕರು ಧ್ವನಿಯಾಗುವರು ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.