ಪ್ಲಾಸ್ಟಿಕ್ ಬಳಕೆ ತ್ಯಜಿಸಿ ಪರಿಸರ ರಕ್ಷಿಸಿ: ಸೇರ್ವೆಗಾರ್
ಧರ್ಮಸ್ಥಳ ಗ್ರಾ.ಯೋಜನೆ ,ಕೌಶಲಾಭಿವೃದ್ಧಿ ತರಬೇತಿ ಕಾರ್ಯಾಗಾರ
Team Udayavani, Nov 21, 2019, 5:09 AM IST
ಪೆರ್ಡೂರು: ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ. ಈ ನಿಟ್ಟಿನಲ್ಲಿ ಪರಿಸರಕ್ಕೆ ಹಾನಿಕಾರಕವಾದ ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಿ ಪರಿಸರ ಸಂರಕ್ಷಿಸಲು ಧರ್ಮಸ್ಥಳ ಯೋಜನೆ ಮಹಿಳೆಯರಿಗೆ ಬಟ್ಟೆ ಮತ್ತು ಪೇಪರ್ ಬ್ಯಾಗ್ ತರಬೇತಿ ನೀಡುತ್ತಿರುವುದು ಶ್ಲಾಘನೀಯ ಎಂದು ಪೆರ್ಡೂರು ಗ್ರಾ.ಪಂ.ಉಪಾಧ್ಯಕ್ಷ ಸುರೇಶ್ ಸೇರ್ವೆಗಾರ್ ಹೇಳಿದರು.
ಇತ್ತೀಚೆಗೆ ಜರಗಿದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ,ಉಡುಪಿ ರಾಷ್ಟ್ರೀಯ ಸ್ವ-ಸಹಾಯ ಸಂಘ ತರಬೇತಿ ಸಂಸ್ಥೆ ಇವರ ಸಹಯೋಗದೊಂದಿಗೆ ಜೆ.ಎಲ್.ಜಿ/ ಎಸ್.ಎಚ್.ಜಿ/ಪಿ.ಬಿ.ಜಿ ಯ ಸದಸ್ಯರಿಗೆ ಪೆರ್ಡೂರು ಸುಬ್ರಾಯ ಕಲ್ಯಾಣ ಮಂಟಪದಲ್ಲಿ 3 ದಿನಗಳ ಕಾಲ ನಡೆಯುತ್ತಿರುವ ಬಟ್ಟೆ ಮತ್ತು ಪೇಪರ್ ಬ್ಯಾಗ್ ತಯಾರಿಯ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು. ಉಡುಪಿ ತಾಲೂಕು ಧ.ಗ್ರಾ.ಯೋಜನಾಧಿಕಾರಿ ರೋಹಿತ್ ಮಾತನಾಡಿ ಯಾವುದೇ ತರಬೇತಿ ಪ್ರಯೋಜನಕ್ಕೆ ಬರುವಂತಿರಬೇಕು.ಇಂದು ಪ್ಲಾಸ್ಟಿಕ್ ಬಳಕೆ ಕಡ್ಡಾಯವಾಗಿ ನಿಷೇಧವಾಗುತ್ತಿರುವ ಹಿನ್ನೆ°ಲೆಯಲ್ಲಿ ಪೇಪರ್ ಹಾಗೂ ಬಟ್ಟೆ ಬ್ಯಾಗ್‌ಗಳ ಬಳಕೆ ಅನಿವಾರ್ಯವಾಗಿದ್ದು ಈ ತರಬೇತಿಯಿಂದ ಸೊÌàದ್ಯೋಗ ಆರಂಭಿಸಿ ಸ್ವಾವಲಂಬಿಯಾಗಿ ಬದುಕಲು ಸಾಧ್ಯ ಎಂದರು. ಶ್ರೀ ಕ್ಷೇ.ಧ.ಗ್ರಾ.ಯೋಜನೆ ಪೆರ್ಡೂರು ವಲಯ ಒಕ್ಕೂಟದ ಅಧ್ಯಕ್ಷೆ ಮಲ್ಲಿಕಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಉಡುಪಿ ನಿಸ್ಟ್ ಕಾಲೇಜಿನ ಪ್ರಾಂಶುಪಾಲ ಅಶೋಕ್ ಕೆ, ತರಬೇತುದಾರರಾಗಿ ಕರುಣಾಕರ ಜೈನ್ ಉಪಸ್ಥಿತರಿದ್ದರು. ದ.ಗ್ರಾ.ಯೊ.ಪೆರ್ಡೂರು ವಲಯ ಮೇಲ್ವಿಚಾರಕ ಪ್ರೇಮ ಪ್ರಸಾದ್ ಸ್ವಾಗತಿಸಿ, ಉಪನ್ಯಾಸಕ ಉದಯ ಕಾರ್ಯಕ್ರಮ ನಿರೂಪಿಸಿದರು. ಜ್ಞಾನ ವಿಕಾಸ ಸಮನ್ವಯಾಧಿಕಾರಿ ಜ್ಯೋತಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.