ಅಭಿನಂದನ್ ಬಿಡುಗಡೆ ರಾಜತಾಂತ್ರಿಕ ಗೆಲುವು: ಶೋಭಾ
Team Udayavani, Mar 2, 2019, 12:30 AM IST
ಉಡುಪಿ: ಪಾಕಿಸ್ಥಾನದ ಭಯೋತ್ಪಾದಕ ಚಟುವಟಿಕೆಯನ್ನು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಬಹಿರಂಗ ಪಡಿಸುವಲ್ಲಿ ಕೇಂದ್ರ ಸರಕಾರ ಯಶಸ್ವಿಯಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ರಾಷ್ಟ್ರಗಳು ಇಂದು ಭಾರತ ಪರ ನಿಂತಿವೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರ ವಿದೇಶ ಯಾತ್ರೆಯನ್ನು ಕಾಂಗ್ರೆಸ್ ಗೇಲಿ ಮಾಡಿತ್ತು. ಆದರೆ ಪ್ರಧಾನಿ ಮೋದಿ ಅವರು ವಿದೇಶಗಳಿಗೆ ಭೇಟಿ ನೀಡಿ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಪಾಕಿಸ್ಥಾನವು ಭಯೋತ್ಪಾದಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ದೇಶ ಎಂಬುದನ್ನು ಸಾಬೀತು ಮಾಡಿದೆ. ಪಾಕಿಸ್ಥಾನವು ಅಭಿನಂದನ್ ಅವರನ್ನು ಬಿಡುಗಡೆ ಮಾಡಿರುವುದು ರಾಜತಾಂತ್ರಿಕ ಗೆಲುವಿಗೆ ಸಾಕ್ಷಿ ಯಾಗಿದೆ ಎಂದು ಹೇಳಿದರು.
ತಪ್ಪಾಗಿ ಅರ್ಥೈಸಲಾಗಿದೆ
ಬಿ.ಎಸ್. ಯಡಿಯೂರಪ್ಪ ಅವರು ಪಾಕಿಸ್ಥಾನದ ಜತೆಗಿನ ಕದನದಿಂದ 22 ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿಲ್ಲ. ಸರ್ಜಿಕಲ್ ಸ್ಟ್ರೈಕ್‌ಗೂ ಇದಕ್ಕೂ ಸಂಬಂಧವಿಲ್ಲ. ಎಲ್ಲ ಸಂದರ್ಭದಲ್ಲೂ ಅವರು 22 ಸ್ಥಾನ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದರು. ಅದನ್ನೇ ಹೇಳಿದ್ದಾರೆ. ಇದನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದರು.
ಪರಿಹಾರ ನೀಡಲಿ
ಸುವರ್ಣ ತ್ರಿಭುಜ ನಾಪತ್ತೆಯಾಗಿ 2 ತಿಂಗಳಾದರೂ ಕುರುಹು ಲಭಿಸದೇ ಇರುವುದರಿಂದ ರಾಜ್ಯ ಸರಕಾರ ಮೀನುಗಾರರ ಕುಟುಂಬಕ್ಕೆ ಪರಿಹಾರ ನೀಡಬೇಕು. ನೌಕಾದಳದ ಢಿಕ್ಕಿಯಾಗಿರುವ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ ಎಂದರು.
ಓಲೈಕೆ ರಾಜಕಾರಣ
ಎಚ್.ಡಿ. ದೇವೇಗೌಡ ಪ್ರಧಾನಿಯಾಗಿದ್ದ ಸಂದರ್ಭ ಕಾಶ್ಮೀರ ಬಿಕ್ಕಟ್ಟು ಹೆಚ್ಚಾಗಿರಲಿಲ್ಲ ಎಂಬ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಶೋಭಾ, ದೇವೇಗೌಡ ಅವರು ಕೆಲವು ತಿಂಗಳು ಮಾತ್ರ ಪ್ರಧಾನಿಯಾಗಿದ್ದರು. ಇಲ್ಲಿಯ ವರೆಗಿನ ಪ್ರಧಾನಿಗಳು ಗಡಿ ಭಾಗದ ಭಯೋತ್ಪದನೆ ಚಟುವಟಿಕೆ ಬಗ್ಗೆ ಕ್ರಮ ಕೈಗೊಳ್ಳದೆ ನಿಷ್ಕ್ರಿಯರಾಗಿದ್ದರು. ಆದರೆ ಪ್ರಧಾನಿ ಮೋದಿ ದಿಟ್ಟ ಕ್ರಮ ಕೈಗೊಂಡಿದ್ದಾರೆ. ಕುಮಾರಸ್ವಾಮಿ ಓಲೈಕೆ ರಾಜಕಾರಣ ಮಾಡುತ್ತಿದ್ದಾರೆ. ಪುಲ್ವಾಮಾ ಘಟನೆಯನ್ನು ಸಹಿಸಿಕೊಂಡು ಸುಮ್ಮನಿರಬೇಕಿತ್ತೇ ಎಂದು ಪ್ರಶ್ನಿಸಿದರು.
