ಚಾರ್ಮಾಡಿಯಲ್ಲಿ ಕುಕ್ಕಾಜೆಯ ಯುವಕನ ಶವ ಪತ್ತೆ

ಮನೆಯಿಂದ ನಾಪತ್ತೆಯಾಗಿದ್ದ ಯುವಕ; ಕಾರಣ ನಿಗೂಢ

Team Udayavani, Jun 10, 2023, 5:47 AM IST

ಚಾರ್ಮಾಡಿಯಲ್ಲಿ ಕುಕ್ಕಾಜೆಯ ಯುವಕನ ಶವ ಪತ್ತೆ

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಠಾಣೆ ವ್ಯಾಪ್ತಿಯ ಕುಕ್ಕಾಜೆ ನಿವಾಸಿ ಸವಾದ್‌ (35) ಎಂಬವರ ಮೃತದೇಹ ಚಾರ್ಮಾಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಾವಿಗೆ ಕಾರಣವೇನು ಎಂದು ಇನ್ನಷ್ಟೇ ತಿಳಿದು ಬರಬೇಕಿದೆ.

ಸವಾದ್‌ ಕಳೆದ ಸುಮಾರು 10 ದಿನಗಳಿಂದ ಮನೆಯಿಂದ ನಾಪತ್ತೆಯಾಗಿದ್ದ. ಈತ ಗಾಂಜಾ ವ್ಯಸನಿಯಾಗಿದ್ದು, ಈ ಹಿಂದೆಯೂ ಕೆಲವು ಬಾರಿ ನಾಪತ್ತೆಯಾಗಿ ಹಲವು ದಿನಗಳ ಬಳಿಕ ಮನೆಗೆ ವಾಪಾಸಾಗುತ್ತಿದ್ದ. ಆದ್ದರಿಂದ ಈ ಬಾರಿಯೂ ಅದೇ ರೀತಿ ಆಗಿರಬಹುದು ಎಂದು ಮನೆಯವರು ಅಂದು ಕೊಂಡಿದ್ದರು.

ಆದರೆ ಆತನೊಂದಿಗೆ ಇರುತ್ತಿದ್ದ ಮಾರಿಪಳ್ಳದ ವ್ಯಕ್ತಿಯೊಬ್ಬ ಸವಾದ್‌ನ ಅಣ್ಣನಿಗೆ ನಿನ್ನ ತಮ್ಮ ಚಾರ್ಮಾಡಿಯಲ್ಲಿ ಕೊಲೆಯಾಗಿದ್ದಾನೆ ಎಂದು ತಿಳಿಸಿದ್ದಾನೆ. ಈ ಬಗ್ಗೆ ವಿಚಾರಿಸಿದಾಗ ಚಾರ್ಮಾಡಿಯಲ್ಲಿ ಮೃತದೇಹವೊಂದು ಪತ್ತೆಯಾಗಿರುವ ಬಗ್ಗೆ ಮನೆಯವರಿಗೆ ಮಾಹಿತಿ ಲಭ್ಯವಾಗಿದೆ. ಮೃತದೇಹ ಪತ್ತೆಯಾದ ಸ್ಥಳದ ವ್ಯಾಪ್ತಿಯ ಚಿಕ್ಕಮಗಳೂರು ಜಿಲ್ಲೆಗೆ ಸೇರಿದೆ. ಅಲ್ಲಿನ ಬಣಕಲ್‌ ಠಾಣೆಗೆ ತೆರಳಿ ವಿಚಾರಿಸಿದ್ದು, ಮೃತದೇಹದ ಮೈಮೇಲಿನ ಬಟ್ಟೆ ಮತ್ತು ಕೈಯಲ್ಲಿರುವ ನೂಲನ್ನು ಆಧರಿಸಿ ಅದು ಸವಾದ್‌ನದ್ದೇ ಮೃತದೇಹ ಎಂದು ಅಭಿಪ್ರಾಯಪಟ್ಟಿದ್ದಾರೆ. ಸವಾದ್‌ನೊಂದಿಗೆ ಇದ್ದ ಇತರ ಮೂವರು ಆತನನ್ನು ಕರೆದು ಕೊಂಡು ಹೋಗಿ ಕೊಲೆ ಮಾಡಿ ಬಿಸಾಕಿರಬಹುದು ಎಂದು ಶಂಕೆ ವ್ಯಕವಾಗಿದೆ.

