ಆಧಾರ್ ಪ್ರಕ್ರಿಯೆ ಸರಳ: ಬೊಮ್ಮಾಯಿ
ಉಡುಪಿಯಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಲು ನಿರ್ಧಾರ
Team Udayavani, Sep 28, 2019, 6:00 AM IST
ಉಡುಪಿ: ಆಧಾರ್ ಕಾರ್ಡ್ ಸಂಬಂಧಿ ಸಮಸ್ಯೆಗಳಿಗೆ ಸುಲಭವಾಗಿ ಪರಿ ಹಾರ ದೊರೆಯುವಂತಾಗಲು ರಾಜ್ಯದಲ್ಲಿ ಹೊಸ ವ್ಯವಸ್ಥೆ ಜಾರಿಗೊಳಿಸಲಾಗುವುದು. ಇದಕ್ಕಾಗಿ ಉಡುಪಿಯಲ್ಲಿ ಪ್ರಾಯೋಗಿಕ ಯೋಜನೆ (ಪೈಲಟ್ ಪ್ರಾಜೆಕ್ಟ್) ಆರಂಭಿಸ ಲಾಗುವುದು ಎಂದು ಗೃಹ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಗತಿ ಪರಿಶೀಲನ ಸಭೆಯ ಬಳಿಕ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಸಿಬಂದಿ, ಮೂಲಸೌಕರ್ಯ ಒದಗಿಸು ವುದು ಸೇರಿದಂತೆ ಸಮಗ್ರ ವ್ಯವಸ್ಥೆ ಜಾರಿಗೆ ತರಲಾಗುವುದು. ಇದಕ್ಕೆ ಅಗತ್ಯವಿರುವ ಅನುದಾನವನ್ನು ಒದಗಿಸಿ ಜನರಿಗೆ ಸುಲಭವಾಗಿ ಆಧಾರ್ ದೊರೆಯುವಂತೆ ಮಾಡಲಾಗುವುದು ಎಂದರು.
ನಾನ್‌ಸಿಆರ್‌ಝಡ್‌ನಲ್ಲೂ ಮರಳುಗಾರಿಕೆ
ಉಡುಪಿ ಜಿಲ್ಲೆಯಲ್ಲಿ ಎರಡೂವರೆ ವರ್ಷಗಳಿಂದ ಸ್ಥಗಿತಗೊಂಡಿದ್ದ ಮರಳು ಗಾರಿಕೆ ಸೆ.27ರಂದು ಪುನರಾರಂಭ ಗೊಂಡಿದೆ. 2012ರಲ್ಲಿ ಡಾ| ವಿ.ಎಸ್. ಆಚಾರ್ಯ ಅಧ್ಯಕ್ಷರಾಗಿದ್ದ ಸಂಪುಟ ಉಪಸಮಿತಿಯ ನೀತಿಯಿಂದಾಗಿ ಇಂದು ಮರಳು ಒದಗಿಸಲು ಸಾಧ್ಯವಾಗುತ್ತಿದೆ. ಶೀಘ್ರದಲ್ಲೇ ನಾನ್‌ಸಿಆರ್‌ಝಡ್ ಮರಳುಗಾರಿಕೆ ಕೂಡ ಆರಂಭಿಸಲಾಗು ವುದು. ಮರಳು ಕಟ್ಟಡ ನಿರ್ಮಾಣಗಾರರು ಮಾತ್ರವಲ್ಲದೆ ಸಾಮಾನ್ಯ ಜನರಿಗೂ ಸಂಬಂಧಿಸಿದ ಗಂಭೀರ ವಿಷಯ ಎಂದು ಸಚಿವರು ತಿಳಿಸಿದರು.
ವಸತಿಗೆ ಹಣ
2017-18 ಮತ್ತು 19ನೇ ಸಾಲಿನ ವಸತಿ ಯೋಜನೆಗಳಿಗೆ ಇನ್ನೂ ಹಣ ಬಿಡುಗಡೆಯಾಗಿಲ್ಲ. ವಸತಿ ನಿಗಮಕ್ಕೆ ಅಗತ್ಯ ಹಣ ಬಿಡುಗಡೆ ಮಾಡಿ ಫಲಾನುಭವಿಗಳಿಗೆ ಶೀಘ್ರ ತಲುಪಲು ಕ್ರಮ ಕೈಗೊಳ್ಳುತ್ತೇವೆ ಎಂದು ಬೊಮ್ಮಾಯಿ ತಿಳಿಸಿದರು.