ಎಂಪಿ ಖಾತೆಯಿಂದ 15 ಲ. ರೂ. ಕಳವು
ಒಂದೂವರೆ ವರ್ಷದಿಂದ ನನ್ನ ಬ್ಯಾಂಕ್ ಖಾತೆಯಲ್ಲಿ ಜಮೆಯಾಗಿದ್ದ 15.62 ಲ.ರೂ. ಹಣವನ್ನು ಆನ್‌ಲೈನ್ ಮೂಲಕ ಲಪಟಾಯಿಸಲಾಗಿದೆ. ಈ ಬಗ್ಗೆ ದಿಲ್ಲಿ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. ಆತನಿಂದ 25 ಸಾವಿರ ರೂ. ಮರುಪಾವತಿಯಾಗಿದೆ. ಹಿರಿಯ ಅಧಿಕಾರಿಗಳಿಂದ ತನಿಖೆ ನಡೆಯುತ್ತಿದೆ. ನಗದು ವ್ಯವಹಾರ ಭ್ರಷ್ಟಾಚಾರಕ್ಕೆ ಕಾರಣವಾಗುತ್ತದೆ ಎಂಬ ಕಾರಣಕ್ಕೆ ಪ್ರಧಾನಿ ಕ್ಯಾಶ್‌ಲೆಸ್ ಪಾವತಿಗೆ ಆದ್ಯತೆ ನೀಡಿದ್ದಾರೆ. ಡಿಜಿಟಲ್ ಇಂಡಿಯಾ ಯಶಸ್ವಿಯಾಗುತ್ತದೆ. ಎಂದು ಶೋಭಾ ಕರಂದ್ಲಾಜೆ ಹೇಳಿದರು.
ಪಕ್ಷದ ತೀರ್ಮಾನಕ್ಕೆ ಬದ್ಧ
ಮತ್ತೂಮ್ಮೆ ಲೋಕಸಭಾ ಚುನಾವಣೆ ಸ್ಪರ್ಧಿಸುವ ಬಗ್ಗೆ ತೀರ್ಮಾನವಾಗಿಲ್ಲ. ಪಕ್ಷದ ತೀರ್ಮಾನಕ್ಕೆ ನಾನು ಬದ್ಧ. ಸ್ಪರ್ಧಿಸಬೇಕೇ ಬೇಡವೇ ಎಂಬುದನ್ನು ಹೈಕಮಾಂಡ್ ತೀರ್ಮಾನಿಸಲಿದೆ.
– ಶೋಭಾ ಕರದ್ಲಾಂಜೆ,ಉಡುಪಿ-ಚಿಕ್ಕಮಗಳೂರು ಸಂಸದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malpe: ಬೀಚ್‌ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ
Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ
Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್ ಶೆಟ್ಟಿ
Ajekar Case: ನ್ಯಾಯಾಂಗ ಬಂಧನ ವಿಸ್ತರಣೆ
Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ
MUST WATCH
ಹೊಸ ಸೇರ್ಪಡೆ
NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು
Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?
Minister Sudhakar: ಸೀಟ್ ಬ್ಲಾಕಿಂಗ್ ದಂಧೆ ವಿರುದ್ಧ ಕ್ರಿಮಿನಲ್ ಕೇಸ್ ಅಸ್ತ್ರ
Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ
Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್: ಮಹಾಯುತೀಲಿ ಬಿರುಕು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.