ಮೃತದೇಹವನ್ನು ಚಿಕ್ಕಮಗಳೂರು ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲು ಇರಿಸಲಾಗಿದ್ದು, ವರದಿ ಬಂದ ಬಳಿಕವಷ್ಟೇ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ.

ಅಸಹಜ ಸಾವು ಪ್ರಕರಣ ದಾಖಲು:
ಚಾರ್ಮಡಿಯ ಬಣಕಲ್‌ ವ್ಯಾಪ್ತಿಯಲ್ಲಿ ಅಪರಿಚಿತ ಮೃತದೇಹವೊಂದು ಪತ್ತೆಯಾಗಿತ್ತು. ಈ ಸಂಬಂಧ ಅಸಹಜ ಸಾವು ಪ್ರಕರಣ ದಾಖಲು ಮಾಡಲಾಗಿದೆ. ಈ ನಡುವೆ ಮೃತ ವ್ಯಕ್ತಿಯ ಮನೆಯವರು ಬಂದು ಮೃತದೇಹವನ್ನು ನೋಡಿದ್ದು, ಶೇ.90ರಷ್ಟು ಹೋಲಿಕೆ ಇದೆ ಎಂದು ತಿಳಿಸಿದ್ದಾರೆ. ಶನಿವಾರ ಮರಣೋತ್ತರ ಪರೀಕ್ಷೆ ನಡೆಯಲಿದೆ. ಶೇ.100 ರಷ್ಟು ಹೋಲಿಕೆಯಾಗದಿದ್ದರೆ ಡಿಎನ್‌ಎ ಟೆಸ್ಟ್‌ ನಡೆಸಿ, ಅವನದ್ದೇ ಆಗಿದ್ದರೆ ಎಫ್‌ಐಆರ್‌ ದಾಖಲಿಸಲಾಗುವುದು ಎಂದು ಬಣಕಲ್‌ ಠಾಣಾ ಪೊಲೀಸ್‌ ನಿರೀಕ್ಷಕರು ಉದಯವಾಣಿಗೆ ತಿಳಿಸಿದ್ದಾರೆ.

ಗಾಂಜಾ ಹಾವಳಿ ವ್ಯಾಪಕ:
ಕುಕ್ಕಾಜೆ ಸಹಿತ ಗ್ರಾಮಾಂತರ ಭಾಗದಲ್ಲಿ ಗಾಂಜಾ ಹಾವಳಿ ವ್ಯಾಪಕವಾಗಿದ್ದು, ಯುವಜನತೆ ಅದಕ್ಕೆ ಬಲಿ ಬೀಳುತ್ತಿದ್ದಾರೆ. ಸವಾದ್‌ ಸಾವಿಗೂ ಗಾಂಜಾ ಪ್ರಕರಣವೇ ಕಾರಣವಾಗಿರಬಹುದು. ಕೇರಳ ಗಡಿ ಭಾಗವಾಗಿರುವುದರಿಂದ ಸಾಕಷ್ಟು ಪ್ರಮಾಣದಲ್ಲಿ ಗಾಂಜಾ ಪೂರೈಕೆಯಾಗುತ್ತಿದೆ. ಪೊಲೀಸರು ಹಾಗೂ ಸಂಬಂಧ ಪಟ್ಟ ಇಲಾಖೆಯವರು ಈ ಕುರಿತು ಗಮನ ಹರಿಸಿ, ಗಾಂಜಾ ಹಾವಳಿಯನ್ನು ತಡೆಯಬೇಕು ಎಂದು ಸ್ಥಳೀಯರಾದ ರಝಾಕ್‌ ಕುಕ್ಕಾಜೆ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ

2

Puttur: ಚೆನ್ನಾಗಿ ಮಳೆ ಬಂದರೂ ಕುಸಿದ ಅಂತರ್ಜಲ ಮಟ್ಟ

1

Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್‌

Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

Untitled-1

Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

3

Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.