ಅಪೂರ್ಣ ರಾ. ಹೆದ್ದಾರಿ: ಕ್ರಮ
ರಾಷ್ಟ್ರೀಯ ಹೆದ್ದಾರಿ 66ರ ಅಪೂರ್ಣ ಕಾಮಗಾರಿ ಕುರಿತು ದೂರುಗಳು ಬಂದಿವೆ. ಇರುವ ತೊಂದರೆಗಳ ಕುರಿತು ಹೆದ್ದಾರಿ ಪ್ರಾಧಿಕಾರದ ಜತೆಗೆ ಚರ್ಚಿಸಿ ಕೇಂದ್ರ ಸಚಿವರ ಗಮನಕ್ಕೆ ತರಲಾಗುವುದು. ಜಿಲ್ಲೆಯಲ್ಲಿ ಕಲ್ಲು ಗಣಿಗಾರಿಕೆ ಕುರಿತು ಅರಣ್ಯ ಇಲಾಖೆಯ ಜತೆ ಸೇರಿ ಜಂಟಿ ಸಮೀಕ್ಷೆ ನಡೆಸಲು ಆದೇಶ ನೀಡಲಾಗಿದೆ. ಮುಂದಿನ ತಿಂಗಳು ಉಡುಪಿ ಜಿಲ್ಲಾ ಕೆಡಿಪಿ ಸಭೆ ನಡೆಸಿ ಸಮಗ್ರ ಪ್ರಗತಿ ಪರಿಶೀಲನೆ ನಡೆಸಲಿದ್ದೇನೆ ಎಂದು ಸಚಿವರು ತಿಳಿಸಿದರು.
ಶಾಸಕರಾದ ರಘುಪತಿ ಭಟ್, ಸುನಿಲ್ ಕುಮಾರ್, ಸುಕುಮಾರ ಶೆಟ್ಟಿ, ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು. ಮರಳಿಗಾಗಿ ಪ್ರತಿಭಟನೆ ನಡೆಸುತ್ತಿದ್ದ ಕಟ್ಟಡ ಕಾರ್ಮಿಕರನ್ನು ಭೇಟಿಯಾದ ಸಚಿವರು ಅಹವಾಲು ಸ್ವೀಕರಿಸಿದರು.
ಬಿಜೆಪಿ ಕಚೇರಿಯಲ್ಲಿ ಸಮ್ಮಾನ
ಇದೇ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಸಮ್ಮಾನ ಸ್ವೀಕರಿಸಿ, ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಸಚಿವ ಬೊಮ್ಮಾಯಿ, ಪಕ್ಷದ ವಿಚಾರಗಳಿಗೆ ಧ್ವನಿಯಾಗಿ ಕೆಲಸ ಮಾಡಲು ನಿರ್ಧರಿಸಿದ್ದು, ಜಿಲ್ಲೆಯ ಪ್ರವಾಸೋದ್ಯಮ, ಕೈಗಾರಿಕೆ ಸಹಿತ ಮೂಲಸೌಲಭ್ಯಗಳ ವಿಚಾರದಲ್ಲಿ ಕೇಂದ್ರ, ರಾಜ್ಯ ಸರಕಾರಗಳ ಮೂಲಕ ಗರಿಷ್ಠ ಅನುದಾನ ತರಲು ಪ್ರಯತ್ನಿಸಲಾಗುವುದು ಎಂದರು.
ಸರಕಾರಿ ಸೇವೆ ಜನಸಾಮಾನ್ಯರಿಗೆ ತಲುಪಿಸಿ ಅಧಿಕಾರಿಗಳಿಗೆ ಬೊಮ್ಮಾಯಿ ಸೂಚನೆ
ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಿ ಸರಕಾರದ ಸೇವೆಗಳನ್ನು ಜನರಿಗೆ ತಲುಪಿಸಿ. ಆಗ ಜನರಿಗೆ ಆಡಳಿತ ವ್ಯವಸ್ಥೆ ಬಗ್ಗೆ ವಿಶ್ವಾಸ ಮೂಡುತ್ತದೆ – ಇದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ನೀಡಿದ ಸೂಚನೆ.
ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಅವರು ಪ್ರಗತಿ ಪರೀಶೀಲನ ಸಭೆ ನಡೆಸಿದರು.
ಅಧಿಕಾರಿಗಳು ಸಕಾರಾತ್ಮಕ ಚಿಂತನೆ ನಡೆಸಿ ಸೇವೆ ಸಲ್ಲಿಸಿದರೆ ಸಮಸ್ಯೆಗಳು ಪರಿಹಾರವಾಗುತ್ತವೆ. ಕಾನೂನಿನ್ವಯ ಜನಹಿತ ಕೆಲಸ ಮಾಡಬೇಕು. ಇಂತಹ ಸಂದರ್ಭದಲ್ಲಿ ಯಾವುದೇ ತೊಂದರೆ ಬಂದರೂ ಸರಕಾರ ರಕ್ಷಣೆ ಒದಗಿಸಲಿದೆ ಎಂದವರು ಭರವಸೆ ನೀಡಿದರು.
ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಶಾಸಕರಾದ ರಘುಪತಿ ಭಟ್, ಹಾಲಾಡಿ ಶ್ರೀನಿವಾಸ ಶೆಟ್ಟಿ, ಸುನಿಲ್ ಕುಮಾರ್, ಲಾಲಾಜಿ ಆರ್. ಮೆಂಡನ್, ಬಿ.ಎಂ. ಸುಕುಮಾರ ಶೆಟ್ಟಿ, ಜಿಲ್ಲಾಧಿಕಾರಿ ಜಿ. ಜಗದೀಶ್, ಎಸ್‌ಪಿ ನಿಶಾ ಜೇಮ್ಸ್, ಸಿಇಒ ಪ್ರೀತಿ ಗೆಹೊಲೋಟ್ ಉಪಸ್ಥಿತರಿದ್ದರು.
ಔರಾದ್‌ಕರ್ ವರದಿಯ 2 ಹಂತಗಳಿಗೂ ಒಪ್ಪಿಗೆ
ಪೊಲೀಸರ ವೇತನ ಪರಿಷ್ಕರಣೆ ಸಂಬಂಧ ಎರಡು ಹಂತಗಳಲ್ಲಿ ಸಲ್ಲಿಸಲಾಗಿರುವ ಔರಾದ್‌ಕರ್ ವರದಿಗೂ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಬೊಮ್ಮಾಯಿ ಸಚಿವರಾದ ಬಳಿಕ ಮೊದಲ ಬಾರಿಗೆ ಶುಕ್ರವಾರ ಉಡುಪಿಗೆ ಭೇಟಿ ನೀಡಿದ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿ, ಸ್ವಾಮೀಜಿಗಳ ಪೋನ್ ಕದ್ದಾಲಿಕೆ ಕುರಿತ ಎಲ್ಲ ಮಾಹಿತಿ ಸಿಬಿಐ ಬಳಿ ಇರುತ್ತದೆ. ಅಧಿಕೃತವಾಗಿ ನಮಗೆ ಯಾವುದೇ ಮಾಹಿತಿ ಬಂದಿಲ್ಲ. ಊಹಾಪೋಹಗಳಿಗೆ ಉತ್ತರಿಸುವುದಿಲ್ಲ. ಆದರೆ ಅನುಮತಿ ಇಲ್ಲದೆ ಯಾವುದೇ ವ್ಯಕ್ತಿಯ ಖಾಸಗಿ ಮಾತುಕತೆಯ ಕದ್ದಾಲಿಕೆ ತಪ್ಪು. ಎಸ್‌ಐಟಿ ಮಾಡಿರುವ ತನಿಖೆಯ ಪೂರ್ಣ ವಿವರ ಸಿಬಿಐಗೆ ನೀಡಿದ್ದೇವೆ ಎಂದು ಹೇಳಿದರು. ಪ್ರಭಾವ ಬಳಸಿ ಉಪಚುನಾವಣೆ ಮುಂದೂಡಲಾಗಿದೆ ಎಂಬ ಕುಮಾರಸ್ವಾಮಿ ಆರೋಪದ ಬಗ್ಗೆ, ಅವರು ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.